ರಾಷ್ಟ್ರಕವಿಗೆ ಅವಮಾನ : ರೋಹಿತ್ ಚಕ್ರತೀರ್ಥ, ಲಕ್ಷ್ಮಣ್ ಆಕಾಶೆ ವಿರುದ್ದ ಕ್ರಮಕ್ಕೆ ಆಗ್ರಹ


Team Udayavani, May 28, 2022, 6:04 PM IST

ರಾಷ್ಟ್ರಕವಿಗೆ ಅವಮಾನ : ರೋಹಿತ್ ಚಕ್ರತೀರ್ಥ, ಲಕ್ಷ್ಮಣ್ ಆಕಾಶೆ ವಿರುದ್ದ ಕ್ರಮಕ್ಕೆ ಆಗ್ರಹ

ಚಿಕ್ಕಬಳ್ಳಾಪುರ : ಕನ್ನಡನಾಡಿನ ಜನಮಾನಸದ ಹೃದಯಗೀತೆ ಆಗಿರುವ ನಾಡಗೀತೆಯನ್ನು ಗೇಲಿಮಾಡಿ ವಿಕೃತಗೊಳಿಸಿ ನಾಡಗೀತೆಗೆ ಅವಮಾನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ವಜಾಗೊಳಿಸಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹಳೇ ಪಠ್ಯ ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇದಿಕೆಯ ಪದಾಧಿಕಾರಿಗಳು ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಷಯವನ್ನು ಹರಡಿಸಿ ವಿಕೃತಿಯನ್ನು ಮೆರೆದಿರುವ ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಸಮಿತಿಯಿಂದ ವಜಾಗೊಳಿಸಿ ವಿದ್ಯಾರ್ಥಿಗಳ ಮನಸ್ಸನ್ನು ಕೆಡಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ಮನವಿ ಮಾಡಿದ್ದಾರೆ.

ಸರ್ವಜನಾಂಗದ ಶಾಂತಿಯ ತೋಟವೆಂದು ಹಾಡಿ ಭಾವೈಕ್ಯತೆಯನ್ನು ಮೂಡಿಸಿ ನಾಡಿನ ಜನತೆಯು ಹೆಮ್ಮೆ ಪಡುವಂತೆ ಮಾಡಿದ ಮೊದಲ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪು ಅವರು ವಿಶ್ವಮಾನವ ಸಂದೇಶವನ್ನು ತಮ್ಮ ಕೃತಿಗಳ ಮೂಲಕ ನಾಡಿನ ಜನತೆಗೆ ಸಾರಿದ ಮಹಾನುಭಾವ ಅದೇರೀತಿ ಜಡ್ಡುಕಟ್ಟಿದ ಮೌಢ್ಯವನ್ನು ತೊರೆದು ವೈಚಾರಿಕ ಚಿಂತನೆಗಳನ್ನು ಜನಮಾನಸದಲ್ಲಿ ತುಂಬಿ ಸುಂದರ ಬದುಕಿಗೆ ನಾಂದಿ ಹಾಡಿದ ಕರ್ನಾಟಕದ ರತ್ನ ಕುವೆಂಪು ಅವರನ್ನು ಅವಹೇಳನ ಮಾಡಿರುವುದು ನಾಡಿಗೆ ಮಾಡಿದ ಅಪಚಾರವಾಗಿ ಎಂದು ವೇದಿಕೆಯ ಪದಾಧಿಕಾರಿಗಳು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಹಾಡಹಗಲೇ ರಿಯಲ್​ ಎಸ್ಟೇಟ್​ ಉದ್ಯಮಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ

ಲಕ್ಷ್ಮಣ್ ಆಕಾಶೆ ಕಾರ್ಕಳ ಎಂಬ ವ್ಯಕ್ತಿ ರಾಷ್ಟ್ರಕವಿ ಕುವೆಂಪು ಅವರನ್ನು ಅತ್ಯಂತ ಕೆಟ್ಟ ಭಾಷೆ ಬಳಸಿ ನಿಂಧಿಸಿದ್ದಾನೆ ಈತನ ಬರಹಕ್ಕೆ ರೋಹಿತ್ ಚಕ್ರತೀರ್ಥರ ಕುಮ್ಮಕ್ಕು ಇರುವುದು ಲಕ್ಷ್ಮಣ ಆಕಾಶೆ ಬರಹದಲ್ಲಿ ವ್ಯಕ್ತವಾಗಿದೆ ಕುವೆಂಪು ಅವರನ್ನು ಅತ್ಯಂತ ಅಮಾನವೀಯ ಭಾಷೆಯಲ್ಲಿ ನಿಂಧಿಸಲಾಗಿದೆ ಕುವೆಂಪು ಅವರ ಸಾಹಿತ್ಯವನ್ನು ಓದಿಕೊಂಡು ಬೆಳೆದ ನಾಡಿನ ಪ್ರತಿಯೊಬ್ಬರಿಗೂ ಬಹಳ ನೋವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಹಿತ್ ಚಕ್ರತೀರ್ಥ ಮತ್ತು ಲಕ್ಷ್ಮಣ್ ಆಕಾಶೆ ಕಾರ್ಕಳ ಅವರ ಬರಹಗಳು ದುರುದ್ದೇಶದಿಂದ ಕೂಡಿದ್ದು ನಾಡಿನ ಜನತೆಯ ಸಹನೆ ಸೌಹಾರ್ಧತೆಯನ್ನು ಕೆಡಿಸುವಂತಹ ಉದ್ದೇಶದಿಂದಲೇ ಬರೆಯಲಾಗಿದ್ದು ಶಾಂತಿಯಲ್ಲಿರುವ ನಾಡಿನಲ್ಲಿ ಈ ರೀತಿಯ ಸಾಮರಸ್ಯ ಕದಡುವ ಬರಹಗಳು ಹಿಂಸೆಗೆ ಪ್ರಚೋದಿಸುವಂತಾಗಿದ್ದು ರಾಷ್ಟ್ರಕವಿಯನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ಕೂಡಲೇ ಕೈಬಿಡಬೇಕು ಮತ್ತು ಈ ತಿಂಗಳ ಅಂತ್ಯದೊಳಗೆ ರೋಹಿತ್ ಚಕ್ರತೀರ್ಥ ಕ್ಷಮೆಯಾಚಿಸಬೇಕು ಇಲ್ಲದಿದ್ದ ಪಕ್ಷದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಮಾನಮನಸ್ಕರ ವೇದಿಕೆಯ ಪದಾಧಿಕಾರಿಗಳಾದ ಯಲುವಹಳ್ಳಿ ರಮೇಶ್, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ಕೆ.ಆರ್. ರೆಡ್ಡಿ, ಚಿಕ್ಕಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೊಣ್ಣೇಗೌಡ,ಕಾಮ್ರೆಡ್ ಲಕ್ಷ್ಮಯ್ಯ, ಕ್ರೀಡಾ ಪಟ್ಟು ಶ್ರೀನಿವಾಸ್, ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.