ಗಡಿಗಳಲ್ಲಿ ಕಟ್ಟೆಚ್ಚರ ವಹಿಸಿ
Team Udayavani, May 3, 2020, 5:16 PM IST
ಚಿಕ್ಕಬಳ್ಳಾಪುರ: ಕೋವಿಡ್ 19 ವೈರಸ್ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಿಂದ ಬರುವ ಜನರ ಮೇಲೆ ಹೆಚ್ಚು ನಿಗಾ ವಹಿಸುವುದರ ಜೊತೆಗೆ ಕಟ್ಟೆಚ್ಚೆರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಜಿಲ್ಲೆಯ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್-19 ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಿಂದ ಹೊರಗೆ ಹೋಗುವಂತಹ ಕಾರ್ಮಿಕರು ಹಾಗೂ ಜಿಲ್ಲೆಗೆ ಬರುವಂತಹ ಕಾರ್ಮಿಕರು ಸೇವಾ ಸಿಂಧು ವೆಬ್ ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಕಾರ್ಮಿಕರನ್ನು ಅವರ ಸ್ಥಳಗಳಿಗೆ ಹಿಂತಿರುಗುಲು ಜಿಲ್ಲಾಡಳಿತ ಅನುಮತಿ ನೀಡಲಾಗುತ್ತದೆ. ಕಾರ್ಮಿಕರು ತೆರಳಲು ಸರ್ಕಾರಿ ಬಸ್ ಅಥವಾ ರೈಲಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.
ಕೇಂದ್ರ ಸರ್ಕಾರದ ಆದೇಶದಂತೆ ವಲಸೆ ಕಾರ್ಮಿಕರನ್ನು ತಮ್ಮ ವಾಸಸ್ಥಳಗಳಿಗೆ ಹೋಗಲು ಅವಕಾಶ ನೀಡಲಾಗಿದೆ. ಅಂತಾರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಜಿಲ್ಲೆಗೆ ಬರುವಂತಹ ಪ್ರತಿಯೊಬ್ಬ ಕಾರ್ಮಿಕರನ್ನು ತಪಾಸಣೆಗೆ ಒಳಪಡಿಸಲಾಗುವುದು ಹಾಗೂ 14 ದಿನಗಳ ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಆರತಿ, ಚಿಕ್ಕಬಳ್ಳಾಪುರ ಕೋವಿಡ್-19 ವಿಶೇಷ ನೋಡಲ್ ಅಧಿಕಾರಿ ಡಾ.ಎನ್.ಭಾಸ್ಕರ್, ಜಿಲ್ಲಾ ಆರೋಗ್ಯಾಧಿಕಾರಿ ಬಿ.ಎಂ.ಯೋಗೇಶ್ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ