ಪ್ರಜಾಪ್ರಭುತ್ವದ ಆಶಯ ಗಾಳಿಗೆ ತೂರಿದ ಕಾಂಗ್ರೆಸ್‌; ಡಾ.ಕೆ. ಸುಧಾಕರ್‌

ಇವರು ಇದ್ಯಾವುದಕ್ಕೂ ಬೆಲೆ ಕೊಡದಿದ್ದರೆ ಸರ್ಕಾರಗಳು ಏನು ಮಾಡಬೇಕು

Team Udayavani, Jun 17, 2022, 6:13 PM IST

ಪ್ರಜಾಪ್ರಭುತ್ವದ ಆಶಯ ಗಾಳಿಗೆ ತೂರಿದ ಕಾಂಗ್ರೆಸ್‌; ಡಾ.ಕೆ. ಸುಧಾಕರ್‌

ಚಿಕ್ಕಬಳ್ಳಾಪುರ: ಸಂವಿಧಾನದ ಆಶಯಗಳನ್ನು ಕಾಂಗ್ರೆಸ್‌ ಮುಖಂಡರು ಗಾಳಿಗೆ ತೂರಿ ಬೀದಿಗಿಳಿದಿರುವುದು ವಿಪರ್ಯಾಸ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಕಿಡಿಕಾರಿದರು. ತಾಲೂಕಿನ ಕಮ್ಮಗುಟ್ಟಹಳ್ಳಿ, ಅಡ್ಡಗಲ್‌ ಗ್ರಾಪಂಗಳ ವ್ಯಾಪ್ತಿಯ ದರಬರು ಗ್ರಾಮದಲ್ಲಿ ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ ಯಾವ ವಿಷಯಕ್ಕೆ, ಯಾವ ಸಂದರ್ಭದಲ್ಲಿ ಮತ್ತು ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಮುಖ್ಯ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದೇ ತಪ್ಪು ಎಂದರೆ ಹೇಗೆ? ಈ ಹಿಂದೆ ಪ್ರಧಾನಿ ಆಗಿದ್ದವರು ವಿಚಾರಣೆ ಎದುರಿಸಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಚಾರಣೆಗೆ ಹಾಜರಾಗಿದ್ದಾಗ ಇವರು ಎಲ್ಲಿ ಹೋಗಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲು ಹೆ„ಕೋರ್ಟ್‌ ಅವಕಾಶ ನೀಡಿದೆ. ಆದರೂ, ಕಾಂಗ್ರೆಸ್ಸಿಗರು ವಿತಂಡವಾದ ಮಾಡಿ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ ಎಂದರು.

ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ನನ್ನದು: ಆರೋಗ್ಯ ಸಚಿವನಾಗಿ ಜನತೆ ಆರೋಗ್ಯ ಕಾಪಾಡುವುದು ನನ್ನ ಕರ್ತವ್ಯ ಹಾಗಾಗಿ ಇದು ಪ್ರತಿಭಟಿಸುವ ಸಮಯವಲ್ಲ. ಕೋವಿಡ್‌ ಹೆಚ್ಚಳ ಆದಲ್ಲಿ ಅದಕ್ಕೆ ಪ್ರತಿಭಟನೆ ಕಾರಣ ಆಗುತ್ತದೆ ಎಂದು ಹೇಳಿದ್ದೇನೆ. ಅದನ್ನು ಸರಿಯಿಲ್ಲ ಎಂದರೆ ಏನು ಹೇಳಬೇಕು. ಎರಡನೇ ಅಲೆಯಲ್ಲಿ ಕೋವಿಡ್‌ ತೀವ್ರವಾದಾಗ ಸರ್ಕಾರವನ್ನು ಟೀಕಿಸಿದ ಇವರು, ಮುಂದಿನ ದಿನಗಳಲ್ಲಿ ಸಮಸ್ಯೆಯಾದರೆ ಯಾರು ಹೊಣೆ ಹೊರುತ್ತಾರೆ? ಸಿದ್ದರಾಮಯ್ಯ, ಬಿ.ಕೆ. ಹರಿ ಪ್ರಸಾದ್ ,ಡಿ.ಕೆ. ಶಿವಕುಮಾರ್‌ ಜವಾಬ್ದಾರರಲ್ಲ, ಡಾ. ಸುಧಾಕರ್‌ ಮತ್ತು ಬಸವರಾಜ ಬೊಮ್ಮಾಯಿ ಜವಾಬ್ದಾರರಾಗಬೇಕು ಹಾಗಾಗಿಯೇ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡರು.

ಪ್ರತಿಭಟನೆಗಳಿಂದ ತನಿಖಾ ಸಂಸ್ಥೆಯವರು ವಿಚಾರಣೆಗೆ ಕರೆಯಬಾರದು ಎಂದು ಒತ್ತಡ ಹೇರಲು ಪ್ರತಿಭಟನೆ ಮಾಡುತ್ತಿದ್ದಾರೆ.ಪ್ರತಿಭಟನೆಯನ್ನು ಜನ ಗಮನಿಸುತ್ತಿದ್ದಾರೆ ಎಂದರು.

ಜನರಿಗೆ ತೊಂದರೆ ಕೊಟ್ಟು ಮಾಡುವ ಸಾಧನೆಯೇನು?
ದೇಶದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿದೆ ಇಂತಹ ಸಂದರ್ಭದಲ್ಲಿ ಬೀದಿ ಬೀದಿಯಲ್ಲಿ ಪ್ರತಿಭಟನೆ ಮಾಡಿ, ಸಂಚಾರಕ್ಕೆ ಅಡಚಣೆ ಮಾಡಿ, ಜನರಿಗೆ ತೊಂದರೆ ಕೊಟ್ಟು ಏನು ಸಾಧನೆ ಮಾಡಲು ಹೊರಟಿದ್ದಾರೆ. ಕಾನೂನು ಒಬ್ಬರಿಗೊಂದು, ಮತ್ತೂಬ್ಬರಿಗೆ ಇನ್ನೊಂದು ಇರಬೇಕಾ, ಸಮಾನತೆ ಬಗ್ಗೆ, ಸಾಮಾಜಿಕ ನ್ಯಾಯ, ಸಂವಿಧಾನದ ಬಗ್ಗೆ ಉಪದೇಶ ನೀಡುವ ಇವರು ಇದ್ಯಾವುದಕ್ಕೂ ಬೆಲೆ ಕೊಡದಿದ್ದರೆ ಸರ್ಕಾರಗಳು ಏನು ಮಾಡಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್‌ ಪ್ರಶ್ನಿಸಿದರು.

ಪ್ರತಿಭಟನೆ ನಡೆಸುತ್ತಿರುವ ನಾಯಕರೇ ಆತ್ಮವಿಮರ್ಶೆ ಮಾಡಿಕೊಳ್ಳಲಿ, ದೆಹಲಿಯಿಂದ ಬೆಂಗಳೂರಿನವರೆಗೂ ಅವರು ನಡೆಸಿರುವ ಪ್ರಹಸನವನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರ ತೀರ್ಮಾನ ನೀಡುತ್ತಾರೆ.
● ಡಾ. ಕೆ. ಸುಧಾಕರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.