ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

Team Udayavani, Jun 6, 2019, 3:22 PM IST

ಗೌರಬಿದನೂರು: ನೀರು ಕುಡಿಯಲು ಕೃಷಿ ಹೊಂಡದೊಳಕ್ಕೆ ಹೋಗಿದ್ದ ಮೇಕೆಯನ್ನು ಕರೆತರಲು ಹೋದ ಪ್ರೌಢಶಾಲಾ ವಿದ್ಯಾರ್ಥಿಯೊಬ್ಬ ಜಾರಿ ಹೊಂಡದೊಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲೂಕು ಇಡಗೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಇಡಗೂರು ಗ್ರಾಮದ ರಮೇಶ್‌ ಎಂಬುವವರ ಮಗ ಅಶ್ವತ್ಥನಾರಾಯಣ(15) ಎಂದು ಗುರುತಿಸಲಾಗಿದೆ. ಇಡಗೂರು ಭೀಮೇಶ್ವರ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಅಶ್ವತ್ಥನಾರಾಯಣ ಬುಧವಾರ ಶಾಲೆಗೆ ರಜೆ ಇದ್ದುದ‌ರಿಂದ ತನ್ನ ಮನೆಯಲ್ಲಿ ಮೇಕೆಗಳನ್ನು ಮೇಯಿಸಲು ಹೋಗಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ನೀರು ಕುಡಿಯಲು ಹೋದ ಮೇಕೆಯನ್ನು ವಾಪಸ್‌ ಕರೆತರಲು ಹೋದಾಗ ದುರ್ಘ‌ಟನೆ ಸಂಭವಿಸಿದೆ. ಸ್ಥಳೀಯರು ಪೋಲೀಸರಿಗೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸುದ್ದಿ ತಿಳಿಸಿದ ನಂತರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ಮುಂದುವರಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ