ಸಂವಿಧಾನದಿಂದ ಸರ್ವರಿಗೆ ಸಮಪಾಲು: ಸಚಿವ
Team Udayavani, Jan 27, 2021, 3:54 PM IST
ಚಿಕ್ಕಬಳ್ಳಾಪುರ: ಭಾರತ ಸಂವಿಧಾನ ಪ್ರತಿಯೊಬ್ಬ ಪ್ರಜೆಯ ಕಲ್ಯಾಣ ಮತ್ತು ರಾಷ್ಟ್ರದ ಏಳಿಗೆ ಬಯಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಜಿಲ್ಲಾಡಳಿತ, ಜಿಪಂ ವತಿಯಿಂದ ಮಂಗಳವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ ದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ- ಗೌರವಂದನೆ ಸ್ವೀಕರಿಸಿ ಮಾತನಾಡಿದ ಅವರು,
ಜಿಲ್ಲೆ ಎರಡನೇ ಸ್ಥಾನ: ಕೋವಿಡ್-19 ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಲಸಿಕೆ ವಿತರಣೆಯಲ್ಲೂ ಮೊದಲ ಸ್ಥಾನದಲ್ಲಿದ್ದು, ಈವರೆಗೆ 2 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಚಿಕ್ಕಬಳ್ಳಾಪುರವು ಲಸಿಕೆ ವಿತರಣೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದು, ಈವರೆಗೆ ಸುಮಾರು 5000 ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ಶುದ್ಧೀಕರಿಸಿದ ತ್ಯಾಜ್ಯ ನೀರನ್ನು ಜಿಲ್ಲೆಯ 44 ಕೆರೆಗಳಿಗೆ ಹರಿಸುವ ಯೋಜನೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಥಮ ಸ್ಥಾನ: ಮಜಿನರೇಗಾ ಯೋಜನೆಯಲ್ಲಿ ಜಿಲ್ಲೆಯಲ್ಲಿ ರೂ.233.36 ಕೋಟಿ ವೆಚ್ಚಮಾಡಿ, ಜಿಲ್ಲೆಗೆ ನೀಡಿರುವ ಗುರಿಗೆ ಅನುಗುಣವಾಗಿ ಮಾನವ ದಿನಗಳನ್ನು ಸƒಜನೆ ಮಾಡುವುದರೊಂದಿಗೆ, ರಾಜ್ಯದಲ್ಲಿಯೇ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು. ಜಿಲ್ಲೆಯಲ್ಲಿ ರೂ.650 ಕೋಟಿ ವೆಚ್ಚದಲ್ಲಿ
ವೈದ್ಯಕೀಯ ಶಿಕ್ಷಣ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ. ಆಯುಷ್
ಇಲಾಖೆಯಿಂದ ಚಿಕ್ಕಬಳ್ಳಾಪುರ ತಾಲೂಕಿನಲ್ಲಿಸುಮಾರು 8.00 ಕೋಟಿ ಮೊತ್ತದಲ್ಲಿ 5 ಹಾಸಿಗೆಯುಳ್ಳ ಆಯುಷ್ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೋವಿಡ್ ನಿಯಂತ್ರಣದಲ್ಲಿ ಉತ್ತಮ ಸೇವೆ ಮಾಡಿದ ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಪಿ.ವಿ.ರಮೇಶ್ ಮತ್ತು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಎಲ್.ವಿಜಯಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ:ಗ್ರಾಪಂ ಮೀಸಲಾತಿ ನಿಗದಿಗೆ ಕ್ಷಣಗಣನೆ
ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಪಂ ಸದಸ್ಯ ಕೇಶವರೆಡ್ಡಿ, ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಅರಸಲನ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿಗಳಾದ ಎ.ಎನ್. ರಘುನಂದನ್, ಡಿಹೆಚ್‌ಒ ಡಾ.ಇಂದಿರಾ ಆರ್ ಕಬಾಡೆ, ತಹಶೀಲ್ದಾರ್ ನಾಗಪ್ರಶಾಂತ್, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ(ಬಾಬು), ನಗರಸಭೆ ಸದಸ್ಯರು- ಪೌರಾಯುಕ್ತ ಡಿ.ಲೋಹಿತ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.