ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತ್ತಿಬ್ಬರ ಅರ್ಜಿ ಸಲ್ಲಿಕೆ

Team Udayavani, Nov 19, 2022, 4:54 PM IST

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತ್ತಿಬ್ಬರ ಅರ್ಜಿ ಸಲ್ಲಿಕೆ

ಚಿಕ್ಕಬಳ್ಳಾಪುರ: ಕುತೂಹಲ ಕೆರಳಿಸಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಮತ್ತಿಬ್ಬರು ಆಕಾಂಕ್ಷಿ ಯಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಅವರು ಅರ್ಜಿ ಸಲ್ಲಿಸಿದ ಬಳಿಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಯಲವಹಳ್ಳಿ ಎನ್‌.ರಮೇಶ್‌ ಅರ್ಜಿ ಸಲ್ಲಿಸಿ ಗಮನ ಸೆಳೆದಿದ್ದರು. ಬಳಿಕ ಜಿಪಂ ಮಾಜಿ ಅಧ್ಯಕ್ಷ ಗಂಗರಕಾಲುವೆ ನಾರಾಯಣ ಸ್ವಾಮಿ ಅರ್ಜಿ ಸಲ್ಲಿಸಿ, ರಾಜಕೀಯ ವಲಯ ದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಅದಲ್ಲದೆ, ಚಿಕ್ಕಬಳ್ಳಾಪುರದಲ್ಲಿ ವಿವಿಧ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದ ಕೆಪಿಸಿಸಿ ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎನ್‌. ರಘು ಅವರು ತಮ್ಮ ಅಭಿಮಾನಿಗಳೊಂದಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ, ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗುತ್ತಾರೆ ಎಂದು ಕುತೂಹಲದ ನಡುವೆ ನಾಲ್ವರು ಅರ್ಜಿ ಸಲ್ಲಿಸಿದ್ದಾರೆ.

ಕಾರ್ಯಕರ್ತರಲ್ಲಿ ಗೊಂದಲ: ಸಚಿವ ಡಾ. ಕೆ.ಸುಧಾಕರ್‌ ಅವರನ್ನು ಶತಾಯಗತಾಯ ವಾಗಿ ಸೋಲಿಸಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದು, ಮತ್ತೂಂದೆಡೆ ಕಾಂಗ್ರೆಸ್‌ ಪಕ್ಷದಲ್ಲೇ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಚಿಕ್ಕಬಳ್ಳಾ ಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಪಕ್ಷ ಸಂಘಟನೆ ಮತ್ತು ಜನಸೇವೆಯಲ್ಲಿ ಸಕ್ರೀಯ ವಾಗಿ ತೊಡಗಿಸಿಕೊಂಡಿರುವ ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಪರ ಅನೇಕ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ.

ಮತ್ತೂಂದೆಡೆ ಅನುಭವಿ ರಾಜಕಾರಣಿ ಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲವಹಳ್ಳಿ ರಮೇಶ್‌ ಬಗ್ಗೆಯೂ ಒಲವು ವ್ಯಕ್ತಪಡಿಸಿದ್ದಾರೆ. ಒಟ್ಟಾರೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ದಿನೇ ದಿನೆ ರಂಗೇರುತ್ತಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಸಹ ಉತ್ಸಾಹ ಹೆಚ್ಚಾಗುತ್ತಿದೆ. ಕೊನೆಯದಾಗಿ ಸಚಿವ ಡಾ.ಕೆ.ಸುಧಾಕರ್‌ ವಿರುದ್ಧ ಯಾರನ್ನು ಕಣಕ್ಕಿಳಿಸಲಾಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಕ್ಷೇತ್ರದಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ನಂದಿ ಆಂಜಿನಪ್ಪ ಅವರು ಅರ್ಜಿ ಸಲ್ಲಿಸಬಹುದು ಎಂಬ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.