ದಶಕ ಕಳೆದರೂ ಡಾಂಬರ್‌ ಕಾಣದ ಮಾಡಪ್ಪಲ್ಲಿ ರಸ್ತೆ

Team Udayavani, Jul 14, 2019, 3:00 AM IST

dashaka

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಿಂದುಳಿದ ತಾಲೂಕಾಗಿರುವ ಬಾಗೇಪಲ್ಲಿಯ ಬಹಳಷ್ಟು ಗ್ರಾಮಗಳು ಇಂದಿಗೂ ಕುಗ್ರಾಮಗಳಾಗಿಯೇ ಭಾಸವಾಗುತ್ತಿವೆ. ಅಧಿಕಾರ ಶಾಹಿಯ ನಿರ್ಲಕ್ಷ್ಯವೋ ಅಥವಾ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯೋ ಏನೋ ದಶಕಗಳು ಹುರುಳಿದರೂ ಕೆಲ ಗ್ರಾಮಗಳು ಡಾಂಬರ್‌ ಕಂಡಿಲ್ಲ.

ಬಾಗೇಪಲ್ಲಿ ತಾಲೂಕಿನ ಕೊತ್ತಪಲ್ಲಿ ಗ್ರಾಪಂ ವ್ಯಾಪ್ತಿಯ ಮಾಡಪ್ಪಲ್ಲಿ ಗ್ರಾಮದ ನತದೃಷ್ಟವೋ ಏನೋ ಹಲವು ವರ್ಷಗಳಿಂದಲೂ ರಸ್ತೆ ಡಾಂಬರೀಕರಣವಾಗದೆ ಗ್ರಾಮಸ್ಥರು ಮುಳ್ಳಿನಂತೆ ಇರುವ ಜೆಲ್ಲಿ ಕಲ್ಲುಗಳ ಮೇಲೆ ಓಡಾಡುವ ದುಸ್ಥಿತಿ ಎದುರಾಗಿದೆ. ಎಷ್ಟೇ ಕಾಡಿ ಬೇಡಿದರೂ ಜನಪ್ರತಿನಿಧಿಗಳು ಇತ್ತ ಕಡೆಗೆ ತಿರುಗಿ ನೋಡುತ್ತಿಲ್ಲ ಎಂಬ ಆರೋಪ, ಅಸಹಾಯಕತೆನ್ನು ಗ್ರಾಮಸ್ಥರು ವ್ಯಕ್ತಪಡಿಸುತ್ತಿದ್ದಾರೆ.

ಜಲ್ಲಿ-ಕಲ್ಲುಗಳ ಮೇಲೆಯೇ ನಡೆದಾಟ: ಪ್ರತಿನಿತ್ಯ ಶಾಲೆಗೆ ಹೋಗುವ ಮಕ್ಕಳು ಬಹಳಷ್ಟು ಬಡ ಮಕ್ಕಳಿದ್ದು, ಮುಳ್ಳಿನಂತೆ ಸುರಿದಿರುವ ದೊಡ್ಡ ಜಲ್ಲಿಕಲ್ಲುಗಳ ಮೇಲೆಯೇ ನಡೆದಾಡಬೇಕು. ದ್ವಿಚಕ್ರ ವಾಹನ ಸವಾರರು ಪಂಚರ್‌ಗೆಂದೇ ಇಂತಿಷ್ಟು ಪ್ರಮಾಣದ ಹಣದ ವ್ಯವಸ್ಥೆ ಮಾಡಿಕೊಂಡು ಜೇಬಿನಲ್ಲಿಟ್ಟು ಕೊಂಡಿರಬೇಕಾಗಿದೆ.

ಚುನಾವಣೆ ವೇಳೆ ಭೇಟಿ: ನಮ್ಮ ಗ್ರಾಮ ರಾಜಕಾರಣಿಗಳಿಗೆ ನೆನಪಾಗುವುದು ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ಎಂದು ಗ್ರಾಮದ ರಸ್ತೆಯ ಅವ್ಯವಸ್ಥೆಯನ್ನು ನೋಡಿ ಗ್ರಾಮದ ನರಸಿಂಹಮ್ಮಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು. ಗೆದ್ದ ಮೇಲೆ ಮಾಡಪ್ಪಲ್ಲಿ ಎಂಬ ಗ್ರಾಮವೂ ಇದೆಯೇ? ಎಂಬ ಪ್ರಶ್ನೆ ಮೂಡತ್ತದೆ. ಇದೊಂದು ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಗ್ರಾಮ. ನಮ್ಮೂರಲ್ಲಿ 500 ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಬಹುತೇಕ ಅನಾನುಕೂಲಗಳಿಂದಲೇ ಬದುಕು ಕಟ್ಟಿಕೊಂಡಿದ್ದಾರೆ ಇಲ್ಲಿಯ ಜನತೆ.

ಕುಡಿಯಲು ಶುದ್ಧವಾದ ನೀರು ಸಿಗುತ್ತಿಲ್ಲ. ಊರಿನ ಸುತ್ತಲೂ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳಿಂದಾಗಿ ಉಸಿರಾಡುವ ಗಾಳಿಯೂ ದೂಳುಮಯವಾಗಿದೆ. ಯಾವುದೇ ರೀತಿಯ ಸಾರ್ವಜನಿಕ ಸಾರಿಗೆ ಸೌಲಭ್ಯಗಳಿಲ್ಲದೇ ದ್ವಿಚಕ್ರ ವಾಹನಗಳನ್ನೇ ನೆಚ್ಚಿಕೊಂಡಿದ್ದೇವೆ. ಹದಗೆಟ್ಟ ರಸ್ತೆಯಿಂದಾಗಿ ಸಂಚರಿಸಲು ನರಕಯಾತನೆ ಅನುಭವಿಸುವಂತಾಗಿದೆ ಎಂದು ಉದಯವಾಣಿಗೆ ವಿವರಿಸಿದರು.

ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಬದಲಾವಣೆಯಾಗಲಿಲ್ಲ ಎಂದು ಗ್ರಾಮಸ್ಥರು ಸ್ಥಳೀಯ ಶಾಸಕರ ಹಾದಿಯಾಗಿ ಗ್ರಾಪಂ ತಾಪಂ, ಜಿಪಂ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಿಎಂ ಕಚೇರಿ ಸೂಚಿಸಿದರೂ ರಸ್ತೆ ದುರಸ್ತಿ ಇಲ್ಲ: ರಸ್ತೆ ಸರಿಪಡಿಸುವಂತೆ ಗ್ರಾಮದ ನಿವಾಸಿಯೊಬ್ಬರು ಇ-ಮೇಲ್‌ ಮೂಲಕ ಪ್ರಧಾನಮಂತ್ರಿ ಕಚೇರಿಗೆ ದೂರು ನೀಡದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಕಚೇರಿ, ಶೀಘ್ರವೇ ರಸ್ತೆ ದುರಸ್ತಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಆದರೂ ದುರಸ್ತಿಪಡಿಸದ ಸ್ಥಳೀಯ ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ನರೇಗಾ ಯೋಜನೆಯಡಿಯಲ್ಲಿ ಈ ರಸ್ತೆಯನ್ನು ದುರಸ್ತಿ ಮಾಡಿರುವ ಬಗ್ಗೆ ಖಾತ್ರಿಯಾಗಿದೆಯಾದರೂ ಮಣ್ಣಿನ ರಸ್ತೆ ಗುಣಮಟ್ಟದಲ್ಲಿ ಮತ್ತಷ್ಟು ದುಸ್ಥಿತಿಗೆ ಜಾರಿದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.