ಸಕಾಲ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಅರ್ಧಶತಕ


Team Udayavani, May 8, 2022, 4:11 PM IST

Untitled-1

ಚಿಕ್ಕಬಳ್ಳಾಪುರ: ಸಕಾಲ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ 50 ಬಾರಿ ಪ್ರಥಮ ಸ್ಥಾನಗಳಿಸಿ ಅರ್ಧ ಶತಕ ಬಾರಿಸಿದೆ. ಈ ಸಾಧನೆಗೈದ ಮತ್ತೂಂದು ಜಿಲ್ಲೆ ರಾಜ್ಯದಲ್ಲಿಲ್ಲ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದ್ದಾರೆ.

ಈ ಕುರಿತು ವರದಿ ಬಿಡುಗಡೆ ಮಾಡಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಿಗದಿತ ಕಾಲಮಿತಿಯೊಳಗೆ ಸಾರ್ವ ಜನಿಕರ ಅಹವಾಲು ಅರ್ಜಿಗಳನ್ನು ವಿಲೇವಾರಿ ಮಾ ಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆಯ 2022ರ ಏಪ್ರಿಲ್‌ ತಿಂಗಳ ಪ್ರಗತಿ ಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ 2022ರ ಏಪ್ರಿಲ್‌ ಮಾಹೆ ಯಲ್ಲೂ ಪ್ರಥಮ ಸ್ಥಾನ ಉಳಿಸಿಕೊಂಡಿದೆ ಎಂದರು.

ಜಿಲ್ಲೆಯಲ್ಲಿ ಏಪ್ರಿಲ್‌ ಮಾಹೆಯಲ್ಲಿ ಒಟ್ಟು 59,802 ಅರ್ಜಿಗಳನ್ನು ಸ್ವೀಕರಿಸಿ, ಈ ಪೈಕಿ 59,109 ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ. 2,647 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತವಾಗಿದೆ. 2,031 ಅರ್ಜಿಗಳು ವಿಲೇವಾರಿ ಬಾಕಿಯಿದೆ. ಶೀಘ್ರ ವಿಲೇವಾರಿಯಿಂದ ಜನರು ಸರ್ಕಾರಿ ಕಚೇರಿಗಳಿಗೆ ಅಲೆಯುವುದು ತಪ್ಪಿದೆ ಎಂದರು.

ಸಕಾಲ ಸಚಿವರಿಂದ ಪ್ರಶಂಸೆ: ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ಸಕಾಲ ಯೋಜನೆ ಆರಂಭದಿಂದ ಈ ವರೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು 50 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನಗಳಿಸಿದೆ.

ಒಟ್ಟಾರೆ 50 ಬಾರಿ (ಮಾಹೆ) ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ರಾಜ್ಯ ಮಟ್ಟದಲ್ಲಿ ಸಕಾಲ ಸಚಿವರಿಂದ ಪ್ರಶಂಸೆ ಪಡೆದಿರುವ ಕೀರ್ತಿಯು ಜಿಲ್ಲೆಗೆ ಸಲ್ಲುತ್ತದೆ ದಶಮಾನೋತ್ಸವ ಕಾರ್ಯಕ್ರಮದಲ್ಲೂ ಪ್ರಶಸ್ತಿ ಪಡೆದಿದೆ. ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುತ್ತಿರುವುದೇ ಈ ಸಾಧನೆಗೆ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು. ಮುಂದೆಯೂ ಹೀಗೆಯೇ ಯಶಸ್ವಿಯಾಗಿ ನಿರ್ವಹಿಸಿ ಪ್ರಥಮ ಸ್ಥಾನವನ್ನು ಕಾಪಾಡಿಕೊಳ್ಳಬೇಕೆಂದು ಪ್ರೋತ್ಸಾಹಿಸಿದರು.

ಈ ಸಾಧನೆಗೆ ಕೈಜೋಡಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಸಮಸ್ತ ಜನತೆಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಡೀಸಿ ಕೃತಜ್ಞತೆ ಅರ್ಪಿಸಿದರು.

ಏನಿದು ರ್‍ಯಾಂಕ್‌?: ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ರ್ಯಾಕಿಂಗ್‌ ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ. ಕಾಲ ಮಿತಿಯಲ್ಲಿ ಕಡತ ವಿಲೇವಾರಿಯಾಗಬೇಕು ಹಾಗೂ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರದ ಸೇವೆಗಳು ಲಭ್ಯವಾಗಲಿವೆ.

ಗಮನಾರ್ಹ ಸಾಧನೆ: ಸಕಾಲ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ನಿರಂತರ ಮುಂಚೂಣಿಯಲ್ಲಿದೆ. ಯೋಜನೆ ಆರಂಭವಾದಾಗಿನಿಂದ (2012 ರಿಂದ) ಈ ವರೆಗೆ ಸರ್ಕಾರ ಈ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಮಾಹೆಗಳ ಪೈಕಿ ಚಿಕ್ಕಬಳ್ಳಾಪುರ ರಾಜ್ಯದಲ್ಲಿಯೇ 50 ಬಾರಿ (ತಿಂಗಳು) ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲಾಡಳಿತದ ಕಾರ್ಯ ಅನುಷ್ಠಾನಕ್ಕೆ ಕೈಗನ್ನಡಿಯಾಗಿದೆ ಎಂದು ಜಿಲ್ಲಾಧಿಕಾರಿ ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.