ಮಕ್ಕಳ ಕಳ್ಳರ ವದಂತಿ ಹಬ್ಬಿಸಿದರೆ ಕೇಸ್‌ ದಾಖಲು

Team Udayavani, May 28, 2018, 1:33 PM IST

blore-11.jpg

ಚಿಕ್ಕಬಳ್ಳಾಪುರ: ಮಕ್ಕಳ ಕಳ್ಳರ ವದಂತಿ ಪ್ರಕರಣಗಳು ಜಿಲ್ಲಾದ್ಯಂತ ಸಾಕಷ್ಟ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್‌ ಇಲಾಖೆ, ಮಕ್ಕಳ ಅಪಹರಣ ಬಗ್ಗೆ ವದಂತಿಗಳನ್ನು ಹಬ್ಬಿಸಿದರೆ ಅಂತಹವರನ್ನು
ಪತ್ತೆ ಐಪಿಸಿ ಹಾಗೂ ಐಟಿ ಆಕ್ಟ್‌ನಡಿ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದೆ.

ನಗರದಲ್ಲಿ ತಮ್ಮ ಕಚೇರಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತೀಕರೆಡ್ಡಿ ಸುದ್ದಿಗೋಷ್ಠಿ ನಡೆಸಿ, ಜಿಲ್ಲೆ ಮಾತ್ರವಲ್ಲದೇ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ಯಾವುದೇ ರೀತಿಯ ಪ್ರಕರಣಗಳು ವರದಿಯಾಗಿಲ್ಲ. ಇದರಿಂದ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ವದಂತಿಗಳಿಗೆ ಜನ ಯಾರು ಕಿವಿಗೂಡಬಾರದು ಎಂದು ಮನವಿ ಮಾಡಿದರು. 

ಹಳ್ಳಿಗಳಲ್ಲಿ ಜಾಗೃತಿ: ಮಕ್ಕಳ ಕಳ್ಳರ ಬಗ್ಗೆ ಕೆಲ ನಕಲಿ ಪೋಟೋಗಳನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿರುವ ಕಾರಣ ವದಂತಿಗಳು ಜಿಲ್ಲೆ ಹಾಗೂ ಜಿಲ್ಲೆಯ ಗಡಿಭಾಗವಾದ ಆಂಧ್ರದಲ್ಲಿ ಸಹ ಹರಡಿವೆ. ಆದರೆ, ಎಲ್ಲೂ ಕೂಡ ಮಕ್ಕಳ ಅಪಹರಣದ ಪ್ರಕರಣ ಹಾಗೂ ಕೊಲೆ ಪ್ರಕರಣಗಳು ವರದಿಯಾಗಿಲ್ಲ. ಇದು ಕೇವಲ ವದಂತಿ ಅಷ್ಟೇ. ಈಗಾಗಲೇ ನಾವು ಪ್ರತಿ ಪೊಲೀಸ್‌ ಠಾಣೆ ವ್ಯಾಪ್ತಿಯಡಿ ನಮ್ಮ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಯನ್ನು ಸ್ಥಳೀಯ ಪೊಲೀಸರ ಜೊತೆಗೆ ಹಳ್ಳಿಗಳಲ್ಲಿ ನಿಯೋಜಿಸಿದ್ದೇವೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ಪೊಲೀಸರು ಹಳ್ಳಿಗಳಲ್ಲಿ ಬೀಟ್‌ ನಡೆಸುತ್ತಿದ್ದಾರೆ.

ಯಾರೇ ಅನುಮಾನಾಸ್ಪದ ವ್ಯಕ್ತಿಗಳು ನಿಮ್ಮ ಗಮಕ್ಕೆ ಬಂದರೆ ತಕ್ಷಣದ ಹತ್ತಿರ ಪೊಲೀಸ್‌ ಠಾಣೆಗೆ ಅಥವಾ ನಿಮ್ಮೂರಿನ ಬೀಟ್‌ ಪೊಲೀಸರ ಗಮನಕ್ಕೆ ತರಬೇಕು. ಆದರೆ, ಯಾರು ಕೂಡ ಕಾನೂನು ಕೈಗೆತ್ತಿಕೊಂಡು ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಹಲ್ಲೆ ನಡೆಸುವುದಾಗಲಿ ಅಥವಾ ಅವರಿಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ಮಾಡಬಾರದು ಎಂದು ಕೋರಿದರು.

ಪ್ರತಿ ಠಾಣೆ ವ್ಯಾಪ್ತಿ ಆಟೋ ಪ್ರಚಾರ: ಮಕ್ಕಳ ಕಳ್ಳರ ಬಗ್ಗೆ ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಪ್ರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಳೆದ ಎರಡು ವಾರಗಳಿಂದ ಎರಡು ಆಟೋಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕರಪತ್ರಗಳನ್ನು ಹಂಚಿ ಸುಳ್ಳು ಸುದ್ದಿಗಳಿಗೆ ಕಿವಿಗೂಡಬೇಡಿಯೆಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗುತ್ತಿದೆ. 

ಯಾರೇ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವದಂತಿಗಳನ್ನು ಹಬ್ಬಿಸುವುದು ಕಂಡು ಬಂದರೆ ಇಲಾಖೆಯ ಗಮನಕ್ಕೆ ತನ್ನಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆದರೆ, ಮಕ್ಕಳ ಕಳ್ಳರ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಜನರಿಗೆ ರಕ್ಷಣೆ ಕೊಡಲು ಜಿಲ್ಲಾ ಪೊಲೀಸ್‌ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಎಸ್ಪಿ ಕಾರ್ತೀಕರೆಡ್ಡಿ ತಿಳಿಸಿದರು.

ಸುಳ್ಳು ಸುದ್ದಿಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ಮೇಲೆ ನಿಗಾವಹಿಸಿ ಐಟಿ ಆಕ್ಟ್‌ನಡಿ ಪ್ರಕರಣ
ದಾಖಲಿಸುವ ಮೂಲಕ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ವದಂತಿ ನಂಬಬೇಡಿ  

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.