ಸುಧಾಕರ್‌ ಅನರ್ಹಗೊಂಡ ಜಿಲ್ಲೆಯ ಮೊದಲ ಶಾಸಕ

ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಶಾಸಕ • ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅನರ್ಹ ಅಸ್ತ್ರ

Team Udayavani, Jul 29, 2019, 10:58 AM IST

cb-tdy-2

ಚಿಕ್ಕಬಳ್ಳಾಪುರ: ಜಿಲ್ಲೆ ರಾಜಕಾರಣದ ಇತಿಹಾಸದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಅನರ್ಹಗೊಂಡ ಶಾಸಕ ಎಂಬ ಅಪ ಖ್ಯಾತಿಗೆ ಈಗ ಚಿಕ್ಕಬಳ್ಳಾಪುರ ಮೊದಲ ಶಾಸಕ ಡಾ.ಕೆ.ಸುಧಾಕರ್‌ ಒಳಗಾಗಿದ್ದು, ರಾಜ್ಯ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರ ಅನರ್ಹ ಪ್ರಕರಣ ಈಗ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ.

ಭಾನುವಾರ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ತುರ್ತು ಸುದ್ದಿಗೋಷ್ಠಿ ನಡೆಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಸುಧಾಕರ್‌ ಸೇರಿದಂತೆ ಕಾಂಗ್ರೆಸ್‌, ಜೆಡಿಎಸ್‌ನ 14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಹೊರಡಿಸಿದ ಆದೇಶ ರಾಜ್ಯ ರಾಜಕೀಯ ವಲಯದಲ್ಲಿ ಮಾತ್ರವಲ್ಲದೇ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ತಂದಿದೆ.

ಅತೃಪ್ತರಿಗೆ ಬಿಗ್‌ ಶಾಕ್‌: ರಾಜ್ಯ ಕಾಂಗ್ರೆಸ್‌, ಜೆಡಿಎಸ್‌ನ 14 ತಿಂಗಳ ಮೈತ್ರಿ ಸರ್ಕಾರದ ಪತನಕ್ಕೆ ರಾಜೀನಾಮೆ ಮೂಲಕ ಕಾರಣವಾದ 17 ಮಂದಿ ಕಾಂಗ್ರೆಸ್‌, ಜೆಡಿಎಸ್‌, ಪಕ್ಷೇತರ ಶಾಸಕರು ಮೈತ್ರಿ ಸರ್ಕಾರ ಪತನಗೊಂಡರೂ ಮುಂಬೈನಿಂದ ವಾಪಸ್ಸು ಆಗಿಲ್ಲ.

ಆದರೆ ಸರ್ಕಾರದ ಪತನಕ್ಕೆ ಕಾರಣವಾದ ತಮ್ಮ ಪಕ್ಷಗಳ ಶಾಸಕರನ್ನು ಅನರ್ಹಗೊಳಿಸುವಂತೆ ಆಯಾ ಪಕ್ಷಗಳ ಶಾಸ ಕಾಂಗ ಪಕ್ಷದ ನಾಯಕರು ಸ್ಪೀಕರ್‌ಗೆ ನೀಡಿದ್ದ ದೂರಿನ ಅನ್ವಯ ಸ್ಪೀಕರ್‌ ವಿಚಾರಣೆ ನಡೆಸಿ ಅನರ್ಹದ ಅಸ್ತ್ರ ಬಳಸುವ ಮೂಲಕ ಅತೃಪ್ತ ಶಾಸಕರಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ. ಅನರ್ಹಗೊಂಡಿ ರುವ ಶಾಸಕರ ಪೈಕಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ಶಾಸ ಸುಧಾಕರ್‌ ಕೂಡ ಒಬ್ಬರು ಎನ್ನುವುದು ಗಮರ್ನಾಹ ಸಂಗತಿ.

ಅನರ್ಹ ಕುಖ್ಯಾತಿ: ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕಾರಣದಲ್ಲಿ ಈ ರೀತಿಯ ಯಾವ ಶಾಸಕರು ಕೂಡ ಪಕ್ಷ ವಿರೋಧಿ ಚಟುವಟಿಕೆಗಳಿಂದ ಅನರ್ಹಗೊಂಡ ಉದಾಹರಣೆ ಇಲ್ಲ. ಪಕ್ಷ ವಿರೋಧಿ ಚಟುವಟಿಕೆಗಳಿಂದ ಪಕ್ಷದಿಂದ ಉಚ್ಛಾಟನೆ ಸೇರಿ ದಂತೆ ಚುನಾವಣೆಗಳ ಸಂದರ್ಭದಲ್ಲಿ ಭಿ ಪಾರಂ ಕಳೆದು ಕೊಂಡಿರುವುದು ಬಿಟ್ಟರೆ ಅಧಿಕಾರದಲ್ಲಿರುವಾಗಲೇ ಶಾಸಕ ಸ್ಥಾನದಿಂದ ಅನರ್ಹಗೊಂಡ ಕುಖ್ಯಾತಿಗೆ ಡಾ.ಕೆ.ಸುಧಾಕರ್‌ ಒಳಗಾಗಿದ್ದಾರೆ.

ಸುಧಾಕರ್‌ ಮುಂದಿನ ರಾಜಕೀಯ ನಡೆ ಕುರಿತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಳೆದ 2018ರ ವಿಧಾನಸಭೆಯ ಸಾರ್ವ ತ್ರಿಕ ಚುನಾವಣೆಯಲ್ಲಿ 30 ಸಾವಿರ ಅತ್ಯಧಿಕ ಮತಗಳ ಅಂತರ ದಿಂದ ಸತತ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತಗೊಂಡು ಕೊನೆ ಗಳಿಗೆಯಲ್ಲಿ ಕೈಗೆ ಬಂದ ಮಹತ್ವದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳದೇ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸರ್ಕಾರದ ಪತನಕ್ಕೆ ವರು ಸಹ ಕಾರಣರಾಗಿದ್ದರು.

ರಾಜಕೀಯ ಭವಿಷ್ಯ ಡೋಲಾಯಮಾನ: ಸದ್ಯ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಸುಧಾಕರ್‌ರ ಮುಂದಿನ ರಾಜಕೀಯ ಭವಿಷ್ಯ ಸದ್ಯಕ್ಕೆ ಡೋಲಾಯಮಾನವಾಗಿದೆ. ಅನರ್ಹದ ಬಗ್ಗೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದರೂ ಸಹ ಪ್ರಕರಣ ಇತ್ಯರ್ಥವಾಗುವವರೆಗೂ ಕ್ಷೇತ್ರದಲ್ಲಿ ಎದುರಾಗುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಹೀಗಾಗಿ ಸುಧಾಕರ್‌ ಸದ್ಯಕ್ಕೆ ರಾಜಕೀಯ ಅನಿಶ್ಚಿತತೆಯ ಕಾರ್ಮೋಡ ದಲ್ಲಿ ಕಾಲ ಕಳೆಯಬೇಕಿದೆ. ಇನ್ನೂ ಸುಧಾಕರ್‌ ಅನರ್ಹ ಪ್ರಕರಣ ಅವರ ಬೆಂಬಲಿಗರನ್ನು ಚಿಂತೆಗೀಡು ಮಾಡಿದೆ.

ಸ್ಪೀಕರ್‌ ತೀರ್ಪಿಗೆ ಪರ, ವಿರೋಧ: ಸದ್ಯ ಅತೃಪ್ತ ಶಾಸಕರ ಅನರ್ಹ ಪ್ರಕರಣ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸ್ಪೀಕರ್‌ ನಡೆ ಬಗ್ಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಕೂಡ ಪರ, ವಿರೋಧ ಚರ್ಚೆ ಆಗುತ್ತಿದೆ. ಮತ್ತೂಂದು ಕ್ಷೇತ್ರದ ಕೆಲ ಹಳೆ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸ್ಪೀಕರ್‌ ಆದೇಶ ಸಂತಸ ತಂದಿದೆ. ಸುಧಾಕರ್‌ಗೆ ತಕ್ಕಪಾಠ ಆಗಬೇಕಿದೆ.

ಪಕ್ಷದಿಂದ ಗೆದ್ದು ಪಕ್ಷಕ್ಕೆ ಮೋಸ ಮಾಡಿದರೆ ಯಾರು ಕ್ಷಮಿಸುವುದಿಲ್ಲ. ಸ್ಪೀಕರ್‌ ಎಲ್ಲಾ ಪಕ್ಷ ವಿರೋಧಿ ಚಟುವಟಿಕೆಗಳಿಗೆ ತಕ್ಕಪಾಠ ಕಲಿಸಿದ್ದಾರೆಂಬ ಮಾತು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಕ್ಷೇತ್ರಕ್ಕೆ ಉಪ ಚುನಾವಣೆ ಖಚಿತ: ಸದ್ಯಕ್ಕೆ ಸ್ಪೀಕರ್‌ ಆದೇಶ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಬರುವುದು ಖಚಿತವಾಗಿದೆ. ಸ್ಪೀಕರ್‌ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದರೂ ಇತ್ಯರ್ಥ ಆಗುವುದು ತಡವಾಗಬಹುದು. ಇದರಿಂದ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಶೀಘ್ರ ಉಪ ಚುನಾವಣೆ ನಡೆಯಬಹುದು ಎನ್ನಲಾಗುತ್ತಿದೆ. ಸುಧಾಕರ್‌ ರಾಜೀನಾಮೆ ಕೊಟ್ಟ ದಿನದಿಂದಲೂ ಟಿಕೆಟ್ಗಾಗಿ ರಾಜಕೀಯ ಪಕ್ಷಗಳ ನಾಯಕರ ಕದ ತಟ್ಟಿದ್ದಾರೆ.

ಉತ್ತಮ ಸಂಸದೀಯ ಪಟುಗಳಿಗೆ ಜಿಲ್ಲೆ ಖ್ಯಾತಿ:

ಆವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹೋರಾಟಗಳ ತವರು. ಒಂದು ಕಾಲಕ್ಕೆ ಸ್ವಾತಂತ್ರ್ಯ ಹೋರಾಟಗಾರರು ಹೆಚ್ಚಿದ್ದ ಜಿಲ್ಲೆಯೆಂಬ ಹೆಗ್ಗಳಿಕೆ ಚಿಕ್ಕಬಳ್ಳಾಪುರ, ಕೋಲಾರಕ್ಕಿದೆ. ಅದರಲ್ಲೂ ಉತ್ತಮ ಸಂಸದೀಯ ಪಟುಗಳು ಆಯ್ಕೆಗೊಂಡ ಜಿಲ್ಲೆಗಳು ಎಂಬ ಖ್ಯಾತಿ ಇಂದಿಗೂ ಇದೆ. ಕೋಲಾರದಿಂದ ವೇಮಗಲ್ ಕ್ಷೇತ್ರದ ಶಾಸಕ ಸಿ.ಬೈರೇಗೌಡ, ಮುಳಬಾಗಿಲಿನ ಶಾಸಕರಾಗಿದ್ದ ಎಂ.ವಿ.ಕೃಷ್ಣಪ್ಪ, ಎಂ.ವಿ.ವೆಂಕಟಪ್ಪ, ಗೌರಿಬಿದನೂರು ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಯ್ಯರೆಡ್ಡಿ, ಸಚಿವರಾಗಿದ್ದ ಲಕ್ಷ್ಮಿಪತಿ ಉತ್ತಮ ಸಂಸದೀಯ ಪಟುಗಳೆಂದು ಹೆಸರಾಗಿದ್ದಾರೆ. ಅದೇ ರೀತಿ ಶಿಡ್ಲಘಟ್ಟದ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮಳ್ಳೂರು ಪಾಪಣ್ಣ, ಚಿಕ್ಕಬಳ್ಳಾಪುರದ ವೆಂಕಟರವಣಪ್ಪ, ಸಿ.ವಿ.ವೆಂಕಟರಾಯಪ್ಪ, ಬಾಗೇಪಲ್ಲಿಯ ಶ್ರೀರಾಮರೆಡ್ಡಿ, ಚಿಂತಾಮಣಿಯ ಟಿ.ಕೆ.ಗಂಗಿರೆಡ್ಡಿ, ಕೆ.ಎಂ.ಕೃಷ್ಣಾರೆಡ್ಡಿರಂತಹ ಅನೇಕ ಶಾಸಕರು ಜಿಲ್ಲೆಯ ರಾಜಕಾರಣದ ಇತಿಹಾಸದಲ್ಲಿ ಉತ್ತಮ ಸಂಸದೀಯ ಪಟುಗಳಾಗಿ ಗಮನ ಸೆಳೆದಿದ್ದಾರೆ.
ಕರೆ ಸ್ವೀಕರಿಸದ ಸುಧಾಕರ್‌:

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿ ಸದ್ಯ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದ ನಾಯಕರ ದೂರಿನ ಮೇರೆಗೆ ಶಾಸಕ ಸ್ಥಾನದಿಂದ ಭಾನುವಾರ ಅನರ್ಹಗೊಂಡಿ ರುವ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ರವರ ಪ್ರತಿಕ್ರಿಯೆ ಪಡೆಯಲು ಅನೇಕ ಬಾರಿ ಡಾ.ಕೆ.ಸುಧಾಕರ್‌ರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಹಲವು ಬಾರಿ ದೂರವಾಣಿ ಕರೆ ಮಾಡಿದರೂ ಸ್ವೀಕರಿಸಲಿಲ್ಲ.
ಪ್ರತಿಕ್ರಿಯೆಗೆ ಮಾಜಿ ಸಂಸದ ಮೊಯ್ಲಿ ನಕಾರ:

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಕೆ.ಸುಧಾಕರ್‌ರನ್ನು ಸ್ಪೀಕರ್‌ ಅನರ್ಹಗೊಳಿಸಿರುವ ಕುರಿತು ಕ್ಷೇತ್ರದ ಮಾಜಿ ಸಂಸದ ಎಂ.ವೀರಪ್ಪ ಮೊಯ್ಲಿ ಅವರನ್ನು ಉದಯವಾಣಿ ಸಂಪರ್ಕಿಸಿ ಪ್ರತಿಕ್ರಿಯೆ ಕೇಳಿದರೆ, ಶಾಸಕರನ್ನು ಸ್ಪೀಕರ್‌ ಅನರ್ಹಗೊಳಿಸಿದ್ದಾರಾ ಎಂದರು. ಈ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದಾಗ ಎಲ್ಲವನ್ನು ಹೇಳುವ ಸಮಯ ಬರುತ್ತದೆ. ಕಾದು ನೋಡಿ ಎಂದರು.
ಗಮನ ಸೆಳೆದಿದ್ದ ಉದಯವಾಣಿ ಸರಣಿ ವರದಿ:

ಚಿಕ್ಕಬಳ್ಳಾಪುರ ಕ್ಷೇತ್ರದ ರಾಜಕೀಯ ವಿದ್ಯಮಾನಗಳ ಕುರಿತು ಶಾಸಕ ಡಾ.ಕೆ.ಸುಧಾಕರ್‌ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡು ಕ್ಷೇತ್ರದಲ್ಲಿ ಎದುರಾಗುವ ಉಪ ಚುನಾವಣೆ ಕುರಿತು ಉದಯವಾಣಿ ಚಿಕ್ಕಬಳ್ಳಾಪುರ ಆವೃತ್ತಿಯಲ್ಲಿ ಜು.25 ರಂದು ”ಸುಧಾಕರ್‌ಗೆ ಕಾಂಗ್ರೆಸ್‌ ಬಾಗಿಲು ಬಂದ್‌” ಶೀರ್ಷಿಕೆಯಡಿ ಹಾಗೂ ಜು.28 ರಂದು ಪ್ರಕಟಗೊಂಡಿದ್ದ ”ಚಿಕ್ಕಬಳ್ಳಾಪುರ: ತಾರಕಕ್ಕೇರಿದ ಉಪ ಚುನಾವಣೆಯ ಲೆಕ್ಕಾಚಾರ” ಶೀರ್ಷಿಕೆಯಡಿ ಮಾಡಲಾಗಿದ್ದ ವಿಶೇಷ ವರದಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿತ್ತು.

● ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.