ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

Team Udayavani, Mar 25, 2023, 1:11 PM IST

ನರೇಂದ್ರ ಮೋದಿ

ಚಿಕ್ಕಬಳ್ಳಾಪುರ: ಭಾರತದ ಅಭಿವೃದ್ಧಿ ಪಯಣದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು ಮಹತ್ತರವಾದ ಪಾತ್ರವನ್ನು ವಹಿಸುತ್ತವೆ. ಈ ಸಂಸ್ಥೆಗಳು ಕೇವಲ ಧರ್ಮ ಮತ್ತು ನಂಬಿಕೆಯ ಸಂದೇಶವನ್ನು ಹರಡಲು ಸಹಾಯ ಮಾಡಿಲ್ಲ, ಆದರೆ ಬಡವರು, ಹಿಂದುಳಿದವರು, ಬುಡಕಟ್ಟು ಮತ್ತು ಸಮಾಜದ ಇತರ ವರ್ಗಗಳನ್ನು ಸಬಲೀಕರಣಗೊಳಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹಳಿದರು.

ಅವರು ಇಂದು (ಮಾರ್ಚ್ 25) ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಗ್ರಾಮದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ಸತ್ಯಸಾಯಿ ಲೋಕಸೇವಾ ಟ್ರಸ್ಟ್​ನಿಂದ ಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಿದ್ದಾರೆ.

ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದರು.

ಇದನ್ನೂ ಓದಿ:ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

ಸಾಮೂಹಿಕ ಪ್ರಯತ್ನಗಳು ಭಾರತದ ಅಭಿವೃದ್ಧಿಯ ಕಡೆಗೆ ಅದ್ಭುತ ಫಲಿತಾಂಶಗಳನ್ನು ತರಬಹುದು, ಬಿಜೆಪಿಯು ಜನರ ಸಹಭಾಗಿತ್ವದ ಮೇಲೆ ಕೆಲಸ ಮಾಡುತ್ತದೆ ಎಂದರು.

ಭಾರತವು ತನ್ನ ‘ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುವ ಹಾದಿಯಲ್ಲಿ ನಡೆಯಲು ನಿರ್ಧರಿಸಿದೆ. ಆದರೆ ಇಷ್ಟು ಕಡಿಮೆ ಅವಧಿಯಲ್ಲಿ ಈ ಸಾಧನೆಯನ್ನು ದೇಶ ಹೇಗೆ ಸ್ವೀಕರಿಸುತ್ತದೆ ಎಂಬ ಪ್ರಶ್ನೆಗಳು ಎದ್ದಿವೆ. ಅದು ಹೇಗೆ ಕಾರ್ಯಸಾಧ್ಯವಾಗುತ್ತದೆ? ಇಂತಹ ಪ್ರಶ್ನೆಗಳಿಗೆ ಒಂದೇ ಒಂದು ಉತ್ತರ ‘ಎಲ್ಲರ ಪ್ರಯತ್ನ’ ಎಂದು ಮೋದಿ ಹೇಳಿದರು.

ಕರ್ನಾಟಕವು ಋಷಿಮುನಿಗಳು, ಆಶ್ರಮಗಳು, ಮಠಗಳ ಶ್ರೀಮಂತ ಭೂಮಿಯಾಗಿದೆ. ಈ ಪ್ರಾಚೀನ ಸಂಪ್ರದಾಯಗಳು ಇಲ್ಲಿ ಹೆಚ್ಚು ಜೀವಂತವಾಗಿವೆ. ಚಿಕ್ಕಬಳ್ಳಾಪುರದ ನಾಡು ಜನರಿಗೆ ಶಿಕ್ಷಣ ಮತ್ತು ಆರೋಗ್ಯವನ್ನು ನೀಡುವ ಮೂಲಕ ಮಾನವೀಯತೆಯ ಸೇವೆಯ ಧ್ಯೇಯವನ್ನು ಪೋಷಿಸಿದೆ. ಈ ಸಾಧನೆಗಳು ಅದ್ಭುತವಾಗಿವೆ. ಇದಲ್ಲದೆ, ಇಂದು ಇಲ್ಲಿ ಉದ್ಘಾಟನೆಗೊಳ್ಳುತ್ತಿರುವ ವೈದ್ಯಕೀಯ ಕಾಲೇಜು ಈ ಮಹಾನ್ ಧ್ಯೇಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.

ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿಗೆ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಮುದ್ದೇನಹಳ್ಳಿ ಗ್ರಾಮಕ್ಕೆ ಬಂದಿಳಿದ ಮೋದಿ, ಅಲ್ಲಿಂದ ನೇರವಾಗಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಮ್ಯೂಸಿಯಂಗೂ ಭೇಟಿ ನೀಡಿದರು.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

1-sadsa

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

kalinga1

ಕೊಟ್ಟಿಗೆಹಾರ: ಮನೆಯ ಬಳಿಯೇ ಅವಿತು ಕುಳಿತ್ತಿತ್ತು ಭಾರಿ ಗಾತ್ರದ ಕಾಳಿಂಗ ಸರ್ಪ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ