ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಲಗ್ಗೆ, ಅಂತರಕ್ಕೆ ಬ್ರೇಕ್‌

ರಸ್ತೆ ಮಧ್ಯೆಕಾರು ಮೇಲೆಕುಳಿತು ಮದ್ಯಪಾನ | ಮಾಸ್ಕ್ ಧರಿಸದವರಿಗೆ ದಂಡ

Team Udayavani, Oct 5, 2020, 4:16 PM IST

ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಲಗ್ಗೆ, ಅಂತರಕ್ಕೆ ಬ್ರೇಕ್‌

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಸಾಮಾಜಿಕ ಅಂತರ ಮರೆತು ಪ್ರಾಕೃತಿಕ ಸೊಬಗನ್ನು ಆನಂದಿಸುತ್ತಿರುವ ಪ್ರವಾಸಿಗರು

ಚಿಕ್ಕಬಳ್ಳಾಪುರ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ಐತಿಹಾಸಿಕ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ವೀಕೆಂಡ್‌ನ‌ಲ್ಲಿ ಸಹಸ್ರಾರು ಪ್ರವಾಸಿಗರು ಧಾವಿಸಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಇಟ್ಟು ಗೋ ಕೋವಿಡ್  ಎಂಬುವ ಬದಲಿಗೆ ಬಾ ಕೋವಿಡ್ ಎಂಬ ರೀತಿಯಲ್ಲಿ ವರ್ತಿಸಿದ್ದಾರೆ.

ಇನ್ನೂಕೆಲ ಪ್ರವಾಸಿಗರು ರಾಜರೋಷವಾಗಿ ಕಾರು ಮೇಲೆ ಕುಳಿತು ಮದ್ಯಪಾನ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡು ಇನ್ನಿತರೆ ಪ್ರವಾಸಿಗರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳಿಗೆ ತಿಲಾಂಜಲಿ: ಕೋವಿಡ್ ಸೋಂಕು ನಿಯಂತ್ರಿಸುವ ಜೊತೆಗೆ ಜನಜೀವನ ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಅನ್‌ಲಾಕ್‌-5 ಜಾರಿಗೊಳಿಸಿದ ಪರಿಣಾಮ ವಿಶ್ವ ವಿಖ್ಯಾತ ನಂದಿ ಗಿರಿಧಾ ಮದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟಿನಿಟ್ಟಿನಿಂದ ಪಾಲಿಸಲು ನಿರ್ದೇಶನ ನೀಡಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಪ್ರವೇಶ ಮುಕ್ತಗೊಳಿಸಿತು. ಆದರೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡುವ ಬದಲಿಗೆ ಸೊರ್ಯೋದಯವನ್ನು ಆನಂದಿಸುವ ಭರದಲ್ಲಿ ಮುನ್ನೆಚ್ಚರಿಕೆ ಕ್ರಮಗಳಿಗೆ ತಿಲಾಂಜಲಿ ಇಟ್ಟಿದ್ದಾರೆ.

ಬಾನೆಟ್‌ ಮೇಲೆ ಕುಳಿತು ಮದ್ಯಪಾನ: ಭಾನುವಾರ ಬೆಂಗಳೂರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಬಂದ ಪ್ರವಾಸಿಗರು ಕೋವಿಡ್ ಸೋಂಕು ನಿಯಂತ್ರಿಸಲುಕೈಗೊಳ್ಳಬೇಕಾದ ಕ್ರಮಗಳನ್ನು ಪಾಲಿಸಿಲ್ಲ. ಬಹುತೇಕ ಪ್ರವಾಸಿಗರು ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಇಲ್ಲವೇ ಇಲ್ಲ. ಇವೆಲ್ಲದರ ಮಧ್ಯೆ ಕೆಲವರು ರಸ್ತೆಯ ಮಧ್ಯೆ ಕಾರುನಿಲ್ಲಿಸಿ ಬಾನೆಟ್‌ ಮೇಲೆ ಕುಳಿತು ಮದ್ಯಪಾನ ಮಾಡಿ ಟ್ರಾಫಿಕ್‌ ಜಾಮ್‌ ಮಾಡಿ ಸಾರ್ವಜನಿಕರ ಟೀಕೆಗೆ ಗುರಿಯಾದರು. ನೀವು ಮೋಜು ಮಾಡಿ ಕೊಳ್ಳಬೇಕಾದರೆ ಮನೆಯಲ್ಲಿ ಮಾಡಿಕೊಳ್ಳಿ, ರಸ್ತೆಯನ್ನು ಬಾರ್‌ ಮಾಡಿ ಕೊಳ್ಳಲು ಅನುಮತಿ ನೀಡಿದ್ದು ಯಾರು ಕೂಡಲೇ ಎಸ್ಪಿ ಅವರಿಗೆ ಮಾಹಿತಿ ನೀಡಿ ಇವರಿಗೆಲ್ಲ ಆ ಮೇಲೆ ಬುದ್ಧಿಬರುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.

ಪರದಾಟ: ವೀಕೆಂಡ್‌ ಆಗಿರುವಭಾನುವಾರ ನಂದಿಗಿರಿ ಧಾಮದಲ್ಲಿ ಪ್ರಾಕೃತಿಕ ಸೊಬಗನ್ನು ಆನಂದಿಸಲು ಸಹಸ್ರಾರು ಮಂದಿ ಪ್ರವಾಸಿಗರು ಬೆಳಗ್ಗೆ ದ ಬಂದಿದ್ದಾರೆ. ಆದರೆ ಮುನ್ನೆಚ್ಚೆರಿಕೆ ಕ್ರಮಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ನಂದಿಗಿರಿಧಾಮಕ್ಕೆ ಹೋಗುವ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ ಆಗಿ ಎಲ್ಲರು ಕಿರಿಕಿರಿ ಅನುಭವಿಸುಂತಾಯಿತು. ಪ್ರವಾಸಿಗರಸಂಖ್ಯೆಗೆ ಅನುಗುಣವಾಗಿ ಇಲ್ಲಿ ಭದ್ರತಾ ವ್ಯವಸ್ಥೆ ಇಲ್ಲದೇ ಪ್ರವಾಸಿಗರು ಪರದಾಡುವಂತಾಯಿತು.

ಪ್ರವಾಸಿಗರಿಗೆ ದಂಡ: ನಂದಿಗಿರಿಧಾಮದಲ್ಲಿ ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಇಟ್ಟಿದ್ದಾರೆ ಎಂದು ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ನಂದಿಗಿರಿಧಾಮದಲ್ಲಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸಿದ ಪ್ರವಾಸಿಗರಿಗೆ ತಲಾ 500 ರೂ. ದಂಡ ವಿಧಿಸಿ ಶಾಕ್‌ ನೀಡಿದರು. ಕೆಲ ಪ್ರವಾಸಿಗರು ದಂಡ ವಿಧಿಸಿದರತೂ ಅದೇ ಚಾಳಿ ಮುಂದುವರಿಸಿದ್ದರು.

ತೋಟಗಾರಿಕೆಕಾರ್ಯದರ್ಶಿ ಗರಂ :  ಜಿಲ್ಲೆಯ ನಂದಿಗಿರಿಧಾಮಕ್ಕೆ ಭಾನುವಾರ ರಾಜ್ಯ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್‌ ಕಠಾರಿಯಾ ಭೇಟಿ ನೀಡಿ ಸ್ವತ್ಛತೆ ಕಾಪಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರಲ್ಲದೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಅಗತ್ಯ ಸಿಬ್ಬಂದಿ ನಿಯೋಜಿಸಿ ಮಾಸ್ಕ್ ಇಲ್ಲದೇ ಬರುವ ಪ್ರವಾಸಿಗರಿಗೆ ದಂಡ ವಿಧಿಸಿ ಸಾಮಾನ್ಯ ಪ್ರವಾಸಿಗರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕೆಂದು ಸೂಚನೆ ನೀಡಿದರು. ಇದೇ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ನಿಯಮ ಉಲ್ಲಂಘನೆ: ವ್ಯಕ್ತಿಗಳ ವಿರುದ್ಧಕ್ರಮ :  ಈ ಕುರಿತು ಜಿಲ್ಲಾ ಎಸ್ಪಿ ಮಿಥುನ್‌ ಕುಮಾರ್‌ ಅವರನ್ನು ಉದಯವಾಣಿ ಸಂಪರ್ಕಿಸಿದಾಗ, ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು  ನಂದಿಗಿರಿಧಾಮದಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ. ಮಾಸ್ಕ್ ಧರಿಸದೆ ನಿರ್ಲಕ್ಷ್ಯ ಮಾಡುತ್ತಿರುವ ನಾಗರಿಕರಿಗೆ ನಗರಸಭೆ, ಪುರಸಭೆ ಅಕಾರಿಗಳು ದಂಡ ವಿಧಿಸುತ್ತಿದ್ದಾರೆ. ಪ್ರವಾಸಿಗರು ಸಹ ತಮ್ಮ ಆರೋಗ್ಯದ ಕುರಿತು ಚಿಂತನೆ ಮಾಡಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕಅಂತರ ಕಾಪಾಡಿಕೊಳ್ಳಬೇಕು. ರಸ್ತೆಯಲ್ಲಿ ಕಾರ್‌ ನಿಲ್ಲಿಸಿ ಮದ್ಯಪಾನ ಮಾಡಿರುವುದು ದೊಡ್ಡಬಳ್ಳಾಪುರ ವ್ಯಾಪ್ತಿಗೆ ಬರುತ್ತದೆ. ಬೆಂಗಳೂರು ಗ್ರಾಮಾಂತರ ಎಸ್‌ಪಿ ಜತೆ ಮಾತುಕತೆ ನಡೆಸಿದ್ದೇನೆ. ನಿಯಮ ಉಲಂಘಿಸಿರುವ ವ್ಯಕ್ತಿಗಳ ಮೇಲೆಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.