ನಿರಾಶ್ರಿತರ ಕೇಂದ್ರಗಳಿಗೆ ನೆರವಿನ ಮಹಾಪೂರ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕೃತಿ ಕೇಂದ್ರ ಆರಂಭ •ದಾನಿಗಳಿಗೆ ಸ್ವೀಕೃತಿ ಪತ್ರ ವಿತರಣೆ

Team Udayavani, Aug 19, 2019, 1:46 PM IST

19-Agust-28

ಚಿಕ್ಕಮಗಳೂರು: ದಾನಿಗಳಿಂದ ಸ್ವೀಕರಿಸಿದ ಅಗತ್ಯ ವಸ್ತುಗಳನ್ನು ನಿರಾಶ್ರಿತ ಕೇಂದ್ರಗಳಿಗೆ ಕಳುಹಿಸಲು ಲಾರಿಯಲ್ಲಿ ಇಡಲಾಯಿತು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ, ಮನೆ ಕಳೆದುಕೊಂಡು ಜನರು ಅತಂತ್ರರಾಗಿ ನಿರಾಶ್ರಿತರ ಕೇಂದ್ರಗಳಲ್ಲಿ ನೆಲೆಸಿರುವವರಿಗೆ ನೆರವಿನ ಮಹಾಪೂರವೇ ಹರಿದು ಬಂದಿದೆ.

ನಿರಾಶ್ರಿತರಿಗೆ ದಾನಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ನೀಡುವ ಅಗತ್ಯ ವಸ್ತುಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಸ್ವೀಕೃತಿ ಕೇಂದ್ರ ತೆರೆಯಲಾಗಿದೆ. ಸ್ವೀಕೃತಿ ಕೇಂದ್ರ ಐವರು ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಕೇಂದ್ರವು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಮಳೆಯ ಆರ್ಭಟಕ್ಕೆ ಎಲ್ಲವನ್ನು ಕಳೆದುಕೊಂಡ ಜನರಿಗೆ ರಾಜ್ಯದ ಮೈಸೂರು, ಉಡುಪಿ, ಬೆಂಗಳೂರು ನಗರ ಹಾಗೂ ಜಿಲ್ಲೆಯ ನಾನಾ ಕಡೆಗಳಿಂದ ಸಹಾಯಹಸ್ತ ನೀಡಲಾಗುತ್ತಿದ್ದು, ನಿರಾಶ್ರಿತರಿಗೆ ತಲುಪಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ.

ಇದುವರೆಗೂ 15 ಟನ್‌ ಅಕ್ಕಿ ಸ್ವೀಕರಿಸಲಾಗಿದೆ. ಅದರಲ್ಲಿ 31.5 ಟನ್‌ ಅಕ್ಕಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ತಲುಪಿಸಲಾಗಿದೆ. ಉಳಿದ ಅಕ್ಕಿಯನ್ನು ಅಗತ್ಯ ಬಿದ್ದ ಕಡೆಗಳಿಗೆ ನೀಡಲಾಗುತ್ತಿದೆ. 150 ಬಾಕ್ಸ್‌ ಬಿಸ್ಕೆಟ್ಸ್‌, 12 ಪಿಂಡಿ ಬೆಡ್‌ಶೀಟ್, 560 ಲೀಟರ್‌ ಕುಡಿಯುವ ನೀರಿನ ಬಾಟಲ್, ಹಾಲಿನ ಪುಡಿ, ಸಕ್ಕರೆ, ಗೋದಿಹಿಟ್ಟು ಸೇರಿದಂತೆ ಅಗತ್ಯ ವಸ್ತುಗಳು ಹರಿದು ಬರುತ್ತಿದ್ದು, ನಿರಾಶ್ರಿತರ ಕೇಂದ್ರಗಳಿಗೆ ನೀಡಲಾಗುತ್ತಿದೆ. ಇದುವರೆಗೂ ಸುಮಾರು 5 ಲಾರಿ ಲೋಡ್‌ಗಿಂತಲು ಹೆಚ್ಚು ಅಗತ್ಯ ವಸ್ತುಗಳನ್ನು ನಿರಾಶ್ರಿತರ ಕೇಂದ್ರಗಳಿಗೆ ನೀಡಲಾಗಿದೆ.

ಜಿಲ್ಲೆಯ ನೆರೆ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನು ನೀಡುವ ಪ್ರಕ್ರಿಯೆ ಜಿಲ್ಲೆಯ ಎಂ.ಎನ್‌.ಗಂಗೇಗೌಡ ಅವರು ಬಿಸ್ಕೇಟ್, ಮಂಡಕ್ಕಿ ಪೇಸ್ಟ್‌ ನೀಡುವ ಮೂಲಕ ಆರಂಭಗೊಂಡು ಇದುವರೆಗೂ ಅನೇಕ ದಾನಿಗಳು ನೆರವಿನ ಹಸ್ತ ಚಾಚಿದ್ದಾರೆ. ಅಜ್ಜಂಪುರದ ಜೂನಿಯರ್‌ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ, ವರ್ತಕರ ಸಂಘಗಳು, ಬೇಲೇನಹಳ್ಳಿ ಗ್ರಾಮಸ್ಥರು ಸೇರಿದಂತೆ ಅನೇಕರು ನೆರವು ನೀಡಿದ್ದಾರೆ.

ನೆರವು ಸ್ವೀಕೃತಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಭಾಸ್ಕರ್‌ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದು, ಅವರೊಂದಿಗೆ ಸಂತೋಷ್‌, ದತ್ತಾತ್ರಿ, ಚೇತನ್‌, ಹಾಲೇಶ್‌ ಹಗಲು ರಾತ್ರಿ ದಾನಿಗಳು ನೀಡಿದ ನೆರವನ್ನು ಸ್ವೀಕರಿಸಿ ನಿರಾಶ್ರಿತರ ಕೇಂದ್ರಗಳಿಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬ ದಾನಿ ನೀಡಿದ ನೆರವಿಗೆ ಸ್ವೀಕೃತಿ ಪತ್ರ ನೀಡಿ ಪಡೆದುಕೊಳ್ಳಲಾಗುತ್ತಿದೆ.

ಇದು ಜಿಲ್ಲಾಡಳಿತದಿಂದ ನಡೆಯುತ್ತಿದ್ದರೆ ಇನ್ನೂ ಅನೇಕರು ಗ್ರಾಮದ ಮುಖ್ಯಸ್ಥರು ಸಂಘ, ಸಂಸ್ಥೆಗಳು ದಾನಿಗಳು ನೇರವಾಗಿ ನೆರೆ ಪೀಡಿತ, ಗುಡ್ಡ ಕುಸಿತದಿಂದ ನಿರಾಶ್ರಿತರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಮಳೆಯಿಂದ ಎಲ್ಲವನ್ನು ಕಳೆದುಕೊಂಡ ಮಲೆನಾಡಿನ ಜನತೆಗೆ ಭರಪೂರ ನೆರವಿನ ಹಸ್ತ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನೋಡಲ್ ಅಧಿಕಾರಿ ಭಾಸ್ಕರ್‌, ಜಿಲ್ಲೆ ಹಾಗೂ ನೆರೆಯ ಜಿಲ್ಲೆಯಿಂದ ಅಪಾರ ಪ್ರಮಾಣದಲ್ಲಿ ಅಗತ್ಯ ವಸ್ತುಗಳ ನೆರವು ಬರುತ್ತಿದೆ. ಅದನ್ನು ಸ್ವೀಕರಿಸಿ ನಿರಾಶ್ರಿತರ ಕೇಂದ್ರಗಳಿಗೆ ಕಳಿಸಿಕೊಡಲಾಗುತ್ತಿದೆ. ಆ.14ರ ಮಧ್ಯರಾತ್ರಿ ಉಡುಪಿಯಿಂದ ಒಂದು ಲಾರಿ ಅಗತ್ಯ ವಸ್ತುಗಳನ್ನು ಕಳಿಸಿಕೊಡಲಾಗಿತ್ತು. ಮಧ್ಯರಾತ್ರಿಯೇ ಅದನ್ನು ಸ್ವೀಕರಿಸಿದ್ದೇವೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.