ಜನರ ಬದುಕು ಬಲು ಕಷ್ಟ

ಕೋಡಿ ಬಿದ್ದ ಹಿರೇಕೊಳಲೆ ಕೆರೆಗೆ ಪತ್ನಿ ಪಲ್ಲವಿ ಜತೆ ಬಾಗಿನ ಅರ್ಪಿಸಿದ ಶಾಸಕ ಸಿ.ಟಿ.ರವಿ ಅಭಿಮತ

Team Udayavani, Aug 11, 2019, 1:22 PM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಹಿರೇಬೈಲು, ಕಳಸ, ಜಯಪುರ, ಬಾಳೆಹೊನ್ನೂರು ಮುಂತಾದೆಡೆ ಮಳೆಯಿಂದ ಆದ ತೊಂದರೆಗಳ ನಿವಾರ ಣೆಗೆ ಜಿಲ್ಲಾಡಳಿತ ಹಲವು ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಇನ್ನೂ ಪರಿಣಾಮಕಾರಿ ಯಾಗಿ ಎದುರಿಸಲು ಹಲವು ತಂಡಗಳು ಸನ್ನದ್ಧವಾಗಿವೆ. ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ನಗರದ ಕೆಲವು ಬಡಾವಣೆೆಗಳಿಗೆ ಕುಡಿಯುವ ನೀರು ಒದಗಿಸುವ ಹಿರೇಕೊಳಲೆ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶನಿವಾರ ಹಿರೇಕೊಳಲೆ ಕೆರೆಗೆ ಪತ್ನಿ ಪಲ್ಲವಿ ಅವರೊಂದಿಗೆ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ವರ್ಷದಂತೆ ಈ ಬಾರಿಯೂ ಕೆರೆ ಕೋಡಿ ಬಿದ್ದಿರುವುದು ಸಂತೋಷ ತಂದಿದೆ. ಕೆಲವು ಕಡೆ ಮಳೆಯಿಂದ ಅನೇಕ ಸಮಸ್ಯೆಗಳು ಆಗಿರುವುದನ್ನು ಇಡೀ ರಾಜ್ಯದಲ್ಲಿ ಕಾಣುತ್ತಿದ್ದೇವೆ. ರಾಜ್ಯದಲ್ಲಿ ಬಹುತೇಕ ಅಣೆಕಟ್ಟೆಗಳು ಭರ್ತಿಯಾಗಿದ್ದು, ಉಳಿದ ಡ್ಯಾಂಗಳು ಶೇ.80ರಷ್ಟು ಭರ್ತಿಯಾಗಿರುವುದು ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಭರ್ತಿಯಾಗುವ ಲಕ್ಷಣಗಳು ಕಾಣುತ್ತಿದೆ. ನಮ್ಮ ಜಿಲ್ಲೆಯಲ್ಲಿರುವ ಎಲ್ಲ ಕೆರೆ, ಕಟ್ಟೆಗಳು ಭರ್ತಿಯಾಗಿ ಬಾಗಿನ ಅರ್ಪಿಸುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಆತಂಕಪಡುವ ಅಗತ್ಯವಿಲ್ಲ: ಶುಕ್ರವಾರ ಕೊಡುಗು ಜಿಲ್ಲೆ ಅತಿವೃಷ್ಟಿ ಪ್ರದೇಶಗಳಿಗೆ ನಮ್ಮ ತಂಡ ಭೇಟಿ ನೀಡಿದ ಸಂದರ್ಭದಲ್ಲಿ 21ಕಡೆ ಪುನರ್ವಸತಿ ಶಿಬಿರಗಳನ್ನು ತೆರೆಯಲಾಗಿರುವುದನ್ನು ಗಮನಿಸಿದ್ದೇವೆ. ನದಿ ಪ್ರದೇಶಗಳ ಸಮೀಪ ವಾಸಿಸುವ ಜನರ ಬದುಕು ಕಷ್ಟಕರವಾಗಿದೆ. ಒಂದೇ ಕುಟುಂಬದ 5 ಜನರು ಮೃತ ಪಟ್ಟಿದ್ದು, ಏಳು ಮಂದಿ ಕಾಣೆಯಾಗಿದ್ದಾರೆ ಎಂದರು.

ಸರ್ಕಾರಕ್ಕೆ ಕ್ಷಣ ಕ್ಷಣದ ಮಾಹಿತಿ: ಹೇಮಾವತಿ ನದಿ ಭಾಗದಲ್ಲಿ ಮತ್ತು ಭದ್ರ ಉಪನದಿ ಪ್ರದೇಶಗಳಲ್ಲಿ ಜಲಾವೃತವಾಗಿರುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರುವ ಉದ್ದೇಶದಿಂದ ವೈಜ್ಞಾನಿಕ ಬೋಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಹೆಲಿಕಾಪ್ಟರ್‌ ಅವಶ್ಯಕತೆ ಕಂಡು ಬಂದರೆ ವ್ಯವಸ್ಥೆ ಮಾಡಲು ಈಗಾಗಲೇ ಸಂಬಂಧಪಟ್ಟವರಲ್ಲಿ ಕೋರಲಾಗಿದೆ. ಜಿಲ್ಲೆಯಲ್ಲಿ ಸಂಪರ್ಕ ಕಲ್ಪಿ ಸುವ ವಿವಿಧ ಭಾಗದ ರಸ್ತೆಗಳ ಕಡಿತವಾಗಿರುವ ಬಗ್ಗೆಮಾಹಿತಿ ಪಡೆಯಲಾಗಿದ್ದು, ಜಿಲ್ಲಾಧಿಕಾರಿಗಳು ನಿರಂತರಸಂಪರ್ಕದಲ್ಲಿದ್ದಾರೆ. ಕ್ಷಣ ಕ್ಷಣದ ಮಾಹಿತಿ ಪಡೆದು ಸರ್ಕಾರಕ್ಕೆ ತಿಳಿಸುವ ಕೆಲಸ ಮಾಡಲಾಗಿದೆ. ಅಗತ್ಯವಿದ್ದರೆ ಮುಖ್ಯಮತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಾರೆ ಎಂದರು. ರಾಜ್ಯದಲ್ಲಿ ಅತಿವೃಷ್ಟಿಗೆ ಒಳಗಾಗಿರುವ ವೇಳೆ ಸರ್ಕಾರದ ಜೊತೆ ಸಾರ್ವಜನಿಕರು ಸಹಕಾರ ನೀಡುವಂತೆ ಜನತೆಯಲ್ಲಿ ಮನವಿ ಮಾಡಿದ ಶಾಸಕರು, ಅತಿವೃಷ್ಟಿಗೆ ಒಳಗಾಗಿರುವ ಜನ-ಜಾನುವಾರು ಮತ್ತು ಆಗಿರುವ ಸಮಸ್ಯೆಗಳು ಮತ್ತು ನಷ್ಟದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮನುಷ್ಯ ಪ್ರಕೃತಿ ಜೊತೆ ಜೊತೆಯಲ್ಲಿ ಬದುಕಬೇಕಾಗಿರುವುದರಿಂದ ಪ್ರಕೃತಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ವಿಚಾರ. ಈಗ ರಾಜ್ಯದ ಹಲವು ಜಿಲ್ಲೆಗಳು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿವೆ. ಮೊದಲು ಅವರ ನೆರವಿಗೆ ದಾವಿಸಬೇಕಿದೆ. ಅತಿವೃಷ್ಟಿ ಪ್ರದೇಶಗಳಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಸಂಸದರು, ಶಾಸಕರು ಎಲ್ಲರೂ ಸಹ ಪಕ್ಷಭೇದ ಮರೆತು ಜನತೆಯ ನೆರವಿಗೆ ನಿಂತಿದ್ದಾರೆ. ಸರ್ಕಾರಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದರು. ನಗರಸಭೆ ಮಾಜಿ ಅಧ್ಯಕ್ಷರಾದ ಎಚ್.ಡಿ.ತಮ್ಮಯ್ಯ, ಪುಷ್ಪರಾಜ್‌, ಮಾಜಿ ಸದಸ್ಯ ರಾಜಶೇಖರ್‌, ನಗರಸಭೆ ಆಯುಕ್ತ ಪರಮೇಶಿ, ಎಇಇಲೋಕೇಶ್‌, ಜನಪ್ರತಿನಿಧಿಗಳು ಅಧಿಕಾರಿಗಳು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ನಗರದಲ್ಲಿರುವ ಜಾಹೀರಾತು (ಕಬ್ಬಿಣದ ಸ್ಟ್ರಕ್ಚರ್‌) ಫ‌ಲಕಗಳನ್ನು 15ದಿನಗಳ ಒಳಗಾಗಿ ತೆರವು ಮಾಡುವುದಕ್ಕೆ ಕ್ರಮ ವಹಿಸುವಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌....

  • ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ 1,253 ಕೋಟಿ ರೂ.ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿಯ...

  • ಬೆಂಗಳೂರು: ದೇಶ ಕಟ್ಟಿದ ಮಹಾರತ್ನಗಳಂಥ ಕಂಪನಿಗಳನ್ನೇ ಕೇಂದ್ರ ಸರ್ಕಾರ ಬಿಕರಿಗಿಟ್ಟಿದೆ ಎಂದು ಸಾಹಿತಿ ದೇವನೂರು ಮಹಾದೇವ ಆತಂಕ ವ್ಯಕ್ತಪಡಿಸಿದರು. ಕೆನರಾ ಬ್ಯಾಂಕ್‌...

  • ಬೆಂಗಳೂರು: ಹಿಂದೂ ಆಧ್ಯಾತ್ಮಿಕತೆಗೂ ಸೂಫಿ ಚಿಂತನೆಗೂ ಹತ್ತಿರದ ನಂಟಿದೆ ಎಂದು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅಂಕಿತ ಪ್ರಕಾಶನ ಶನಿವಾರ ಬಸವನಗುಡಿಯ...

  • ಬೆಂಗಳೂರು: ಪ್ರಾಪ್ತ ಬಾಲಕನಿಗೆ ಆತನ ಪೋಷಕರೇ ಬಲವಂತವಾಗಿ ಮದುವೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿರುವ ಜಾಹೀರಾತು (ಕಬ್ಬಿಣದ ಸ್ಟ್ರಕ್ಚರ್‌) ಫ‌ಲಕಗಳನ್ನು 15ದಿನಗಳ ಒಳಗಾಗಿ ತೆರವು ಮಾಡುವುದಕ್ಕೆ ಕ್ರಮ ವಹಿಸುವಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌....

  • ಬೆಳಗಾವಿ: ಪಕ್ಕದಲ್ಲೇ ಜೀವನದಿ ಕೃಷ್ಣೆ ಹರಿಯುತ್ತಿದ್ದರೂ ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುವ ನದಿ ತೀರದ ನೂರಾರು ಗ್ರಾಮಗಳಿಗೆ...

  • ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ 1,253 ಕೋಟಿ ರೂ.ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿಯ...

  • ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ...

  • ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನಾ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ...