ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ
Team Udayavani, Oct 30, 2020, 10:28 PM IST
ಚಿಕ್ಕಬಳ್ಳಾಪುರ: ಸಾಲಗಾರರ ಕಾಟ ತಾಳಲಾರದೆ ಯುವಕನೊಬ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಕಂದವಾರ ಬಳಿ ನಡೆದಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ಕಂದವಾರ ಸಮೀಪದ ನಿವಾಸಿ 32 ವರ್ಷದ ಪ್ರಜ್ಬಲ್ ಎಂದು ಗುರುತಿಸಲಾಗಿದೆ.
ಸಾಲಗಾರರ ಕಾಟವನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಲಿಸ್ ಮೂಲಗಳಿಂದ ತಿಳಿದುಬಂದಿದೆ ಆದರೇ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಗ್ರಾಮಾಂತರ ಪೋಲಿಸ್ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲಿಸರು ತನಿಖೆ ಕೈಗೊಂಡಿದ್ದಾರೆ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಅಮಾಯಕ ಯುವಕರು ಪ್ರಾಣವನ್ನು ಕಳೆದುಕೊಂಡಂತಾಗಿದ್ದು ನಿನ್ನೆಯಷ್ಟೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಮುಖ್ಯ ಪೋಲೀಸ್ ಪೇದೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿರುವುದು ಇಲ್ಲಿ ಸ್ಮರಿಸಬಹುದಾಗಿದೆ.
ಈ ಕುರಿತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ಕುಮಾರ್ ಅವರನ್ನು ಉದಯವಾಣಿ ಸಂಪರ್ಕಿಸಿದಾಗ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಸಿಲುಕಿ ಯಾರು ಆತ್ಮಹತ್ಯೆ ಮಾಡಿಕೊಂಡಿಲ್ಲ ಪ್ರಜ್ವಲ ಎಂಬಾತನ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸುತ್ತೇವೆ ಜಿಲ್ಲೆಯಲ್ಲಿ ಐಪಿಎಲ್ ದಂಧೆ ನಡೆಯುತ್ತಿರುವ ಕುರಿತು ಮಾಹಿತಿಗಳಿದ್ದರೇ ತಮಗೆ ನೇರವಾಗಿ ಮಾಹಿತಿ ನೀಡಬೇಕೆಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್