ಪ್ರಾಣ ಹೋದರೂ ಜಮೀನು ಬಿಡಲ್ಲ

ಪೂರ್ವಜರ ಕಾಲದಿಂದ ಸ್ವಾಧೀನದಲ್ಲಿದ್ದೇವೆ, ಎ.ನಕ್ಕಲಹಳ್ಳಿಯ ರೈತರ ಎಚ್ಚರಿಕೆ

Team Udayavani, Nov 3, 2020, 4:05 PM IST

ಪ್ರಾಣ ಹೋದರೂ ಜಮೀನು ಬಿಡಲ್ಲ

ಶಿಡ್ಲಘಟ್ಟ ತಾಲೂಕಿನ ಎ.ನಕ್ಕಲಹಳ್ಳಿಯ ಸರ್ವೆ ಸಂಖ್ಯೆ 30ರಲ್ಲಿ ರೈತರು ರಾಗಿ ಬೆಳೆಯಿಟ್ಟಿರುವುದು.

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಎ.ನಕ್ಕಲಹಳ್ಳಿಯಲ್ಲಿ ಸುಮಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿರುವ ಸಣ್ಣ ರೈತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರವನ್ನು ನಡೆಸಿದ್ದಾರೆಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುಟುಂಬ ನಿರ್ವಹಣೆ: ಶಿಡ್ಲಘಟ್ಟ ತಾಲೂಕಿನಬಶೆಟ್ಟಹಳ್ಳಿ ಹೋಬಳಿ ಎ.ನಕ್ಕಲಹಳ್ಳಿ ಗ್ರಾಮದ ಸರ್ವೆ ನಂ.30 ರಲ್ಲಿ 299.27 ಗುಂಟೆ ಗೋಮಾಳಜಮೀನಿದ್ದು, ಈ ಜಮೀನಿನಲ್ಲಿ ಎ.ನಕ್ಕಲಹಳ್ಳಿ, ಬುಡುಗವಾರ್‌ಹಳ್ಳಿ, ಮಾದೇನಹಳ್ಳಿಯ ಪರಿಶಿಷ್ಟ ಜಾತಿ ಹಾಗೂ ಇತರೆ ವರ್ಗಗಳ ಸಣ್ಣ ರೈತರು ಸುಮಾರು 60 ವರ್ಷಗಳಿಂದ ಅನುಭವದಲ್ಲಿದ್ದು, ವಿವಿಧ ರೀತಿಯ ಬೆಳೆಗಳನ್ನಿಟ್ಟು ಕುಟುಂಬ ನಿರ್ವಹಣೆ ಮಾಡಿಕೊಳ್ಳುತ್ತಿದ್ದಾರೆ.

ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿಯಾಗಿ ತಮ್ಮ ಇಲಾಖೆಗೆ ಸೇರಿದ ಜಮೀನೆಂದು ಹೇಳಿ ಇಲ್ಲಿ ಯಾವುದೇ ವಿಧವಾದ ಸಾಗುವಳಿ ಮಾಡಬಾರದೆಂದು ಮಾಡಿದರೆ ಕೇಸು ಹಾಕಿ ಜೈಲಿಗೆ ಕಳುಹಿಸುತ್ತೇವೆ ಎಂದು ಬಡ ರೈತರ ಮೇಲೆ ದೌರ್ಜನ್ಯ ನಡೆಸಿದ್ದಾರೆಂದು ರೈತರು ಹಾಗೂ ಗ್ರಾಮಸ್ಥರು ಆರೋಪಿಸಿದರು.

ದೌರ್ಜನ್ಯ, ದಬ್ಟಾಳಿಕೆ ಆರೋಪ: ನಮ್ಮ ಪೂರ್ವಜರು ಸುಮಾರು ವರ್ಷಗಳಿಂದ ಇಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಕೆಲವು ಬಲಾಡ್ಯರು ತಮ್ಮ ಅಧಿಕಾರ ಚಲಾಯಿಸಿ ಜಮೀನು ಮಂಜೂರು ಮಾಡಿಕೊಂಡಿದ್ದಾರೆ. ಆದರೆ ನಾವು ಸರ್ಕಾರದ ಆದೇಶಗಳಂತೆ ಸಾಗುವಳಿ ಮಾಡುತ್ತಿರುವ ರೈತರಿಗೆ ಜಮೀನು ಮಂಜೂರು ಮಾಡಬೇಕೆಂದು ಅರಣ್ಯ ಸಚಿವರು, ಜಿಲ್ಲಾಧಿಕಾರಿಗಳು, ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸುವ ಜೊತೆಗೆ ಫಾರಂ ನಂ 53 ಮತ್ತು 57ಹಾಕಿಕೊಂಡಿದ್ದೇವೆ. ಆದರೂ ಸಹ ಅರಣ್ಯ ಇಲಾಖೆಯ ಅಧಿಕಾರಿಗಳು ವಿನಾಕಾರಣ ದೌರ್ಜನ್ಯ ಮತ್ತು ದಬ್ಟಾಳಿಕೆ ನಡೆಸುತ್ತಿದ್ದಾರೆಂದು ಸಾಗುವಳಿ ಮಾಡುತ್ತಿರುವ ಸಣ್ಣ ರೈತರು, ಮಹಿಳೆಯರು ಹಾಗೂ ವೃದ್ಧರು ಅಸಮಾಧಾನ ವ್ಯಕ್ತಪಡಿಸಿದರು.

60 ವರ್ಷಗಳಿಂದ ಎಲ್ಲಿ ಹೋಗಿದ್ದರು?: ಶಿಡ್ಲಘಟ್ಟ ತಾಲೂಕಿನ ಎ.ನಕ್ಕಲಹಳ್ಳಿ ಗ್ರಾಮದ ಸರ್ವೆ ನಂ.30 ರಲ್ಲಿ ಸುಮಾರು 60 ವರ್ಷಗಳಿಂದ ಸ್ವಾಧೀನದಲ್ಲಿದ್ದು, ಸಾಗುವಳಿ ಮಾಡುತ್ತಿದ್ದೇವೆ. ಅರಣ್ಯ ಇಲಾಖೆ ಅಧಿಕಾರಿಗಳು ಇಷ್ಟು ವರ್ಷಗಳಿಂದ ಜಮೀನು ಉಳಿಸಿಕೊಳ್ಳಲು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದ ಗ್ರಾಮಸ್ಥರು ಸರ್ಕಾರ ಸತ್ಯಾಸತ್ಯತೆ ಪರಿಶೀಲಿಸಿ ಬಡ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಹಕರಿಸಬೇಕು ಹಾಗೂ ಅರಣ್ಯ ಇಲಾಖಾಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಜಮೀನಿನ ಸಾಗುವಳಿ ಮಾಡುತ್ತಿರುವ ಗ್ರಾಮದ ಮುಖಂಡರಾದ ಈರಪ್ಪ, ವೆಂಕಟರೆಡ್ಡಿ, ನಾಗರಾಜ್‌, ಹಾಲುಪರೀಕ್ಷಕ ಸೀನಪ್ಪ, ಮಂಜುನಾಥ್‌,ದೇವರಾಜ್‌, ವೆಂಕಟೇಶಪ್ಪ, ಸರೋಜಮ್ಮ ಮತ್ತಿತರರ ನೇತೃತ್ವದಲ್ಲಿ ಅಪಾರ ಸಂಖ್ಯೆಯಲ್ಲಿ ಬಡ ರೈತರು ಉಪಸ್ಥಿತರಿದ್ದರು.

ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಎ.ನಕ್ಕಲಹಳ್ಳಿಯ ರೈತರ ಸಮಸ್ಯೆ ಕುರಿತು ತಮಗೆ ಅರಿವು ಇಲ್ಲ. ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುತ್ತೇನೆ. ಕೆ.ಅರುಂಧತಿ, ತಹಶೀಲ್ದಾರ್‌ ಶಿಡ್ಲಘಟ್ಟ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.