ಬೆಳೆ ಹಾನಿ ಸಮೀಕ್ಷೆಗೆ ತಂಡ ರಚನೆ

•ಹೋಬಳಿವಾರು ತಂಡದ ಸದಸ್ಯರಿಗೆ ಸೋಮವಾರ ತರಬೇತಿ: ಎಡಿಸಿ ಡಾ| ಕುಮಾರ್‌

Team Udayavani, Aug 24, 2019, 12:25 PM IST

Udayavani Kannada Newspaper

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿಯ ಅಂದಾಜು ಮಾಡಲು ಆಯಾ ಪ್ರದೇಶಗಳಲ್ಲಿ ಹೋಬಳಿವಾರು ತಂಡ ರಚಿಸಲಾಗಿದ್ದು, ಸದಸ್ಯರಿಗೆ ಸೋಮವಾರ ತರಬೇತಿ ನೀಡಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌ ಹೇಳಿದರು.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಈ ತಂಡಗಳು ಒಂದು ವಾರ ಕಾಲ ಪೂರ್ಣ ಸಮೀಕ್ಷೆ ನಡೆಸಿ ನಂತರ ವರದಿ ನೀಡಲಿವೆ. ಅದನ್ನು ಆಧರಿಸಿ ನಂತರ ಪರಿಹಾರದ ಬಗ್ಗೆ ಸರ್ಕಾರ ಆಲೋಚಿಸುತ್ತದೆ ಎಂದು ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ನಾಶವಾಗಿರುವ ವಾರ್ಷಿಕ ಬೆಳೆಗಳಾದ ಕಾಫಿ, ಅಡಕೆ ತೋಟಗಳ ಪ್ರಮಾಣ ಗೊತ್ತಾಗಿದೆ. ಜಿಲ್ಲೆಯಲ್ಲಿ ಮಹಾ ಮಳೆಯಿಂದ 28 ಸಾವಿರ ಹೆಕ್ಟೇರ್‌ ಕಾಫಿ ತೋಟ ನಾಶವಾಗಿದ್ದರೆ, 2500 ಹೆಕ್ಟೇರ್‌ನಲ್ಲಿ ಕೃಷಿ ಭೂಮಿ ಹಾಗೂ 150 ಹೆಕ್ಟೇರ್‌ನಲ್ಲಿ ಅಡಕೆ ತೋಟ ನಾಶವಾಗಿರುವುದು ಪ್ರಾಥಮಿಕ ಸಮೀಕ್ಷೆಯಿಂದ ಕಂಡುಬಂದಿದೆ ಎಂದು ಹೇಳಿದರು.

ತೋಟಗಾರಿಕೆ ಬೆಳೆಗಳು ನಾಶವಾಗಿದ್ದರೆ ಪ್ರತಿ ಹೆಕ್ಟೇರ್‌ಗೆ ಎನ್‌.ಡಿ.ಆರ್‌.ಎಫ್‌. ಸೂತ್ರದಂತೆ 33 ಸಾವಿರ ರೂ. ನೀಡಲಾಗುತ್ತದೆ. ಆದರೆ, ಈ ಪರಿಹಾರ ಹಾಗೂ ಆಗಿರುವ ನಷ್ಟಕ್ಕೆ ಸಮನಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್‌ ಘೋಷಣೆಯಾಗಬೇಕಿದೆ. ಅದನ್ನು ಸರ್ಕಾರ ತೀರ್ಮಾನಿಸುತ್ತದೆ ಎಂದು ಹೇಳಿದರು.

ಮನೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಸರ್ಕಾರ 5 ಲಕ್ಷ ರೂ.ನೀಡುತ್ತಿದೆ. ಅವರು ಹಾನಿಗೊಳಗಾದ ಪ್ರದೇಶ ದಲ್ಲೇ ಮತ್ತೆ ಹಾನಿಯಾಗುವ ಸಂಭವವಿಲ್ಲ ಎಂಬುದು ಮನವರಿಕೆ ಆದರೆ ಮಾತ್ರ ಅಲ್ಲಿಯೇಮನೆ ನಿರ್ಮಿಸಿಕೊಳ್ಳಲು ಹಣ ನೀಡಲಾಗು ವುದು. ಇಲ್ಲದಿದ್ದಲ್ಲಿ ಅವರ ಹೆಸರಿನಲ್ಲಿ ಬೇರೆ ಕಡೆ ಜಮೀನಿದ್ದರೆ ಅಲ್ಲೂ ಸಹ ಮನೆ ಕಟ್ಟಿಕೊಳ್ಳಬಹುದು. ಇವೆರಡೂ ಇಲ್ಲದಿದ್ದ ಕಡೆಯಲ್ಲಿ ಅವರಿಗೆ ನಿವೇಶನ ಒದಗಿಸಲು ಆಯಾ ಗ್ರಾಪಂ ಅಥವಾ ಪಕ್ಕದ ಗ್ರಾಮ ಪಂಚಾಯತ್‌ನಲ್ಲಿ ನಿವೇಶನ ನೀಡಲು ಜಮೀನು ಮೀಸಲಿಟ್ಟಿದ್ದಲ್ಲಿ ಆ ಜಾಗದಲ್ಲಿ ತಕ್ಷಣ ಅವರಿಗೆ ನಿವೇಶನ ನೀಡಲಾಗುವುದೆಂದು ತಿಳಿಸಿದರು.

ಈವರೆಗೂ ವಾಸಿಸುತ್ತಿದ್ದ ಸಂತ್ರಸ್ತರ ಮನೆ ಹಾಗೂ ತೋಟ ಅಥವಾ ಗದ್ದೆ ಅತಿವೃಷ್ಟಿಯಿಂದ ಪೂರ್ಣ ನಾಶವಾಗಿ ಅದು ಕಂದಾಯ ಭೂಮಿಯಾಗಿದ್ದಲ್ಲಿ, ಅದನ್ನು ಅರಣ್ಯ ಇಲಾಖೆಗೆ ನೀಡಿ, ಬದಲಿ ಭೂಮಿಯನ್ನು ಅರಣ್ಯ ಇಲಾಖೆಯಿಂದ ಪಡೆಯುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರದ ಒಪ್ಪಿಗೆಯೂ ಬೇಕಾಗುತ್ತದೆ. ಹಾಗಾಗಿ, ಅದು ಸ್ವಲ್ಪ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಆ ನಿಟ್ಟಿನಲ್ಲೂ ಯೋಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಡಳಿತ ಅತಿವೃಷ್ಟಿ ಹಾನಿಯ ಅಂದಾಜನ್ನು ಈಗಾಗಲೇ ಕೈಗೊಂಡಿದೆ. ಮನೆಗಳ ನಾಶ ಹಾಗೂ ಹಾನಿ, ಬೆಳೆ ಹಾನಿ ಹಾಗೂ ಕೃಷಿ ಭೂಮಿ ನಾಶದ ಅಂದಾಜು ಮಾಡಲು ತಂಡಗಳನ್ನೇ ರಚಿಸಲಾಗಿದೆ. ಮನೆ ನಾಶ ಹಾಗೂ ಹಾನಿ ಬಗ್ಗೆ ಈಗಾಗಲೇ ದತ್ತಾಂಶ ಸಂಗ್ರಹಣೆ ಪೂರ್ಣಗೊಳ್ಳುತ್ತಾ ಬಂದಿದೆ. ಉಳಿದಂತೆ ನಷ್ಟದ ಅಂದಾಜು ಪೂರ್ಣವಾಗಿ ಇನ್ನು 15 ದಿನಗಳ ಒಳಗೆ ಜಿಲ್ಲಾಡಳಿತದ ಕೈಸೇರಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.