Udayavni Special

ಅಕ್ರಮ ಗಣಿಗಾರಿಕೆ ನಡೆಯದಂತೆ ಎಚ್ಚರ ವಹಿಸಿ

ಗಣಿಗಾರಿಕೆಯಲ್ಲಿ ಕೊರೆಯುವಿಕೆ,ಸ್ಫೋಟಕ ಬಳಕೆ ಕಾರ್ಯಾಗಾರ ಅಧಿಕಾರಿಗಳಿಗೆ ಎಸ್ಪಿ ಮಿಥುನ್‌ ಕುಮಾರ್‌ ಸೂಚನೆ 

Team Udayavani, Feb 3, 2021, 4:44 PM IST

Workshop on Mining

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯದಂತೆ ಹಾಗೂ ಪರಿಸರದ ಮೇಲೆ ಹಾನಿ ಉಂಟಾಗದಂತೆ ಎಚ್ಚರ ವಹಿಸಿ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು ಎಂದು ಎಸ್ಪಿ ಜಿ. ಕೆ.ಮಿಥುನ್‌ ಕುಮಾರ್‌ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಪೊಲೀಸ್‌ ಇಲಾಖೆ ಸಿಬ್ಬಂದಿಗಳು, ಗಣಿ ಇಲಾಖೆ ಸಿಬ್ಬಂದಿಗಳು ಹಾಗೂ ಸಂಬಂಧಿತ ಅಧಿಕಾರಿ, ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಗಣಿಗಾರಿಕೆಯಲ್ಲಿ ಕೊರೆಯುವಿಕೆ ಮತ್ತು ಸ್ಫೋಟಕ ಬಳಕೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಗಣಿಗಾರಿಕೆಯಲ್ಲಿ ಕೊರೆಯುವಿಕೆ ಮತ್ತು ಸ್ಫೋಟಕಗಳ ಬಳಕೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಹಾಗೂ ಅಕ್ರಮ ಗಣಿಗಾರಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಕೈಗೊಳ್ಳಬೇಕಾದ ಕ್ರಮಗಳ ಅರಿವು ಮೂಡಿಸಲು ಈ ಕಾರ್ಯಾಗಾರ ಆಯೋಜಿಸಲಾಗಿದೆ

ಮಾನದಂಡ ಪಾಲಿಸಿ: ಗಣಿಗಾರಿಕೆ ನಡೆಸಲು ಹಾಗೂ ಗಣಿಗಾರಿಕೆಯಿಂದ ಪರಿಸರದ ಮೇಲೆ ಉಂಟಾಗುವ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಅನುಸರಿಸಬೇಕಾದ ಸುರಕ್ಷಿತ ವಿಧಾನಗಳು, ಗಣಿಗಾರಿಕೆಯಲ್ಲಿ ಕೊರೆಯುವ ವಿಧಾನಗಳು ಮತ್ತು ಸ್ಫೋಟಕ ಬಳಕೆ ವಿಧಾನಗಳು ಬಹಳ ಪ್ರಮುಖ ಪಾತ್ರ ವಹಿಸುತ್ತವೆ. ಸರ್ಕಾರದ ಜಾರಿಗೆ ಗಣಿಗಾರಿಕೆ ಕಾಯ್ದೆನ್ವಯ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಹಾಗೂ ವಿಧಿಸಲಾಗಿರುವ ಮಾನದಂಡಗಳು ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಗಣಿಗಳ ಸುರಕ್ಷತೆಯ ನಿರ್ದೇಶನಾಲಯದ ವೇಣುಗೋಪಾಲ್‌ ಮಾತನಾಡಿ, ಗಣಿಗಾರಿಕೆ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅರ್ಹರಿರುವವರಿಗೆ ಮಾತ್ರ ಗಣಿ ಮತ್ತು ಭೂ ವಿಜ್ಞಾನ ಸಂಸ್ಥೆಯಿಂದ ಪರವಾನಗಿ ಪತ್ರ ನೀಡಲಾಗುತ್ತದೆ. ಗಣಿಗಾರಿಕೆ ಪ್ರದೇಶದಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕಾರ್ಮಿಕನ ಸುರಕ್ಷತೆ ಗಣಿಗಾರಿಕೆ ಸಂಸ್ಥೆಯ ಮಾಲೀಕನ ಹೊಣೆಗಾರಿಕೆಯಾಗಿರುತ್ತದೆ.

ಪಾಲನೆ ಮಾಹಿತಿ: ಯಾವುದೇ ಅನಿರೀಕ್ಷಿತ ಘಟನೆ ನಡೆದರೆ ಅದಕ್ಕೆ ಗಣಿಗಾರಿಕೆಯ ಮಾಲೀಕ, ಮೇಲ್ವಿಚಾರಕ, ಮ್ಯಾನೇಜರ್‌ಗಳು ಜವಾಬ್ದಾರರಾಗಿರುತ್ತಾರೆ. ಒಟ್ಟಾರೆಯಾಗಿ ಗಣಿಗಾರಿಕೆ ಮಾಡಬೇಕಾದರೆ ಯಾವ ರೀತಿ ಅರ್ಹತೆ ಪತ್ರ ಪಡೆಯಬೇಕು,ಯಾವ ರೀತಿ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕು,ಕೊರೆಯುವ ವೇಳೆ ಅನುಸರಿಸಬೇಕಾದ ಕ್ರಮ ಮತ್ತು ಸ್ಫೋಟಕ ವೇಳೆ ಬಳಕೆ ಮಾಡಬೇಕಾದ ವಿಧಾನಗಳ ಬಗ್ಗೆ ವಿವರಿಸಿದರು. ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಪೊಲೀಸರು ಗಣಿಗಾರಿಕೆ ಸಸ್ಥಳಗಳಿಗೆ ಭೇಟಿ ನೀಡಿದಾಗ ಪರಿಶೀಲಿಸಬೇಕಾದ ದಾಖಲೆಗಳ ಬಗ್ಗೆ ಮಾಹಿತಿ ನೀಡಿದರು.

  ಇದನ್ನೂ ಓದಿ : ತಹಶೀಲ್ದಾರ್‌ ಗಂಗಪ್ಪ ಸುತ್ತ ಅವ್ಯವಹಾರದ ಹುತ್ತ!

ಕಾರ್ಯಗಾರದಲ್ಲಿ ಡಿ.ವೈ.ಎಸ್‌.ಪಿ ರವಿಶಂಕರ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ನಂಜುಂಡಸ್ವಾಮಿ ಸೇರಿದಂತೆ ತಾಲೂಕಿನ ಎಲ್ಲಾ ಪೊಲೀಸ್‌ ಅಧಿಕಾರಿಗಳು,ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ

ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು, ಏಳು ಜನರಿಗೆ ಗಾಯ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು, ಏಳು ಜನರಿಗೆ ಗಾಯ

LPG cylinder prices February 25, 2021 announced: Third hike in this month, check out how much you need to pay for a cylinder

ಅಡುಗೆ ಅನಿಲ ದರ ಒಂದೇ ತಿಂಗಳಲ್ಲಿ ಮೂರನೆ ಬಾರಿ ಏರಿಕೆ..!

ಪತ್ನಿಯ ಮನೆಗೆಲಸಕ್ಕೆ ಪರಿಹಾರ ನೀಡಿ: ಕೋರ್ಟ್ ತೀರ್ಪು

ಪತ್ನಿಯ ಮನೆಗೆಲಸಕ್ಕೆ ಪರಿಹಾರ ನೀಡಿ: ಕೋರ್ಟ್ ತೀರ್ಪು

Maruti Suzuki Launches All-New Swift 2021; Shares Trade Marginally Higher

ತನ್ನ ಹೊಸ ಆವೃತ್ತಿಯ ಸ್ವಿಫ್ಟ್ ಅನಾವರಣಗೊಳಿಸಿದ ಮಾರುತಿ ಸುಜುಕಿ :ಶೇರು ಟ್ರೇಡ್ ನಲ್ಲಿ ಏರಿಕೆ

ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಅಪಘಾತ: ಮೂವರಿಗೆ ಗಂಭೀರ ಗಾಯ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಅಪಘಾತ: ಮೂವರಿಗೆ ಗಂಭೀರ ಗಾಯ

PM Modi To Address Convocation Ceremony Of Tamil Nadu Dr MGR Medical University Tomorrow

ತಮಿಳುನಾಡಿನ ಡಾ.MGR ಮೆಡಿಕಲ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ನಾಳೆ ಮೋದಿ ಭಾಗಿ.!
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು, ಏಳು ಜನರಿಗೆ ಗಾಯ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು, ಏಳು ಜನರಿಗೆ ಗಾಯ

ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಅಪಘಾತ: ಮೂವರಿಗೆ ಗಂಭೀರ ಗಾಯ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಅಪಘಾತ: ಮೂವರಿಗೆ ಗಂಭೀರ ಗಾಯ

ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಅರೆಸ್ಟ್

ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಅರೆಸ್ಟ್

ಕೊಲೆ, ದರೋಡೆಗೆ ಜೈಲಲ್ಲೇ ಪ್ಲಾನ್‌: ಮಂಗಳೂರಿನ ಇಬ್ಬರು ರೌಡಿ ಶೀಟರ್‌ಗಳ ಕರೆಸಿ ಕೊಲೆಗೆ ಸಂಚು

ಕೊಲೆ, ದರೋಡೆಗೆ ಜೈಲಲ್ಲೇ ಪ್ಲಾನ್‌: ಮಂಗಳೂರಿನ ರೌಡಿ ಶೀಟರ್‌ಗಳ ಕರೆಸಿ ಕೊಲೆಗೆ ಸಂಚು!

MUST WATCH

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

udayavani youtube

ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani

udayavani youtube

ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?

ಹೊಸ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ

ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು, ಏಳು ಜನರಿಗೆ ಗಾಯ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು, ಏಳು ಜನರಿಗೆ ಗಾಯ

LPG cylinder prices February 25, 2021 announced: Third hike in this month, check out how much you need to pay for a cylinder

ಅಡುಗೆ ಅನಿಲ ದರ ಒಂದೇ ತಿಂಗಳಲ್ಲಿ ಮೂರನೆ ಬಾರಿ ಏರಿಕೆ..!

ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಪತ್ನಿಯ ಮನೆಗೆಲಸಕ್ಕೆ ಪರಿಹಾರ ನೀಡಿ: ಕೋರ್ಟ್ ತೀರ್ಪು

ಪತ್ನಿಯ ಮನೆಗೆಲಸಕ್ಕೆ ಪರಿಹಾರ ನೀಡಿ: ಕೋರ್ಟ್ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.