ಸೋಂಕಿತರ ಪ್ರಮಾಣ ಕಡಿಮೆ

Team Udayavani, Sep 24, 2020, 4:49 PM IST

cb-tdy-2

ಚಿಕ್ಕಬಳ್ಳಾಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜನರ ನೆಮ್ಮದಿಭಂಗಮಾಡಿರುವ ಮಹಾಮಾರಿ ಕೋವಿಡ್ ಸೋಂಕಿತರ ಪ್ರಮಾಣ ಬೇರೆ ಜಿಲ್ಲೆಗೆ ಹೋಲಿಸಿದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಡಿಮೆಯಾಗಿದೆ.

ಜಿಲ್ಲೆಯ 6 ತಾಲೂಕುಗಳಲ್ಲಿ 9950 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಆ ಪೈಕಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 7, ಚಿಂತಾಮಣಿ ತಾ.7, ಗೌರಿಬಿದನೂರು4, ಬಾಗೇಪಲ್ಲಿ5, ಶಿಡ್ಲಘಟ್ಟ4, ಗುಡಿಬಂಡೆ 3 ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾಕೇಂದ್ರದಲ್ಲಿ ತೆರೆದಿರುವಕೋವಿಡ್‌ಕೇರ್‌ ಆಸ್ಪತ್ರೆಯಲ್ಲಿ 150 ಹಾಸಿಗೆಗಳು ಮತ್ತು 20 ವೆಂಟಿಲೇಟರ್‌ ಸೇವೆ ಒದಗಿಸಲಾಗಿದೆ. ಅದೇ ರೀತಿ ಜಿಲ್ಲಾದ್ಯಂತ 650 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಮೀಸಲಿಡಲಾಗಿದೆ.

ಜಿಲ್ಲೆಯಲ್ಲಿ ಕಡಿಮೆ: ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಆದರೂ ಜಿಲ್ಲಾಡಳಿತ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳಿಂದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ.

ಜಿಲ್ಲೆಯಲ್ಲಿ ಇತ್ತೀಚೆಗೆ ನಗರ ಪದೇಶಗಳಿಗಿಂತಲೂ ಗ್ರಾಮಾಂತರ ಪ್ರದೇಶಗಳಲ್ಲಿ ಸೋಕಿತರ ಸಂಖ್ಯೆ ಹೆಚ್ಚಳ ವಾಗುತ್ತಿರುವುದು ಚಿಂತೆಗೀಡುಮಾಡಿದೆ. ಬೆಂಗಳೂರು ನಗರ ಪ್ರದೇಶದಲ್ಲಿ ಸಂಚ ರಿಸಿ ಬಂದಿರುವ ನಾಗ ರಿಕರಿಗೆ ಸೋಂಕು ಕಾಣಿಸಿಕೊಂಡಿದೆ ಹೊರತು ಸ್ಥಳೀಯ ಮಟ್ಟದಲ್ಲಿ ಸೋಂಕಿತರ ಪ್ರಮಾಣ ಕಡಿಮೆ ಎಂದರೆ ತಪ್ಪಾಗಲಾರದು.

ವೆಂಟಿಲೇಟರ್‌ ಸೌಲಭ್ಯ: ಜಿಲ್ಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ‌ ಸಲುವಾಗಿ ಜಿಲ್ಲಾ ಕೇಂದ್ರದಲ್ಲಿ 125 ಹಾಸಿಗೆಗಳೊಂದಿಗೆ ವೆಂಟಿಲೇ ಟರ್‌ ಸೌಲಭ್ಯ ಕಲ್ಪಿಸಲಾಗಿದೆ. ಅದೇ ರೀತಿಯ ಜಿಲ್ಲೆಯ ವಿವಿಧ ತಾಲೂಕಿನ ಸಾರ್ವಜನಿಕ ಆಸ್ಪಯಲ್ಲಿ 325 ಹಾಸಿಗೆಗಳೊಂದಿಗೆ ವೆಂಟಿಲೇಟರ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ.

166 ವೈದ್ಯರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ 166 ವೈದ್ಯರು, 320 ನರ್ಸ್‌ಗಳು, 88 ಲ್ಯಾಬ್‌ ಟೆಕ್ನೀಷಿಯನ್‌ಗಳು, 75 ಫಾರ್ಮಾಸಿಸ್ಟ್‌, 360 ಡಿ ಗ್ರೂಪ್‌ ನೌಕರರು ಹಾಗೂ 48 ಗಣಕ ಯಂತ್ರ ನಿರ್ವಾಹಕರ ಸೇÊ ೆ ಪಡೆದುಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಸೋಂಕಿತರ ಸೇವೆಯಲ್ಲಿಹಗಲಿರುಳು ತೊಡಗಿಸಿಕೊಂಡಿರುವ ವೈದ್ಯಕೀಯ ಸಿಬ್ಬಂದಿಗೆ ಯಾವುದೇ ತೊಂದರೆ ಯಾಗಿಲ್ಲ. ಸೋಂಕು ನಿಯಂತ್ರಿಸಲು ಬಿಗಿ ಕ್ರಮ ಕೈಗೊಂಡ ಜಿಲ್ಲಾಡಳಿತ ಪ್ರತಿನಿತ್ಯ 1600 ರಿಂದ 1700 ಮಂದಿಗೆಪರೀಕ್ಷೆನಡೆಸಲಾಗುತ್ತಿದೆ.ಜಿಲ್ಲಾದ್ಯಂತ ಇದುವರೆಗೆ 1.03 ಲಕ್ಷ ಮಂದಿಗೆ ಸೋಂಕಿನ ಪರೀಕ್ಷೆ ಮಾಡಲಾಗಿದೆ.

ಕೋವಿಡ್ ಕಾರ್ಯಪಡೆ ಸಕ್ರಿಯ :  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ನಗರಮತ್ತುಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕಾರ್ಯಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ತಾವು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು. ಈ ಸಂಬಂಧ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕು ನಿಯಂತ್ರಿ ಸಲು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಇತ್ತೀಚಿಗೆ ಮುನ್ನೆಚ್ಚರಿಕೆಕ್ರಮಗಳನ್ನುನಿರ್ಲಕ್ಷಿಸುತ್ತಿರುವ ನಾಗರಿಕರಿಗೆ ದಂಡ ವಿಧಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮೀಣಾ, ನಗರದಲ್ಲಿ ಜಾಗೃತಿ :  ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಸರ್ಕಾರಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಪೌರಕಾರ್ಮಿರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಅದರಲ್ಲದೇ ಕ್ಯಾನ್ಸರ್‌, ಗರ್ಭಿಣಿಯರು, ಡಯಾಲಿಸಿಸ್‌ ರೋಗಿಗಳು, ಶಸ್ತ್ರಚಿಕಿತ್ಸೆಗೆ ಒಳಪಟ್ಟ, ಅಪಘಾತದಲ್ಲಿಗಾಯಗೊಂಡಗಾಯಾಳುಗಳು, ಟಿಬಿ ಮತ್ತು ಹೆಚ್‌ಐವಿ ಪೀಡಿತ ಸೋಂಕಿತ ರಿಗೂ ಸಹ ಮುನ್ನೆಚ್ಚರಿಕೆಯಾಗಿ ಕೊರೊನಾ ಪರೀಕ್ಷೆ ನಡೆಸಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.