
ಜ.1ರಿಂದ ಸರ್ಕಾರಿ ಶಾಲೆ ಪುನಾರಂಭ: ಜಿಲ್ಲಾಧಿಕಾರಿ
Team Udayavani, Dec 25, 2020, 3:29 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜ.1ರಿಂದ ಸರ್ಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ತರಗತಿಗಳು ಪ್ರಾರಂಭವಾಗಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಜತೆಗೆ ಪ್ರತಿಯೊಂದು ಶಾಲೆಗಳ ಕೊಠಡಿಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡ ಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣ ದಲ್ಲಿ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪಠ್ಯಕ್ರಮದಸಿದ್ಧತೆ ಹಾಗೂ ಜನವರಿ 1ರಿಂದ ಶಾಲೆಗಳಪ್ರಾರಂಭ ಸಂಬಂಧ ಗುರುವಾರ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ನಡೆದ ಕಾರ್ಯಾಗಾರದಲ್ಲಿ ಮಾತನಾಡಿ, ಆಯಾ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರುಪ್ರತಿಯೊಂದು ಮಗುವಿನ ಆರೋಗ್ಯದ ಬಗ್ಗೆಕಾಳಜಿ ವಹಿಸಬೇಕು. ಇದು ಆಯಾ ಶಾಲೆಗಳ ಜವಾಬ್ದಾರಿಯಾಗಿದೆ ಎಂದರು. ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮಸ್ಥಾನವನ್ನು ಹಾಗೆಯೇ ಉಳಿಸಿಕೊಳ್ಳಬೇಕು ಎಂದು ಸೂಚಿಸಿದರು.
ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡಿ: ಜಿಪಂ ಸಿಇಒ ಪಿ.ಶಿವಶಂಕರ್ ಮಾತನಾಡಿ, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಉಳಿಸಿಕೊಳ್ಳುವುದು ಸವಾಲಿನ ಕೆಲಸ. ಇದನ್ನು ಶಾಲೆಗಳ ಮುಖ್ಯಸ್ಥರು ಬದ್ಧತೆಯಿಂದ ಮಾಡಿದರೆ ಮಾತ್ರ ಆ ಗೌರವ ಉಳಿಸಿಕೊಳ್ಳಲು ಸಾಧ್ಯ. ಜನವರಿಯಿಂದ ತರಗತಿಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದರು.
ಕಾರ್ಯಾಗಾರದಲ್ಲಿ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಇಲಾಖೆ ರೂಪಿಸಿದ ವಿಷಯವಾರು ವಿಷಯ ಮಂಡಿಸಿದರು. ಇದೇ ಸಂದರ್ಭದಲ್ಲಿ ಗುಡಿಬಂಡೆ ತಾಲೂಕಿನ ಇಬ್ಬರು ಹಾಗೂಗೌರಿಬಿದನೂರು ತಾಲೂಕಿನ ಒಬ್ಬ ವಿದ್ಯಾರ್ಥಿ ನಿಯರಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿ ರ್ದೇಕ ಎಸ್.ಜಿ.ನಾಗೇಶ್, ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ತಜ್ಞರು, ಪರಿವೀಕ್ಷಕರು ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.
ಶಾಲೆಗೆ ಬರುವ ವಿದ್ಯಾರ್ಥಿಗಳ ಜೊತೆಗೆ ಎಲ್ಲಾ ಶಿಕ್ಷಕರೂ ಕೂಡ ಕೋವಿಡ್ ಟೆಸ್ಟ್‌ಮಾಡಿಸಿಕೊಳ್ಳಬೇಕು. ನೆಗೆಟಿವ್‌ವರದಿ ಬಂದವರು ಮಾತ್ರ ಶಾಲೆಗೆಹಾಜರಾಗಬೇಕು. ಮಕ್ಕಳ ಪೋಷಕರಿಂದ ಶಾಲೆಗೆ ಕಳುಹಿಸುವ ಬಗ್ಗೆ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು. – ಆರ್.ಲತಾ, ಜಿಲ್ಲಾಧಿಕಾರಿ
ಡಿಸೆಂಬರ್ 28, 29ರೊಳಗೆ ಎಲ್ಲಾ ಶಿಕ್ಷಕರು ಕೋವಿಡ್‌ಪರೀಕ್ಷೆ ಮಾಡಿಸಿಕೊಳ್ಳಬೇಕು. ಆನಂತರವಷ್ಟೇ ತರಗತಿಗಳಿಗೆ ಹಾಜರಾಗಬೇಕು. ಶಾಲೆಗಳಲ್ಲಿ ಸೋಂಕು ಪ್ರಕರಣಗಳು ಕಂಡುಬರದ ಹಾಗೆ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. –ಪಿ.ಶಿವಶಂಕರ್, ಜಿಪಂ ಸಿಇಒ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

Gokarna; ಸೆ. 27,28,29 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್