ಮತದಾರರು ಆಶೀರ್ವಾದ ಮಾಡುತ್ತಾರೆ, ಆ ವಿಶ್ವಾಸ ನನಗಿದೆ: ಶರತ್ ಬಚ್ಚೇಗೌಡ

Team Udayavani, Dec 9, 2019, 8:53 AM IST

ಚಿಕ್ಕಬಳ್ಳಾಪುರ: ಉಪಚುನಾವಣೆಯ ಅಂಚೆ ಮತಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಹೊಸಕೋಟೆ ಪಕ್ಷೇತರ ಅಭ್ಯರ್ಥಿ ಶರತ್​ ಬಚ್ಚೇಗೌಡ ಕ್ಷೇತ್ರದ ಮತದಾರರ ಆಶೀರ್ವಾದ ನನಗಿದೆ ಎಂದಿದ್ದಾರೆ.

ನಮ್ಮ ತಂದೆ ಬಿಜೆಪಿಗೆ ಬರುವ ಮೊದಲಿಂದಲೂ ಜನಪರಕೆಲಸಗಳನ್ನು ಮಾಡಿಕೊಂಡು ವಿಶ್ವಾಸ ಗಳಿಸಿದ್ದಾರೆ. ಅವರ ನಾಮಬಲ ನನಗಿದ್ದೂ , ಕ್ಷೇತ್ರದ ಮತದಾರರ ಆಶೀರ್ವಾದ ನನ್ನ ಮೇಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು  ಮೊದಲು ಗೆಲವು ನಿರೀಕ್ಷೆ ಮಾಡುತ್ತಿದ್ದೇನೆ. ಗೆದ್ದ ನಂತರ ಮತದಾರರ ಅಭಿಪ್ರಾಯ ಕೇಳಬೇಕು. ಅವರು ಸಮ್ಮತಿ ಸೂಚಿಸಿದರೆ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.

ಅನರ್ಹರಿಗೆ ಟಿಕೆಟ್ ಕೊಟ್ಟ ಬಿಜೆಪಿ, ಅಂತಹ ಪಕ್ಷಕ್ಕೆ ಸೇರುತ್ತಿರಾ ಎಂಬ ಪ್ರಶ್ನೆಗೆ ಕೆಲಸ ಮಾಡೋರಿಗೆ ಟಿಕೆಟ್ ಕೊಟ್ಟಿಲ್ಲ. ಅನರ್ಹರಿಗೆ ಕೊಟ್ಟಿದ್ದಾರೆ. ಇದರ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ