ಜವಾಬ್ದಾರಿಯಿಂದ ಕೆಲಸ ಮಾಡಿ : ಜಿಲ್ಲಾಧಿಕಾರಿ
Team Udayavani, Dec 18, 2020, 7:57 PM IST
ಚಿಕ್ಕಬಳ್ಳಾಪುರ: ಗ್ರಾಪಂ ಚುನಾವಣೆಗಳನ್ನು ಲಘುವಾಗಿ ಪರಿಗಣಿಸದೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.
ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಪಂ ಚುನಾವಣೆಯ ಮತಗಟ್ಟೆಯ ಪಿಆರ್ ಒ-ಎಪಿಆರ್‌ಒಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗ್ರಾಪಂಚುನಾವಣೆಯನ್ನುಸುಸೂತ್ರವಾಗಿ ನಡೆಸಲು ಆಯೋಗದಿಂದ ಮಾರ್ಗಸೂಚಿ ಮತ್ತು ಆದೇಶಗಳ ಕೈಪಿಡಿಯನ್ನು ಲೋಪದೋಷವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸ ಬೇಕೆಂದು ಸೂಚನೆ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಿಆರ್‌ಒಗಳಾಗಿ ನೇಮಕಗೊಂಡಿರುವುದಕ್ಕೆ ಸ್ಪಷ್ಟಪಡಿಸಿ ಗಂಭೀರಆರೋಗ್ಯ ಸಮಸ್ಯೆ ಇರುವವರಿಗೆ ಪರಿಶೀಲಿಸಿ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ತಹಶೀಲ್ದಾರ್ ಕೆ.ಅರುಂಧತಿ, ಉಪ ತಹಶೀಲ್ದಾರ್ ಮಂಜುನಾಥ್,ಕ್ಷೇತ್ರ ಶಿಕ್ಷಣಾಧಿಕಾರಿಆರ್.ಶ್ರೀನಿವಾಸ್, ಚುನಾವಣಾ ಶಾಖೆಯಸಾದಿಕ್‌ಪಾಷ, ತಾಲೂಕು ಸರ್ಕಾರಿ ನೌಕರರಸಂಘದ ಅಧ್ಯಕ್ಷ ಕೆ.ಎನ್.ಸುಬ್ಟಾರೆಡ್ಡಿ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಮುನಿರಾಜು, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬೆ„ರಾರೆಡ್ಡಿ, ತಾಲೂಕು ಎನ್.ಪಿ.ಎಸ್‌ನೌಕರರಸಂಘದಅಧ್ಯಕ್ಷಗಜೇಂದ್ರ,ಕಾರ್ಯದರ್ಶಿ ನರಸಿಂಹಮೂರ್ತಿ, ರಾಜಸ್ವ ನಿರೀಕ್ಷಕ ಪ್ರಶಾಂತ್ ಮತಗಟ್ಟೆಯ ಪಿಆರ್‌ಒ-ಎಪಿಆರ್‌ಒಗಳು ಉಪಸ್ಥಿತರಿದ್ದರು.
ತಹಶೀಲ್ದಾರ್ ಗ್ರೇಡ್-1, ಗ್ರೇಡ್-2 ವರ್ಗಾವಣೆ :
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತಿ ಚುನಾವಣಾ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಸರ್ಕಾರ 89 ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಗ್ರಾಪಂ ಚುನಾವಣೆಹಿನ್ನೆಲೆಯಲ್ಲಿ ತಹಶೀಲ್ದಾರ್ ಗ್ರೇಡ್-1ಮತ್ತುಗ್ರೇಡ್-2ಅವರನ್ನುವರ್ಗಾವಣೆ ಮಾಡಲಾಗಿದ್ದು, ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಹಿಂದಿನ ಹುದ್ದೆಗೆ ಹಾಜರಾಗತಕ್ಕದು ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಕೆ.ಅರುಂಧತಿ ಅವರನ್ನು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ತಹಶೀಲ್ದಾರ್ ಗ್ರೇಡ್-1 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗ ದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್ ಗ್ರೇಡ್ -01 ಅನಂತರಾಮು ಜಿ.ಎಸ್ ಅವರನ್ನು ಶಿಡ್ಲಘಟ್ಟ ತಹಶೀಲ್ದಾರ್ ಗ್ರೇಡ್-01 ಆಗಿ ವರ್ಗಾವಣೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ತಹ ಶೀಲ್ದಾರ್ ಗ್ರೇಡ್-02 ತುಳಸಿ ಜಿ.ವಿ ಅವರನ್ನು ತುಮಕೂರು ತಾಲೂಕು ಕಚೇರಿಯ ತಹಶೀಲ್ದಾರ್ ಗ್ರೇಡ್ 02 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ದಾವಣಗೆರೆ ಜಿಲ್ಲೆಯ ಗ್ರೇಡ್-2 ತಹಶೀಲ್ದಾರ್ ದೇವರಾಜು ಕೆ.ಆರ್. ಅವರನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯ ಗುಡಿಬಂಡೆ ತಾಲೂಕಿನ ಗ್ರೇಡ್-2 ತಹಶೀಲ್ದಾರ್ ಸಿಬತ್ತುಲ್ಲಾ ಅವರನ್ನು ಮಧುಗರಿ ಉಪವಿಭಾಗಾಧಿಕಾರಿಗಳ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಮಧುಗರಿ ಉಪ ವಿಭಾಗಾಧಿ ಕಾರಿಗಳ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಡಿ.ಎನ್.ವರದರಾಜು ಗುಡಿಬಂಡೆ ತಾಲೂಕಿನ ತಹಶೀಲ್ದಾರ್ ಆಗಿ ವರ್ಗಾಯಿಸಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಡ್ಲಘಟ್ಟ: 10 ಲಕ್ಷ ರೂ ಮೌಲ್ಯದ ನಕಲಿ ಮದ್ಯ ತಯಾರಿಕಾ ವಸ್ತುಗಳು ವಶ
ಕೃಷಿ ಕಾಯ್ದೆ ವಾಪಸ್ಸು ಪಡೆಯದಿದ್ದರೆ ದ್ವಿತೀಯ ಸ್ವಾತಂತ್ರ್ಯಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್
ಯುವಪೀಳಿಗೆಗೆ ಸಂಸ್ಕೃತಿ, ಪರಂಪರೆ ತಿಳಿಸಿ
ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ವಿತರಣೆ ಅಭಿಯಾನಕ್ಕೆ ಡಿ.ಸಿ ಆರ್.ಲತಾ ಚಾಲನೆ
ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ: ಸಚಿವ ಡಾ.ಕೆ.ಸುಧಾಕರ್
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಸ್ಟೇಟಸ್ ಮೂಲಕ ಬಳಕೆದಾರರಿಗೆ ‘ಪ್ರೈವೆಸಿ ಪಾಠ’ ಮಾಡಿದ ವಾಟ್ಸಾಪ್
ಮುಗಿಯದ ವಾಟ್ಸಾಪ್ ಗೋಳು: ಗೂಗಲ್ ಸರ್ಚ್ ನಲ್ಲಿ ‘ಮಿಂಚಿ ಮರೆಯಾದ’ ನಿಮ್ಮ ಮೊಬೈಲ್ ನಂಬರ್ !
ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ
ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು
ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ