ಜನಸಂಖ್ಯಾ ಸ್ಫೋಟದಿಂದ ಸಂಪನ್ಮೂಲ ಕೊರತೆ, ಹಲವು ಸಮಸ್ಯೆ ಉದ್ಭವ

Team Udayavani, Jul 6, 2021, 2:18 PM IST

ಜನಸಂಖ್ಯಾ ಸ್ಫೋಟದಿಂದ ಸಂಪನ್ಮೂಲ ಕೊರತೆ, ಹಲವು ಸಮಸ್ಯೆ ಉದ್ಭವ

ಚಿಕ್ಕಬಳ್ಳಾಪುರ: ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಜಾಗೃತಿ ರಥಕ್ಕೆ ಆರೋಗ್ಯ ಇಲಾಖೆ ನಿರ್ದೇಶಕ ಡಾ.ಓಂಪ್ರಕಾಶ್‌ ಪಾಟೀಲ್‌, ಡೀಸಿ ಆರ್‌.ಲತಾ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಡೀಸಿ ಆರ್‌.ಲತಾ, ಜನಸಂಖ್ಯಾ ಸ್ಫೋಟದಿಂದ ಹಲವು ಸಾಮಾಜಿಕ ಹಾಗೂ ಆರ್ಥಿಕ ಸಮಸ್ಯೆಗಳು ಎದುರಾಗುತ್ತವೆ. ಹಾಗಾಗಿ ಜನಸಂಖ್ಯೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಾಹನವು ಜಿಲ್ಲಾದ್ಯಂತ ಸಂಚ ರಿಸಿ ಜನರಿಗೆ ಜಾಗೃತಿ ಮೂಡಿಸಲಿದೆ ಎಂದು ವಿವರಿಸಿದರು.

ಸಂಪನ್ಮೂಲಗಳ ಕೊರತೆ: ಜನಸಂಖ್ಯಾ ಹೆಚ್ಚಳದಿಂದ ಸಮಾಜದಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಜು.11ರಂದು ಪ್ರತಿವರ್ಷವೂ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ.ಈ ಕಾರ್ಯಕ್ರಮದ ಅಂಗವಾಗಿ ಜನಸಂಖ್ಯಾ ಸ್ಫೋಟದಿಂದ ಆಹಾರ, ನೀರು, ಬಟ್ಟೆ, ನೆಲ, ವಸತಿ ಹಾಗೂ ಖನಿಜಗಳ ಕೊರತೆ ಆಗಲಿದೆ ಎಂದು ಹೇಳಿದರು.

ಜನನಗಳ ಮಧ್ಯೆ 4 ವರ್ಷ ಅಂತರ ಇರಲಿ: ಜೊತೆಗೆ ಅರಣ್ಯ ನಾಶ, ಸಸ್ಯ ಸಂಪತ್ತಿನ ನಾಶ, ಬಡತನ, ನಿರುದ್ಯೋಗ ಹೆಚ್ಚಳವಾಗಲಿದೆ. ಶಿಕ್ಷಣ, ಆರೋಗ್ಯ ಸೇವೆಗಳು, ಇತರೆ ಸಂಪನ್ಮೂಲಗಳ ಕೊರತೆ ಆಗಲಿದೆ. ಜನಸಂಖ್ಯಾ ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಮದುವೆ ಆಗಲು ಗಂಡಿಗೆ 21 ವರ್ಷ, ಹೆಣ್ಣಿಗೆ 18ವರ್ಷ ತುಂಬಿರಬೇಕು. ಮದುವೆ ಆದ ನಂತರ ಕನಿಷ್ಠ 3ವರ್ಷದವರೆಗೆ ಮಗು ಪಡೆಯಬಾರದು, ಜನನಗಳನಡುವೆ ಕಡೇ ಪಕ್ಷ 4 ವರ್ಷಗಳಾದರೂ ಅಂತರವಿರಬೇಕು ಎಂದು ಹೇಳಿದರು.

ನಿಯಂತ್ರಣ ನಿಯಮ ಪಾಲಿಸಿ: ಎಲ್ಲಾ ಅರ್ಹ ದಂಪತಿಗಳು ಕುಟುಂಬ ಕಲ್ಯಾಣದ ವಿಧಾನಗಳನ್ನು ಅನುಸರಿಸಿ ಚಿಕ್ಕ ಕುಟುಂಬವನ್ನು ರೂಪಿಸಿಕೊಳ್ಳುವುದು, ಪೋಷಕರು ತಮ್ಮ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ನೀಡುವುದು ಸೇರಿ ಹಲವು ಜನನ ನಿಯಂತ್ರಣ ಕಾರ್ಯಕ್ರಮ ರೂಪಿಸಿದ್ದು.ದಂಪತಿ ಈ ಕಾರ್ಯವನ್ನು ತಪ್ಪದೇ ಪಾಲಿಸಬೇಕು ಎಂದರು.ಡಿಎಚ್‌ಒ ಡಾ.ಇಂದಿರಾ ಆರ್‌.ಕಬಾಡೆ, ಉಪನಿರ್ದೇಶಕ ಶ್ರೀಧರ್‌, ನೌಕರರ ಸಂಘದ ಅಧ್ಯಕ್ಷ ಜಿ.ಹರೀಶ್‌ ಇದ್ದರು.

ಪ್ರತಿ ವರ್ಷ 8.40 ಲಕ್ಷ ಜನ ಸಂಖ್ಯೆ ಸೇರ್ಪಡೆ: ಡಾ.ಓಂಪ್ರಕಾಶ್‌ ಪಾಟೀಲ್‌ 1951 ರಲ್ಲಿ ಕರ್ನಾಟಕದ ಜನಸಂಖ್ಯೆ 1.66 ಕೋಟಿ ಇತ್ತು. 2011ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆ 6.11ಕೋಟಿ ಇದ್ದು, ಪ್ರತಿ ವರ್ಷ 8.40 ಲಕ್ಷ ಜನಸಂಖ್ಯೆ ಸೇರಲ್ಪಡುತ್ತಿದೆ ಎಂದು ಚಾಲನೆ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಡಾ.ಓಂಪ್ರಕಾಶ್‌ಪಾಟೀಲ್‌ಹೇಳಿದರು.ಇದೇವೇಗದಲ್ಲಿ ಜನಸಂಖ್ಯೆಬೆಳೆಯುತ್ತಿದ್ದರೆ ಮುಂದಿನ 45 ವರ್ಷದಲ್ಲಿ ರಾಜ್ಯದ ಜನಸಂಖ್ಯೆಯು 12.25 ಕೋಟಿ ಆಗುವ ಸಾಧ್ಯತೆ ಇದೆ. ಬಡತನ, ಅಜ್ಞಾನ, ಮಾಹಿತಿ ಕೊರತೆ ಮೂಢನಂಬಿಕೆಗಳು, ಬಾಲ್ಯ ವಿವಾಹ, ಕಡಿಮೆ ಸಾಕ್ಷರತೆ ಪ್ರಮಾಣ ಕಾರಣಗಳಿಂದ ಜನಸಂಖ್ಯೆಯು ಹೆಚ್ಚಾಗುತ್ತಿದ್ದು. ಪ್ರತಿಯೊಬ್ಬರು ಕುಟುಂಬ ನಿಯಂತ್ರಣ ಕ್ರಮ ಪಾಲಿಸಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.