159 ಆರ್‌ಟಿಇ ಸ್ಥಾನಕ್ಕೆ ಬರೀ 28 ಅರ್ಜಿ ಸಲ್ಲಿಕೆ!

Team Udayavani, May 30, 2023, 2:49 PM IST

tdy-14

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ವರ್ಷದಿಂದ ವರ್ಷಕ್ಕೆ ಆರ್‌ಟಿಇ ಸೀಟುಗಳಿಗೆ ವಿದ್ಯಾರ್ಥಿ ಪೋಷಕರಿಂದ ಬೇಡಿಕೆ ಕುಸಿಯಲಾರಂಭಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಗೆ ಮಂಜೂರಾತಿ ಸಿಕ್ಕಿರುವ ಒಟ್ಟಾರೆ 159 ಆರ್‌ಟಿಇ ಸೀಟುಗಳಿಗೆ ಇಲ್ಲಿವರೆಗೂ ಅರ್ಜಿ ಹಾಕಿದವರ ಸಂಖ್ಯೆ ಬರೀ 28 ಮಾತ್ರ.

ಹೌದು, ಜಿಲ್ಲೆಯಲ್ಲಿ ಬುಧವಾರದಿಂದ ಶಾಲಾ ತರಗತಿಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಭರದ ಸಿದ್ಧತೆಯಲ್ಲಿ ತೊಡಗಿದೆ. ಆದರೆ ಒಂದು ಕಾಲಕ್ಕೆ ಆರ್‌ಟಿಇ ಸೀಟುಗೋಸ್ಕರ ದಿನಗಟ್ಟಲೇ ಕ್ಯೂ ನಿಲ್ಲುತ್ತಿದ್ದ ವಿದ್ಯಾರ್ಥಿ ಪೋಷಕರಿಗೆ ಈಗ ಆರ್‌ಟಿಇ ಸೀಟು ಬೇಡವಾಗಿದೆ. ಕಠಿಣ ನಿಯಮ: ರಾಜ್ಯ ಸರ್ಕಾರ ಆರ್‌ಇಟಿ ಸೀಟು ಪಡೆಯಲು ರೂಪಿಸಿರುವ ಹಲವು ಕಠಿಣ ನಿಯಮಗಳ ಹಿನ್ನೆಲೆಯಲ್ಲಿ ವರ್ಷದಿಂದ ವರ್ಷಕ್ಕೆ ಆರ್‌ಟಿಇ ಸೀಟುಗಳು ಕೇಳುವವರೇ ಇಲ್ಲವಾಗಿದೆ. ಹೀಗಾಗಿ ಈ ವರ್ಷ ಕೂಡ ಜಿಲ್ಲೆಗೆ ಮಂಜೂರಾದ ಒಟ್ಟು ಸೀಟುಗಳು ಭರ್ತಿ ಆಗುವುದು ಅನುಮಾನವಾಗಿದೆ.

ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಒಟ್ಟಾರೆ ಸೀಟುಗಳಲ್ಲಿ ಶೇ.25 ರಷ್ಟು ಸೀಟುಗಳು ಬಡ ಮಕ್ಕಳ ವ್ಯಾಸಂ ಗಕ್ಕೆ ಆರ್‌ಟಿಇ ನಡುವೆ ಅವಕಾಶ ನೀಡಬೇಕಿದೆ. ಆದರೆ, ಸರ್ಕಾರ ಜಿಲ್ಲೆಗೆ ಈ ವರ್ಷ ಕೇವಲ 159 ಆರ್‌ಇಟಿ ಸೀಟುಗಳನ್ನು ಮಂಜೂರು ಮಾಡಿದರೂ ವಿದ್ಯಾರ್ಥಿ ಪೋಷಕರಿಂದ ನಿರೀಕ್ಷಿತ ಸ್ಪಂದನೆ ಸಿಗದೇ ಇರುವುದು ವಿದ್ಯಾರ್ಥಿ ಪೋಷಕರ ಪಾಲಿಗೆ ಆರ್‌ಟಿಇ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬತಾಗಿದೆ.

ಇಲ್ಲಿವರೆಗೂ ಕೇವಲ 28 ಮಂದಿ ಮಾತ್ರ ಆರ್‌ಟಿಇ ಸೀಟು ಬಯಸಿ ಅರ್ಜಿ ಸಲ್ಲಿಸಿದ್ದು, ಇನ್ನೂ 131 ಸೀಟುಗೆ ಅರ್ಜಿ ಹಾಕದೇ ಖಾಲಿ ಉಳಿದುಕೊಂಡಿವೆ. ಇನ್ನೂ 2 ಹಂತದಲ್ಲಿ ಆಯ್ಕೆ ಪ್ರಕ್ರಿಯೆ ಲಾಟರಿ ಮೂಲಕ ನಡೆಯಲಿದ್ದು ಎಷ್ಟು ಸೀಟುಗಳು ಭರ್ತಿ ಆಗುತ್ತವೆ? ಎಷ್ಟು ಉಳಿಕೆ ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

28 ಅರ್ಜಿ ಸಲ್ಲಿಕೆ ಎಲ್ಲೆಲ್ಲಿ?: ಜಿಲ್ಲೆಯಲ್ಲಿ ಆರ್‌ ಟಿಇ ಅಡಿ ಒಟ್ಟು ಸಲ್ಲಿಕೆ ಆಗಿರುವ 28 ಅರ್ಜಿಗಳನ್ನು ವಿದ್ಯಾರ್ಥಿ ಪೋಷಕರು ಆನ್‌ ಲೈನ್‌ ಮೂಲಕವೇ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿದ್ದು, ಆ ಪೈಕಿ ಚಿಂತಾಮಣಿಯಲ್ಲಿ 13, ಚಿಕ್ಕಬಳ್ಳಾಪುರ 1, ಗೌರಿಬಿದನೂರು 5, ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 9 ಸೇರಿ 28 ಅರ್ಜಿಗಳು ಸಲ್ಲಿಕೆ ಆಗಿವೆ. ಉಳಿದಂತೆ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನಲ್ಲಿ ಒಂದೇ ಒಂದು ಅರ್ಜಿ ಸಲ್ಲಿಕೆ ಆಗಿಲ್ಲ ಎಂದು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಪ್ರಥಮ ರೌಂಡ್ಸ್‌ನಲ್ಲಿ 17 ಮಂದಿ ಆಯ್ಕೆ : ಜಿಲ್ಲೆಗೆ ಒಟ್ಟು ಮಂಜೂರಾಗಿರುವ ಆರ್‌ಟಿಇ ಸೀಟುಗಳಿಗೆ ಒಟ್ಟು 28 ಮಂದಿ ಅರ್ಜಿ ಸಲ್ಲಿಸಿದ್ದು ಆ ಪೈಕಿ ಮೊದಲ ರೌಂಡ್‌ನ‌ ಆಯ್ಕೆ ಪ್ರಕ್ರಿಯೆಯಲ್ಲಿ ಕೇವಲ 17 ಮಂದಿ ಮಾತ್ರ ಆಯ್ಕೆಗೊಂಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 1, ಚಿಂತಾಮಣಿ 9, ಗೌರಿಬಿದನೂರು 3, ಶಿಡ್ಲಘಟ್ಟ ತಾಲೂಕಿನಲ್ಲಿ 4 ಸೇರಿ ಒಟ್ಟು 17 ಮಂದಿ ಇಲ್ಲಿವರೆಗೂ ಆರ್‌ಟಿಇ ಅಡಿ ಆಯ್ಕೆಗೊಂಡಿದ್ದಾರೆ.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.