ಶಿಡ್ಲಘಟ್ಟ ಸಾರ್ವಜನಿಕ ಗ್ರಂಥಾಲಯ ಶಿಥಿಲ

ಸೋರುತ್ತಿರುವ ಜ್ಞಾನಾರ್ಜನೆ ಕೇಂದ್ರ , ಆತಂಕದಲ್ಲಿ ಓದುಗರು ,ಯಾವ ಕ್ಷಣದಲ್ಲೂ ಕುಸಿಯಬಹುದು

Team Udayavani, Oct 27, 2020, 1:32 PM IST

CB-TDY-1

ಚಿಕ್ಕಬಳ್ಳಾಪುರ: ಮಾಹಿತಿ ಮತ್ತು ತಂತ್ರಜ್ಞಾನದ ಯುಗದಲ್ಲಿ ಇ-ಲೈಬ್ರರಿಯತ್ತ ಯುವಜನತೆ ಆಕರ್ಷಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜ್ಞಾನಾ ರ್ಜನೆ ಕೇಂದ್ರವಾಗಬೇಕಿದ್ದ ಸಾರ್ವಜನಿಕ ಗ್ರಂಥಾಲಯಗಳು ಸರ್ಕಾರಗಳ ನಿರ್ಲಕ್ಷ್ಯ ದಿಂದ ತನ್ನ ಅಸ್ತಿತ್ವಕ್ಕಾಗಿ ಹೋರಾಟ ಮಾಡು ವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿರುವ ಸಾರ್ವಜನಿಕ ಗ್ರಂಥಾಲಯಕ್ಕೆಒಮ್ಮೆ ಭೇಟಿ ನೀಡಿದರೆ ಇಲ್ಲಿನ ಅವ್ಯವಸ್ಥೆಗಳ ಸಾಕ್ಷಾತ್‌ ದರ್ಶನವಾಗುತ್ತದೆ. ಹೆಸರಿಗೊಂದು ಕಟ್ಟಡವಿದ್ದು, ಶಿಥಿಲವಾಗಿದೆ. ಹೊರಗಡೆಯಿಂದ ನೋಡಿದ ನಂತರ ಒಳಗೆ ಹೋಗಲು ಸಾಹಸ ಮಾಡುವಂತಾಗಿದೆ. ಈ ಗ್ರಂಥಾಲಯದಲ್ಲಿ ಓದುಗರಿಗೆ ಅನುಕೂಲವಾಗು ವಂತಹ ಪುಸ್ತಕಗಳಿದ್ದರೂ ಸಹ ಓದುಗರು ಗ್ರಂಥಾಲಯ ದತ್ತ ಸುಳಿಯಲು ಹಿಂಜರಿಯುತ್ತಿದ್ದಾರೆ.

ನಗರ ಪ್ರದೇಶದಲ್ಲಿ ಶೋಚನೀಯ: ಉತ್ತಮ ಸಾಹಿತಿಗಳು, ಬರಹಗಾರರ ಪುಸ್ತಕಗಳು ಇಂಟರ್‌ನೆಟ್‌ನಲ್ಲಿ ದೊರೆಯುತ್ತಿರುವುದರಿಂದ ಕಾಲ ಕ್ರಮೇಣ ಸಾರ್ವಜನಿಕ ಗ್ರಂಥಾಲಯಗಳನ್ನು ಮರೆಯು ವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಗ್ರಂಥಾಲಯಗಳನ್ನು ಗ್ರಾಮ ಪಂಚಾಯಿತಿಗಳಿಗೆ ನಿರ್ವಹಣೆ ನೀಡಿ ಅದರ ಮೂಲಕ ಅಭಿವೃದ್ಧಿಗೊಳಿಸುವ ಪ್ರಯತ್ನ ನಡೆಯು ತ್ತಿದೆ. ಸಾರ್ವಜನಿಕರ ಗ್ರಂಥಾಲಯಗಳನ್ನು ಆಕರ್ಷಿ ಸಲು ಡಿಜಿಟಲ್‌ ಲೈಬ್ರರಿ ಮಾಡಲು ಪ್ರಯತ್ನಗಳು ಸಾಗಿದೆ. ಆದರೆ ನಗರ ಪ್ರದೇಶಗಳಲ್ಲಿರುವ ಸಾರ್ವಜನಿಕ ಗ್ರಂಥಾಲಯಗಳ ಸ್ಥಿತಿ ಮಾತ್ರ ಬದಲಾವಣೆಗಳು ಆಗದಿರುವುದು ದುರಂತವೇ ಸರಿ.

ಶಿಥಿಲವಾಗಿರುವ ಸೀಲಿಂಗ್‌: ಒಂದೆಡೆ ಮಳೆಯಿಂದ ಸಾರ್ವಜನಿಕ ಗ್ರಂಥಾಲಯದ ಗೋಡೆಗಳು ನೆನೆದು ತನ್ನ ಸ್ವರೂಪ ಕಳೆದುಕೊಂಡಿದ್ದು, ಚಾವಣಿಯಲ್ಲಿ ನಿರುಪಯುಕ್ತ ಗಿಡಗಂಟಿಗಳು ಬೆಳೆದುನಿಂತಿದೆ. ಹೊರಭಾಗ ಪಾಚಿ ಆವರಿಸಿ ಕಟ್ಟಡ ಯಾವ ಕ್ಷಣದಲ್ಲಿ ಕುಸಿದು ಬೀಳುತ್ತದೆ ಎಂಬ ಆತಂಕ ಓದುಗರಲ್ಲಿ ಮನೆ ಮಾಡಿದೆ. ಗ್ರಂಥಾಲಯದಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳು ಸಹ ಶಿಥಿಲ ವ್ಯವಸ್ಥೆಯಲ್ಲಿರುವ ಗ್ರಂಥಾಲಯ ನೋಡಿಕೊಂಡು ಆತಂಕದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುಂತಾಗಿದೆ.

ಮೀನಮೇಷ ಏಕೆ?: ಜಿಲ್ಲೆಯಲ್ಲಿ ಇತ್ತೀಚೆಗೆ ವ್ಯಾಪಕವಾಗಿ ಮಳೆ ಬೀಳುತ್ತಿದೆ. ಮಳೆಯ ಆರ್ಭಟಕ್ಕೆ ಚಿಂತಾಮಣಿ ತಾಲೂಕಿನಲ್ಲಿ ಮನೆ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದರೆ, ಮತ್ತೂಂದೆಡೆಮಳೆಯಿಂದ ಬಹುತೇಕ ಹಾಳಾಗಿರುವಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಗೊಳಿಸಲು ಸರ್ಕಾರ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳುಯಾಕೆ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವಂತಾಗಿದೆ.

ನೆನೆಯುತ್ತಿರುವ ಪುಸ್ತಕಗಳು: ಸಾರ್ವಜನಿಕ ಗ್ರಂಥಾಲಯ ಮಳೆಯಿಂದ ಅಸ್ತಿತ್ವಕ್ಕಾಗಿ ಹೋರಾಟ ನಡೆಸು ತ್ತಿದೆ. ಮತ್ತೂಂದೆಡೆ ಮಳೆ ಜೋರಾಗಿ ಬಿದ್ದರೇ ಎಲ್ಲಿ ಕುಸಿದು ಬೀಳುತ್ತದೆ ಎಂಬ ಆತಂಕ ಬಂದೊದಗಿದೆ. ಮಳೆ ಬಂದರೆ ಗ್ರಂಥಾಲಯ ಬಹುತೇಕ ಸೋರುತ್ತದೆ. ಇಲ್ಲಿರುವ ಬೆಲೆ ಬಾಳುವ ಪುಸ್ತಗಳನ್ನು ಸಂರಕ್ಷಣೆ ಮಾಡುವುದೇ ಸಿಬ್ಬಂದಿಗೆ ದೊಡ್ಡ ಸವಾಲಿನ ಕೆಲಸವಾಗಿದೆ. ಈಗಾಗಲೇ ಮಳೆಯಿಂದ ಪುಸ್ತಕಗಳಿಗೆ ಹಾನಿಯಾಗಿದ್ದು, ಉಳಿಸುವ ಕೆಲಸವನ್ನು ಮಾಡುತ್ತಿದ್ದಾರೆ.

25 ಸಾವಿರ ಪುಸ್ತಕ, 40 ಮಂದಿ ಓದುಗರು :  ಸಾರ್ವಜನಿಕ ಗ್ರಂಥಾಲಯದಲ್ಲಿ ಸುಮಾರು 25-28 ಸಾವಿರ ಪುಸ್ತಕಗಳಿವೆ. ಗ್ರಂಥಾಲಯದಲ್ಲಿ ಸುಮಾರು 1910 ಮಂದಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ವಿವಿಧ ಬಗೆಯ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಂಡಿದ್ದಾರೆ. ಸಾಮಾನ್ಯವಾಗಿ 11 ಕನ್ನಡ ಪತ್ರಿಕೆಗಳು, 2 ಉರ್ದು, 4 ಆಂಗ್ಲ, 4 ವಾರ, 4 ಮಾಸ ಪತ್ರಿಕೆಗಳು, ಒಂದು ಹಿಂದಿ ಪತ್ರಿಕೆ ಬರುತ್ತಿದ್ದು ಶಿಥಿಲ ವ್ಯವಸ್ಥೆಯಲ್ಲಿರುವ ಗ್ರಂಥಾಲಯಕ್ಕೆ ಸುಮಾರು 40 ಮಂದಿ ಮಾತ್ರ ಓದುಗರು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶಿಡ್ಲಘಟ್ಟ ನಗರದಲ್ಲಿ ಗ್ರಂಥಾಲಯ ಶಿಥಿಲ ವ್ಯವಸ್ಥೆಯಲ್ಲಿರುವುದು ಗಮನಕ್ಕೆ ಬಂದಿದೆ. ನೂತನ ಗ್ರಂಥಾಲಯ ನಿರ್ಮಿಸಲು ಜಾಗ ಸಹ ಇಲಾಖೆಗೆ ಹಸ್ತಾಂತರಿಸಲಾಗಿದೆ. ಯೋಜನೆ ಮತ್ತು ಅಂದಾಜು ವೆಚ್ಚದ ಕಾಮಗಾರಿಗೆ ಅನುಮೋದನೆ ಸಿಕ್ಕ ಬಳಿಕ ಕಾಮಗಾರಿ ಆರಂಭಿಸಿ ಸುಸಜ್ಜಿತ ಗ್ರಂಥಾಲಯ ನಿರ್ಮಿಸಲಾಗುವುದು. ಶಂಕರ್‌, ಜಿಲ್ಲಾ ಗ್ರಂಥಾಲಯ ಅಧಿಕಾರಿಗಳು

ಸಾರ್ವಜನಿಕ ಗ್ರಂಥಾಲಯ ಶಿಥಿಲವಾಗಿರುವ ಕುರಿತು ಇಲಾಖಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇವೆ. ಮಳೆ ಬಂದರೆ ಸೋರುವುದು ನಿಜ ಆದರೂ ಸಹ ಪುಸ್ತಕಗಳು ನೆನೆಯದಂತೆ ಎಚ್ಚರ ವಹಿಸಲಾಗಿದೆ. ಗ್ರಂಥಾಲಯಕ್ಕೆ ಬರುವಓದುಗರಿಗೆ ಹೆಸರು ನೋಂದಣಿ ಮಾಡಿರುವ ಓದುಗರ ಡಿಜಿಟಲ್‌ ಲಾಗಿನ್‌ ಮಾಡಲಾಗಿದೆ. ರಾಮಲೀಲಾ, ಗ್ರಂಥಪಾಲಕಿ, ಶಿಡ್ಲಘಟ್ಟ ಸಾರ್ವಜನಿಕ ಗ್ರಂಥಾಲಯ

ಜ್ಞಾನಾರ್ಜನೆ ಕೇಂದ್ರವಾಗಬೇಕಿದ್ದ ಸಾರ್ವಜನಿಕ ಗ್ರಂಥಾಲಯ ಶಿಥಿಲವಾಗಿ ದುಸ್ಥಿತಿಯಲ್ಲಿದೆ. ಸರ್ಕಾರ, ಗ್ರಂಥಾಲಯ ಅಧಿಕಾರಿಗಳು ಗಮನಹರಿಸಿ ಇರುವ ಗ್ರಂಥಾಲಯವನ್ನು ನೆಲಸಮಗೊಳಿಸಿ ನೂತನ ಗ್ರಂಥಾಲಯವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಗಂಜಿಗುಂಟೆ ವಸಂತಕುಮಾರ್‌, ಕರವೇ (ಪ್ರವೀಣ್‌ ಶೆಟ್ಟಿ ಬಣ) ಶಿಡ್ಲಘಟ್ಟ ತಾಲೂಕು ಅಧ್ಯಕ್ಷ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.