ವಿದ್ಯಾರ್ಥಿಗಳು, ಶಿಕ್ಷಕರ ಶ್ರಮದಿಂದ ಜಿಲ್ಲೆಗೆ ಪ್ರಥಮ ಸ್ಥಾನ
Team Udayavani, Aug 28, 2020, 4:41 PM IST
ಶಿಡ್ಲಘಟ್ಟ: ಕೋವಿಡ್ ಸಂಕಷ್ಟ ನಡುವೆಯೂ ವಿದ್ಯಾರ್ಥಿಗಳು, ಕಠಿಣ ಶ್ರಮ ವಹಿಸಿದ್ದಾರೆ. ಶಿಕ್ಷಕರು ಮಕ್ಕಳ ಮನೆಗಳ ಬಳಿಗೆ ತೆರಳಿ, ಆನ್‌ಲೈನ್ ಮೂಲಕ, ವಿಡಿಯೋ ಪಾಠಗಳ ಮೂಲಕ ಪ್ರೇರೇಪಿಸಿದ ಫಲವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಯಿತು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್. ಜಿ.ನಾಗೇಶ್ ತಿಳಿಸಿದರು.
ನಗರದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲಾ ಆವರಣದಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ ಸಾಧನಾ ಸ್ಪೂರ್ತಿ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ, ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಮಾತನಾಡಿ, ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿರುವುದು ಶಿಕ್ಷಕರ ಕಾರ್ಯವೈಖರಿಗೆ ಸಿಕ್ಕ ಪ್ರೋತ್ಸಾಹವಾಗಿದ್ದು, ಮುಂದಿನ ಸಾಲಿನ ಫಲಿತಾಂಶ ಉತ್ತಮಪಡಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಲ್ಲಾ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರನ್ನು ಅಭಿನಂದಿಸಲಾಯಿತು, ಜಿಲ್ಲಾ ಉಪನಿರ್ದೇ ಶಕರ ಕಚೇರಿಯ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ವಿಷಯ ಪರಿವೀಕ್ಷಕಿ ಕೃಷ್ಣಕುಮಾರಿ, ಅಕ್ಷರ ದಾಸೋಹ ತಾಲೂಕು ಸಹಾಯಕ ನಿರ್ದೇಶಕ ಆಂಜನೇಯ, ಶಿಕ್ಷಣ ಸಂಯೋಜಕ ಭಾಸ್ಕರಗೌಡ, ಪರಿಮಳಾ, ತಾಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಕಾರ್ಯದರ್ಶಿ ಎಲ್.ವೆಂಕಟರೆಡ್ಡಿ, ಬಿಜಿಎಸ್ ಕಾಲೇಜಿನ ಪ್ರಾಂಶು ಪಾಲ ಮಹದೇವ್, ವಿವಿಧ ವಿಷಯಗಳ ಸಂಪನ್ಮೂಲ ಶಿಕ್ಷಕರ ತಂಡದ ಸದಸ್ಯರು, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಆಡಳಿತ ಮಂಡ ಳಿಯ ಪದಾಧಿಕಾರಿಗಳು, ತಮೀಮ್ ಅನ್ಸಾರಿ, ತಾಲೂ ಕಿನ ಎಲ್ಲಾ ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಸಹ ಶಿಕ್ಷಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ