ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ
Team Udayavani, Jan 25, 2022, 8:25 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಲಾವಿಕಲ್ ಬೋನಿನ ಶಸ್ತ್ರಚಿಕಿತ್ಸೆಗಾಗಿ ಏಳು ಸಾವಿರ ರೂಗಳನ್ನು ಲಂಚ ಸ್ವೀಕರಿಸುತ್ತಿದ್ದಾಗ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ. ಕೆ. ಸುದರ್ಶನ್ ಅವರನ್ನು ಏಳು ಸಾವಿರ ರೂಗಳ ಲಂಚ ಸ್ವೀಕರಿಸುತ್ತಿದ್ದ ಬಳಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬಾಗೇಪಲ್ಲಿ ತಾಲೂಕಿನ ದೊಡ್ಡ ಕಾರಿನಲ್ಲಿ ಗ್ರಾಮದ ನಿವಾಸಿಯೊಬ್ಬರು ತಮ್ಮ ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಬಾಗೇಪಲ್ಲಿ ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು ಶಸ್ತ್ರಚಿಕಿತ್ಸೆ ನಡೆಸಲು ಆಸ್ಪತ್ರೆಯ ಸರ್ಜನ್ ಡಾ. ಕೆ.ಸುದರ್ಶನ್ ಅವರು ಶಸ್ತ್ರಚಿಕಿತ್ಸೆಗಾಗಿ 10000 ಬೇಡಿಕೆಯನ್ನಿಟ್ಟು ಮುಂಗಡವಾಗಿ ಮೂರು ಸಾವಿರ ರೂಗಳನ್ನು ಪಡೆದುಕೊಂಡಿದ್ದರು.
ಈ ಸಂಬಂಧ ದೂರು ದಾಖಲಿಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಂ ಪ್ರವೀಣ್ ಅವರ ನೇತೃತ್ವದ ತಂಡ ಟ್ರ್ಯಾಪ್ ಕಾರ್ಯಚರಣೆ ನಡೆಸಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ.ಕೆ. ಸುದರ್ಶನ್ ಅವರನ್ನು ಏಳು ಸಾವಿರ ರೂಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ