ಹೆಚ್ಚಾಯ್ತು ರೋಗ; ಆಸ್ಪತ್ರೆಯಲ್ಲಿಲ್ಲ ಜಾಗ!

ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದೇ ಬೆಡ್‌ನ‌ಲ್ಲಿ ಇಬ್ಬರಿಗೆ ಚಿಕಿತ್ಸೆಆಸ್ಪತ್ರೆಯಲ್ಲಿ ರೋಗಿಗಳ ಪರದಾಟ

Team Udayavani, Jun 26, 2019, 5:39 PM IST

ಚಿಕ್ಕಮಗಳೂರು: ಒಂದೇ ಹಾಸಿಗೆಯಲ್ಲಿ ಇಬ್ಬರು ರೋಗಿಗಳು… ಖುರ್ಚಿಯ ಮೇಲೆ ಕೂರಿಸಿ ರೋಗಿಗೆ ಚಿಕಿತ್ಸೆ… ಇರುವ ವಾರ್ಡ್‌ಗಳೆಲ್ಲ ಭರ್ತಿ…

ಇದು ಕಳೆದ ಕೆಲ ದಿನದಿಂದ ನಗರದ ಜಿಲ್ಲಾಸ್ಪತ್ರೆಯಲ್ಲಿ ಕಂಡುಬರುತ್ತಿರುವ ದೃಶ್ಯ. ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರ ಹಾಗೂ ಮೈ-ಕೈ ನೋವಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಯತ್ತ ಮುಖ
ಮಾಡುತ್ತಿದ್ದಾರೆ. ಹೀಗಾಗಿಯೇ ಜಿಲ್ಲಾಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿದ್ದು,
ಒಂದೇ ಹಾಸಿಗೆಯಲ್ಲಿ ಇಬ್ಬರನ್ನು ಮಲಗಿಸಿ ಚಿಕಿತ್ಸೆ ನೀಡುವ ಅನಿವಾರ್ಯತೆ ಉಂಟಾಗಿದೆ.

ನಗರದ ಮಲ್ಲೇಗೌಡ ಆಸ್ಪತ್ರೆಯ ಹೊರರೋಗಿ ವಿಭಾಗದ ಪುರುಷರ ಹಾಗೂ ಮಹಿಳೆಯರ
ವಾರ್ಡ್‌ ತುಂಬಿ ಹೋಗಿದೆ. ಕಣ್ಣಿನ ಆಸ್ಪತ್ರೆ, ಸುಟ್ಟಗಾಯ, ವಾಂತಿಭೇದಿ ವಾರ್ಡ್‌ ಹಾಗೂ ಶಸ್ತ್ರ ಚಿಕಿತ್ಸೆ ನಂತರ ನೀಡುವ ಚಿಕಿತ್ಸೆ ವಿಭಾಗ, ಸಾಮೂಹಿಕ ಪ್ರಾರ್ಥನಾ ಕೊಠಡಿಯಲ್ಲೂ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ದಿನದಿಂದ ದಿನಕ್ಕೆ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಕುರ್ಚಿಯಲ್ಲಿಯೇ ಕುಳಿತು ಡ್ರಿಪ್ಸ್‌ ಹಾಕಿಕೊಂಡು ಚಿಕಿತ್ಸೆ ಪಡೆಯುತ್ತಿರುವುದು ಮಂಗಳವಾರ ಕಂಡು ಬಂದಿತು. ಕೆಲವರು ಒಂದೆರಡು ಬಾರಿ ಇದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ತೆರಳಿ ಮತ್ತೆ ಜ್ವರ ಹೆಚ್ಚಾದಾಗ ಮೂರನೆಯ ಬಾರಿ ಚಿಕಿತ್ಸೆಗೆ ಇದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ