ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿ ಅಸಾಧ್ಯ

Team Udayavani, Feb 19, 2019, 7:40 AM IST

cong-dev.jpg

ಗೌರಿಬಿದನೂರು: ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್‌ ಪಕ್ಷ ಆರು ದಶಕ ದೇಶದಲ್ಲಿ ಆಡಳಿತ ನಡೆಸಿದೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯ, ಪ್ರಧಾನಿ ನರೇಂದ್ರ ಮೋದಿ ಅವರು 5 ವರ್ಷಗಳ ಆಡಳಿತದಲ್ಲಿ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಿದೆ ಎಂದು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿಶೆಟ್ಟಿ ಹೇಳಿದರು.

ನಗರದ ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರ ಸಮಾವೇಶ  ಉದ್ಘಾಟಿಸಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯವನ್ನು ಮೋದಿ ಸರ್ಕಾರ ಕೊಡಲಿದೆ. ಬಿಜೆಪಿ ಮಹಿಳೆಯರನ್ನು ಗೌರವಿಸುವ ಪಕ್ಷವಾಗಿದ್ದು,ಮಹತ್ವದ ರಕ್ಷಣಾ ಇಲಾಖೆಯ ಹೊಣೆಯನ್ನು ಮಹಿಳೆಗೆ ಕೊಟ್ಟಿರುವುದೇ ಸಾಕ್ಷಿಯಾಗಿದೆ ಎಂದರು.

ವೋಟ್‌ ಬ್ಯಾಂಕ್‌ ರಾಜಕಾರಣ: ಬಿಜೆಪಿ ಸರ್ಕಾರ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಿಕೊಂಡು ಬಂದಿಲ್ಲ, ಜನರ ಮಧ್ಯದಲ್ಲಿ ಬೆರೆತು ಬೆಳೆದು ಬಂದಿರುವ ಪಕ್ಷವಾಗಿದ್ದು, ತನ್ನದೇ ಆದ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬಂದಿದೆ ಎಂದು ಹೇಳಿದರು. 

ಕಣ್ಣೀರು ಒರೆಸುವ ಸಿಎಂ ಬೇಕು: ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಕಣ್ಣೀರು ಸುರಿಸಿಕೊಂಡು ಜನರನ್ನು ಮರಳು ಮಾಡುತ್ತಿದ್ದಾರೆ. ನಮಗೆ ಕಣ್ಣೀರು ಸುರಿಸುವ ಸಿಎಂ ಬೇಡ, ಕಣ್ಣೀರು ಒರೆಸುವ ಸಿಎಂ ಬೇಕು ಎಂದರು.

ಎತ್ತಿನಹೊಳೆ ಭಾಷಣಕ್ಕಷ್ಟೆ: ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಕ್ಷೇತ್ರ ಇದಾಗಿದ್ದು ಇಂತಹ ಪುಣ್ಯಭೂಮಿಯಲ್ಲಿ ನಾವಿದ್ದೇವೆ ಎಂದು ಹೇಳಿದರು. ಸಂಸದ ವೀರಪ್ಪಮೊಯ್ಲಿಯವರು ಎರಡು ಲೋಕಸಭಾ ಚುನಾವಣೆಯಲ್ಲೂ ಸಹ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ಗೆಲುವು ಸಾಧಿಸಿದರು. ಆದರೆ ಕ್ಷೇತ್ರದ ಅಭಿವೃದ್ಧಿಯೂ ಇಲ್ಲ, ಎತ್ತಿನಹೊಳೆ ನೀರು ಸಹ ಹರಿಯಲಿಲ್ಲ ಎಂದು ಲೇವಡಿ ಮಾಡಿದರು. 

ಹಿರಿಯೂರು ಶಾಸಕಿ ಪೂರ್ಣಿಮಾ ಮಾತನಾಡಿದರು. ಮಾಜಿ ಶಾಸಕಿ ಎನ್‌.ಜ್ಯೋತಿರೆಡ್ಡಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎನ್‌.ಎಂ.ರವಿನಾರಾಯಣರೆಡ್ಡಿ, ಬಿಜೆಪಿ ತಾಲೂಕು ಅಧ್ಯಕ್ಷ ವೇಮಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿರ್ಮಾಲಾ, ಮುಖಂಡರಾದ ಜಯಲಕ್ಷ್ಮಮ್ಮ, ಮಂಜುಳಾ ಸುರೇಶ್‌, ಆರ್‌.ಮುನಿಲಕ್ಷ್ಮಮ್ಮ, ಶೋಭಾ, ಚೈತ್ರಾ, ಗಂಗಲಕ್ಷ್ಮಮ್ಮ, ಸವಿತಾ, ಮೋಹನ್‌, ನಾರಾಯಣರೆಡ್ಡಿ, ಜಯಣ್ಣ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಹುತಾತ್ಮ ಯೋಧ‌ರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.