ಖಾಸಗಿ ನೀರು ಸರಬರಾಜುದಾರರಿಗೆ ಹಣ ಪಾವತಿಸದ ನಗರಸಭೆ: ಆರೋಪ

Team Udayavani, Nov 29, 2019, 3:01 PM IST

cb-tdy-2

ಚಿಂತಾಮಣಿ: ಪ್ರತಿ 15 ದಿನಗಳಿಗೊಮ್ಮೆ ಹಣ ಪಾವತಿಸುವುದಾಗಿ ಖಾಸಗಿ ನೀರು ಸರಬರಾಜುದಾರರಿಗೆ ಒಡಂಬಡಿಕೆ ಮಾಡಿಕೊಟ್ಟು ಅದರಂತೆ ಹಣ ಪಾವತಿಸದೆ ನಿರ್ಲಕ್ಷಿಸುತ್ತಿರುವುದರಿಂದ ನಿತ್ಯ ನಗರಕ್ಕೆ ನೀರು ಸರಬರಾಜು ಮಾಡುವವರು ಸಂಕಷ್ಟಕ್ಕೀಡಾಗಿದ್ದು, ಬಿಲ್‌ನ ಹಣ ಪಡೆಯಲುನಗರಸಭೆ ಕಚೇರಿಯ ಸುತ್ತ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಶಾಸಕರಾಗಲಿ, ಅಧಿಕಾರಿಗಳಾಗಲಿ ಗಮನಹರಿಸುತ್ತಿಲ್ಲವೆಂಬ ಆರೋಪ ಕೇಳಿಬರುತ್ತಿದೆ.

ದಿನ ನಿತ್ಯ ಸುಮಾರು 200ಕ್ಕೂ ಹೆಚ್ಚಿನ ಟ್ಯಾಂಕರುಗಳಷ್ಟು ನೀರು ಸರಬರಾಜು ಮಾಡುತ್ತಿರುವ ಖಾಸಗಿ ನೀರು ಸರಬರಾಜುದಾರರಿಗೆ ಕೇವಲ ಪ್ರತಿ ಟ್ಯಾಂಕರ್‌ ಗೆ 350 ರೂ. ಮಾತ್ರ ನೀಡುತ್ತಿದ್ದು, ಅದನ್ನು ಸಹ ನಿಗದಿತ ಅವದಿಗೆ ನೀಡುತ್ತಿಲ್ಲ. ನೀರಿಲ್ಲದೆಸೊರಗುತ್ತಿರುವ ನಗರದ ಜನತೆಗೆ ಅತಿ ಕಡಿಮೆ ದರದಲ್ಲಿ ನೀರು ಪೂರೈಕೆ ಮಾಡಿ ಮಾನವೀಯತೆ ತೋರುತ್ತಿರುವ ಸರಬರಾಜುದಾರರಿಗೆ ಸಕಾಲಕ್ಕೆ ಹಣ ಪಾವತಿಸದ ಕಾರಣದಿಂದ ಈಗಾಗಲೇ ನೀರನ್ನು ಸರಬರಾಜು ಮಾಡುತ್ತಿದ್ದವರ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿರುವುದರಿಂದ ನೀರಿಗೆ ಹಾಹಾಕಾರ ಶುರುವಾಗಿದೆ.

3-4 ತಿಂಗಳಿಂದ ಬಾಕಿ: ಸಕಾಲಕ್ಕೆ ಹಣ ಪಾವತಿ ಮಾಡದಿರುವುದರಿಂದ ಲಕ್ಷಾಂತರ ರೂ. ವಿದ್ಯುತ್‌ ಬಿಲ್‌ನ್ನು ಪಾವತಿಸಲಾಗದ ದುಃಸ್ಥಿತಿಒಂದೆಡೆಯಾದರೆ, ಮತ್ತೂಂದೆಡೆ ಕುಟುಂಬದ ಪೋಷಣೆಯೂ ಸಹ ಸೇರಿರುವುದರಿಂದ ಹಣ ಕೈಗೆ ಬಾರದೆ ಆರ್ಥಿಕವಾಗಿ ಸಮಸ್ಯೆಗಳಿಗೆ ತುತ್ತಾಗುತ್ತಿದ್ದರೂ ನಗರಸಭೆಯ ಅಧಿಕಾರಿಗಳು ಬಿಲ್‌ ಪಾವತಿಗೆ ಮುಂದಾಗಿಲ್ಲ. ಇಂದು ನಾಳೆ,ನಾಡಿದ್ದು ಎನ್ನುತ್ತಾ ಕಾಲಹರಣ ಮಾಡುತ್ತಾ 50 ಲಕ್ಷಕ್ಕೂ ಹೆಚ್ಚಿನ ಹಣ ಸರಬರಾಜುದಾರರಿಗೆ ನೀಡಬೇಕಿದ್ದು, ಕಳೆದ 3-4 ತಿಂಗಳುಗಳಿಂದಬಾಕಿ ಉಳಿಸಿಕೊಂಡಿರುವ ನಗರಸಭೆಯು ಇನ್ನಾದರೂ ಹಣ ಬಿಡುಗಡೆಗೆ ಮುಂದಾಗಬೇಕಿದೆ.

ಕಡಿಮೆ ಬೆಲೆಗೆ ಮಾರಾಟ: 5 ಸಾವಿರ ಲೀಟರ್‌ ಒಂದು ಟ್ಯಾಂಕರ್‌ಗೆ ಖಾಸಗಿಯಾಗಿ 700 ರಿಂದ 900 ರೂ.ವರೆಗೆ ನಗರದಲ್ಲಿ ಮಾರಾಟಮಾಡುತ್ತಿದ್ದು, ಆ ಬೆಲೆಯಲ್ಲಿ ಅರ್ಧದಷ್ಟು ಬೆಲೆಗೆ ನಾವು ನೀರನ್ನು ಪೂರೈಕೆ ಮಾಡುತ್ತಿದ್ದರೂ ಸಕಾಲದಲ್ಲಿ ಹಣ ಪಾವತಿಸದಿದ್ದರೆ ಹೇಗೆ? ಬಂಡವಾಳವನ್ನು ಹಾಕಿ ಮಾನವೀಯತೆ ದೃಷ್ಟಿಯಿಂದ ನೀರು ಸರಬರಾಜು ಮಾಡುತ್ತಿದ್ದು, ಅದನ್ನು ನಿಗದಿತ ವೇಳೆಗೆ ಹಣನೀಡಿ ಸ್ಪಂದಿಸದಿದ್ದರೆ ಹೇಗೆಂಬ ಪ್ರಶ್ನೆ ಸರಬರಾಜುದಾರರಿಂದ ವ್ಯಕ್ತವಾಗುತ್ತಿದೆ. ಕೂಡಲೇ ನಗರಸಭೆ ಪೌರಾಯುಕ್ತರು ಹಣ ಪಾವತಿಸಲು ಗಮನ ಹರಿಸಬೇಕೆಂದು ಸರಬರಾಜುದಾರರು ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.