ನಿವೃತ್ತ ಕಾರ್ಮಿಕರಿಗೆ ಕನಿಷ್ಠ ಪಿಂಚಣಿಗೆ ಆಗ್ರಹ

Team Udayavani, Nov 14, 2019, 3:00 AM IST

nivrutta

ಚಿಕ್ಕಬಳ್ಳಾಪುರ: ರಾಜ್ಯದ ಭವಿಷ್ಯ ನಿಧಿ, ವಂತಿಗೆದಾರರ ಹಾಗೂ ಪಿಂಚಣಿದಾರರ ಸಂಘಟನೆ ವತಿಯಿಂದ ಮಾಸಿಕ ಕನಿಷ್ಠ 7500 ರಿಂದ 9500 ರೂ. ವರೆಗೂ ನಿವೃತ್ತ ಕಾರ್ಮಿಕರಿಗೆ ಪಿಂಚಣಿ ನೀಡುವಂತೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಆಗ್ರಹಿಸಿ 18ಕ್ಕೆ ಬೆಂಗಳೂರಿನ ಪುರ ಭವನದ ಎದುರು ಭವಿಷ್ಯ ನಿಧಿ, ವಂತಿಗೆದಾರರ ಹಾಗೂ ಪಿಂಚಣಿದಾರರ ಸಂಘಟನೆ ಸದಸ್ಯರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷ ಕೆ.ಎಂ.ಅಶ್ವತ್ಥನಾರಾಯಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕನಿಷ್ಠ ಪಿಂಚಣಿ ನೀಡಬೇಕೆಂಬ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ಪಾಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಬರುವ ಡಿ. 5 ರಿಂದ 8ರ ವರೆಗೂ ನವದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಆಯೋಜಿಸಿ ಪ್ರಧಾನಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಬದುಕು ದುಸ್ಥರ: ರಾಜ್ಯದಲ್ಲಿ 1.50 ಸಾವಿರ ನಿವೃತ್ತ ಕಾರ್ಮಿಕರು ಇದ್ದಾರೆ. ಆದರೆ ಸದ್ಯಕ್ಕೆ ನಿವೃತ್ತರಿಗೆ 750 ರಿಂದ 2000 ರೂ.ವರೆಗೂ ಮಾತ್ರ ಪಿಂಚಣಿ ಬರುತ್ತಿದೆ. ಇದರಿಂದ ಬದುಕು ನಡೆಸುವುದು ಕಷ್ಟವಾಗಿದೆ. ವಯೋಮಿತಿ ಮೀರಿರುವ ನಿವೃತ್ತ ಕಾರ್ಮಿಕರು ಸಂಕಷ್ಟದಲ್ಲಿ ಬದುಕು ನಡೆಸುವಂತಾಗಿದೆ. ಸರ್ಕಾರ ಕೊಡುವ ಪಿಂಚಣಿ ಕನಿಷ್ಠ ಮಾಸಿಕ ಮಾತ್ರೆ ಖರೀದಿಗೂ ಸಾಲುತ್ತಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದರು.

ಕಾರ್ಮಿಕರ ಹಿತ ಕಾಪಾಡುತ್ತಿಲ್ಲ: ಬಹುತೇಕರು 60 ರಿಂದ 85, 90 ವರ್ಷ ಮೇಲ್ಟಟ್ಟ ನಿವೃತ್ತ ಕಾರ್ಮಿಕರು ಇದ್ದು, ಪಿಂಚಣಿ ಹಣದಿಂದಲೇ ಬದುಕು ನಡೆಸಬೇಕಿದೆ. ಆದರೆ ಬರುತ್ತಿರುವ ಪಿಂಚಣಿ ಅತ್ಯಂತ ಕಡಿಮೆ ಇದ್ದು, ಇಂದಿನ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲಿ ಮಾಸಿಕ ಕನಿಷ್ಠ 7500 ರಿಂದ 9500 ರೂ. ನೀಡಬೇಕೆಂದು ಅಶ್ವತ್ಥನಾರಾಯಣ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ರಾಷ್ಟ್ರೀಯ ಅಧ್ಯಕ್ಷ ಅಶೋಕ್‌ ರಾವತ್‌ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆ ಸದಸ್ಯರಾದ ಸುದರ್ಶನಚಾರಿ, ಗಾಣಿಗಾರ್‌, ಆದಿನಾರಾಯಣ, ತಾತಾಚಾರಿ, ಎಂ.ನಾರಾಯಣಸ್ವಾಮಿ, ನಾಗರಾಜ್‌, ವೆಂಕಟೇಶ್‌, ರಾಮಾಂಜನೇಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರ ಭವಿಷ್ಯ ನಿಧಿ, ವಂತಿಗೆದಾರರ ಹಾಗೂ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7,500 ರಿಂದ 9,500 ರೂ.ಪಿಂಚಣಿ ಕೊಡಬೇಕು. ಇಲ್ಲದಿದ್ದರೆ ಕೇಂದ್ರದ ವಿರುದ್ಧ ನಿವೃತ್ತ ಕಾರ್ಮಿಕರು ಹೋರಾಟಕ್ಕೆ ಸಜ್ಜಾಗಬೇಕಾಗುತ್ತದೆ. 18ಕ್ಕೆ ನಡೆಯಲಿರುವ ಹೋರಾಟದಲ್ಲಿ ನಿವೃತ್ತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
-ಕೆ.ಎಂ.ಅಶ್ವತ್ಥನಾರಾಯಣ, ರಾಜ್ಯ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.