ಆನ್‌ಲೈನ್‌ ಪರೀಕ್ಷೆ ರದ್ದುಗೆ ಆಗ್ರಹ

Team Udayavani, Jan 15, 2020, 3:00 AM IST

online-rsdd

ಶಿಡ್ಲಘಟ್ಟ: ಆನ್‌ಲೈನ್‌ ಪರೀಕ್ಷೆ ರದ್ದುಪಡಿಸಬೇಕು, ಕಾಲೇಜಿನಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಐಟಿಐ ಕಾಲೇಜು ವಿದ್ಯಾರ್ಥಿಗಳು ಎನ್‌ಎಸ್‌ಯುಐ ಸಂಘಟನೆಯ ನೇತೃತ್ವದಲ್ಲಿ ಶಿಡ್ಲಘಟ್ಟ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನಗರದ ಇಂದಿರಾ ಕ್ಯಾಂಟೀನ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಸಾರಿಗೆ ಬಸ್‌ ನಿಲ್ದಾಣದಿಂದ ಕೋಟೆವೃತ್ತ, ಕೆಂಪಣ್ಣ ವೃತ್ತ ಹಾಗೂ ದಿಬ್ಬೂರಹಳ್ಳಿ ವೃತ್ತದ ಮೂಲಕ ಪ್ರವಾಸಿ ಮಂದಿರ ರಸ್ತೆ, ದಿಬ್ಬೂರಹಳ್ಳಿ ರಸ್ತೆಯ ಮೂಲಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಎನ್‌ಎಸ್‌ಯುಐನ ರಾಜ್ಯ ಸಂಚಾಲಕ ಕೆ.ಎನ್‌.ಮುನೀಂದ್ರ ಮಾತನಾಡಿ, ಐಟಿಐ ಕಾಲೇಜುಗಳಲ್ಲಿ ಮೂಲ ಸೌಕರ್ಯ ಇಲ್ಲ. ನೂರಾರು ವಿದ್ಯಾರ್ಥಿಗಳಿಗೆ ಕೇವಲ 3 ಕಂಪ್ಯೂಟರ್‌ಗಳಿವೆ. ಕಂಪ್ಯೂಟರ್‌ ಕಲಿಸಲು ಶಿಕ್ಷಕರ ಕೊರತೆಯಿದೆ. ಕೆಲ ಕಾಲೇಜುಗಳಲ್ಲಿ ಕಂಪ್ಯೂಟರ್‌ ಇಲ್ಲ, ಶಿಕ್ಷಕರೂ ಇಲ್ಲ. ಅಂತಹ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಜ್ಞಾನವೇ ಇರುವುದಿಲ್ಲ. ಅಂತಹದ್ದರಲ್ಲಿ ಆನ್‌ಲೈನ್‌ ಪರೀಕ್ಷೆ ನಡೆಸುವುದು ಹೇಗೆ ಎಂದು ಎಂದು ಪ್ರಶ್ನಿಸಿದರು.

ಕಾಲಾವಕಾಶ ನೀಡಲಿ: ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಂಪ್ಯೂಟರ್‌ ಹಾಗೂ ಕಂಪ್ಯೂಟರ್‌ ಶಿಕ್ಷಣ ಕೊಡಲು ಶಿಕ್ಷಕರನ್ನು ನೇಮಿಸಲಿ, ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಕಾಲಾವಕಾಶ ನೀಡಿದ ನಂತರ ಆನ್‌ಲೈನ್‌ ಪರೀಕ್ಷೆ ನಡೆಸಲಿ ಎಂದರು. ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.

ತಾಲೂಕು ಪಂಚಾಯಿತಿ ಇಒ ಬಿ.ಶಿವಕುಮಾರ್‌ ಹಾಗೂ ಶಿರಸ್ತೇದಾರ ಮಂಜುನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇಒ ಶಿವಕುಮಾರ್‌ ಮಾತನಾಡಿ, ಕಾಲೇಜಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸುತ್ತೇನೆ. ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಭರವಸೆ ನೀಡಿ ಮೊದಲು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.

ಈಗಾಗಲೇ ಶಾಸಕರ ಸೂಚನೆ ಮೇರೆಗೆ ಸಾರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೂಂದು ಬಸ್‌ ವ್ಯವಸ್ಥೆ ಕಲ್ಪಿಸಲು ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.