ಗ್ರಾಮ ಸ್ವರಾಜ್ಯ ಕಾರ್ಯಕ್ರಮ: ನ.29ರಂದು ಅಶ್ವತ್ಥನಾರಾಯಣ,ನಳಿನ್ ಚಿಕ್ಕಬಳ್ಳಾಪುರಕ್ಕೆ ಭೇಟಿ
Team Udayavani, Nov 28, 2020, 8:17 PM IST
ಚಿಕ್ಕಬಳ್ಳಾಪುರ: ಜಿಲ್ಲೆಗೆ ನವೆಂಬರ್-29 ರಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸಮೇತ ಬಿಜೆಪಿ ಮುಖಂಡರು ಭೇಟಿ ನೀಡಲಿದ್ದಾರೆ.
ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡುತ್ತಿರುವ ಮುಖಂಡರು ಬೆಳಿಗ್ಗೆ ಚಿಕ್ಕಬಳ್ಳಾಪುರ ನಗರದ ಸಿದ್ದೇಶ್ವರ ಸಮುದಾದಾಯ ಭವನಕ್ಕೆ ಭೇಟಿ ನೀಡಿ ಬಳಿಕ ಜಿಲ್ಲೆಯ ಬಾಗೇಪಲ್ಲಿ ತಾಲೂಕಿಗೆ ತೆರಳಿದ್ದಾರೆ. ಅಲ್ಲಿ ಚಿಕ್ಕಬಳ್ಳಾಪುರ,ಗೌರಿಬಿದನೂರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಬಳಿಕ ಚಿಂತಾಮಣಿ ತಾಲೂಕಿಗೆ ತೆರಳಿ ಅಲ್ಲಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ ಮಧುಚಂದ್ರ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿಗಳು ಮತ್ತು ಪಕ್ಷದ ರಾಜ್ಯಾಧ್ಯಕ್ಷರೊಂದಿಗೆ ಸಚಿವ ಕೋಟಾ ಶ್ರೀನಿವಾಸ್, ಉಡುಪಿ ಚಿಕ್ಕಮಗಳೂರು ಸಂಸದರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮತ್ತಿತರರು ಭೇಟಿ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಸ್ಥಳೀಯ ರೈಲುಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!
ಇದನ್ನೂ ಓದಿ: ಮಲೆ ಮಾದಪ್ಪನ ದರ್ಶನ ಪಡೆದು ಕಾಲ್ನಡಿಗೆಯಲ್ಲಿಯೇ ನಾಗಮಲೆಗೆ ತೆರಳಿದ ಯತೀಂದ್ರ ಸಿದ್ಧರಾಮಯ್ಯ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ