ವಸತಿ ಶಾಲೆಗಳ ನಿರ್ಮಾಣಕ್ಕೆ ಸ್ಥಳ ಗುರುತು

•ಶೀಘ್ರ ಕಾಮಗಾರಿ ಆರಂಭ •ಈಗಾಗಲೇ ಕಂದಾಯ ಇಲಾಖೆಗೆ ಜಾಗ ಹಸ್ತಾಂತರ

Team Udayavani, Apr 26, 2019, 4:53 PM IST

Udayavani Kannada Newspaper

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ವಸತಿ ಶಾಲೆಗಳಿಗೆ ಕಟ್ಟಡವನ್ನು ನಿರ್ಮಿಸಲು ಸ್ಥಳವನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ್‌ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2015-16ನೇ ಸಾಲಿನಲ್ಲಿ ಜಿಲ್ಲೆಗೆ ಹೊಸದಾಗಿ 13 ಶಾಲೆಗಳನ್ನು ಸರ್ಕಾರ ಮಂಜೂರು ಮಾಡಿತ್ತು. ಸ್ವಂತ ಕಟ್ಟಡ ನಿರ್ಮಾಣವಾಗುವವರೆಗೂ ಅವುಗಳನ್ನು ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ಈಗ 10 ಶಾಲೆಗಳಿಗೆ ಜಾಗವನ್ನು ಗುರುತಿಸಲಾಗಿದೆ. ಉಳಿದ 3 ಶಾಲೆಗಳಿಗೂ ಒಂದು ವಾರದೊಳಗಾಗಿ ಜಾಗವನ್ನು ಗುರುತಿಸಲಾಗುವುದು. ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದರು.

ಕಳಸ, ಬಾಳೂರು, ಅಂಬಳೆ, ಎಚ್.ರಂಗಾಪುರ, ಅಮೃತಾಪುರ, ಸಿಂಗಟಗೆರೆ, ಪಂಚನಹಳ್ಳಿ, ಶೃಂಗೇರಿ ತಾಲೂಕಿನ ಕಸಬಾ ಶಾಲೆಗಳಿಗೆ ಜಾಗವನ್ನು ಗುರುತಿಸಲಾಗಿದ್ದು, ಈಗಾಗಲೆ ಜಾಗವನ್ನು ಇಲಾಖೆಗೆ ಕಂದಾಯ ಇಲಾಖೆ ಹಸ್ತಾಂತರಿಸಿದೆ. ಉಳಿದಂತೆ ಚೌಳಹಿರಿಯೂರು, ಮಲ್ಲಂದೂರು ಮತ್ತು ಆಲ್ದೂರು ಶಾಲೆಗಳಿಗೆ ಶೀಘ್ರವೇ ಜಾಗವನ್ನು ಗುರುತಿಸಲಾಗುವುದು ಎಂದು ಹೇಳಿದರು.

ಅನುದಾನ ಮಂಜೂರು: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಿದ್ಯಾರ್ಥಿನಿಲಯಗಳ ಕಟ್ಟಡಗಳ ದುರಸ್ತಿಗೆ ಸರ್ಕಾರ 1.80 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಿದೆ. ಈ ಹಣದಲ್ಲಿ 13 ಕಟ್ಟಡಗಳ ದುರಸ್ತಿ ಕಾರ್ಯ ಮಾಡಲಾಗುವುದು. ಇದಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳು ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಕಚೇರಿ ಮೂಲಕ ಕಾಮಗಾರಿ ಮಾಡಿಸುವಂತೆ ಆದೇಶಿಸಿದ್ದಾರೆ. ಸರ್ಕಾರ ಹಣವನ್ನು ಬಿಡುಗಡೆ ಮಾಡಿದ ಕೂಡಲೆ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಸಿಬ್ಬಂದಿ ಕೊರತೆ: ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಶೇ. 50ರಷ್ಟು ವಾರ್ಡನ್‌ಗಳ ಹುದ್ದೆ ಖಾಲಿ ಇತ್ತು. ಈಗ ಸರ್ಕಾರವು ವಾರ್ಡನ್‌ ಹುದ್ದೆಗೆ ನೇಮಕಾತಿ ಮಾಡಿಕೊಂಡಿದ್ದು, ಜಿಲ್ಲೆಗೂ ವಾರ್ಡನ್‌ಗಳು ಬರಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ವಾಟ್ಸ್‌ ಆಪ್‌: ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನಿಗದಿತ ಆಹಾರ ನೀಡಬೇಕು. ಆದರೆ ಆಯಾ ದಿನ ನೀಡಬೇಕಿದ್ದ ಆಹಾರವನ್ನು ನೀಡದೆ ಬೇರೆ ಆಹಾರ ನೀಡುತ್ತಾರೆ ಎಂಬ ದೂರುಗಳು ಕೇಳಿ ಬರುತ್ತಿತ್ತು. ಇದನ್ನು ತಡೆಗಟ್ಟಲು ಇಲಾಖೆ ಮುಂದಾಗಿದೆ. ಪ್ರತಿ ಜಿಲ್ಲೆಯಲ್ಲಿಯೂ ಎಲ್ಲ ವಿದ್ಯಾರ್ಥಿನಿಲಯಗಳ ವಾರ್ಡನ್‌ಗಳನ್ನು ಒಳಗೊಂಡಂತೆ ವಾಟ್ಸ್‌ ಆಪ್‌ ಗ್ರೂಪ್‌ಗ್ಳನ್ನು ಮಾಡಲಾಗಿದೆ. ಆ ಗ್ರೂಪ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರೂ ಸೇರಿದಂತೆ ಹಿರಿಯ ಅಧಿಕಾರಿಗಳು ಇರುತ್ತಾರೆ. ಪ್ರತಿನಿತ್ಯ ಬೆಳಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ವಿದ್ಯಾರ್ಥಿಗಳಿಗೆ ನೀಡುವ ಸಂದರ್ಭದಲ್ಲಿ ವಾರ್ಡನ್‌ಗಳು ಆಹಾರ ಪದಾರ್ಥದ ಫೋಟೊ ತೆಗೆದು ವಾಟ್ಸ್‌ ಆಪ್‌ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು, ಇಲಾಖಾ ವ್ಯಾಪ್ತಿಯ ಭವನಗಳ ಕುರಿತ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಲಾಗಿದೆ. ಜಿಲ್ಲೆಯಲ್ಲಿ 191 ಕಾಮಗಾರಿಗಳು ನಡೆಯುತ್ತಿದ್ದು, ಈ ಪೈಕಿ 180 ಕಾಮಗಾರಿಗಳನ್ನು ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. 181 ಬವನಗಳಲ್ಲಿ 176 ನ್ನು ಅಪ್‌ಡೇಟ್ ಮಾಡಲಾಗಿದೆ. ಸಾರ್ವಜನಿಕರು ಇಲಾಖೆಯ ವೆಬ್‌ಸೈಟ್‌ಗೆ ಹೋಗಿ ಅವುಗಳನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇಲಾಖಾ ವತಿಯಿಂದ 58 ವಿದ್ಯಾರ್ಥಿನಿಲಯಗಳನ್ನು ನಡೆಸಲಾಗುತ್ತಿದೆ. ಈ ಪೈಕಿ ನರಸಿಂಹರಾಜಪುರ ತಾಲೂಕಿನ 2 ಹಾಗೂ ಮೂಡಿಗೆರೆ ತಾಲೂಕಿನ 1 ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ಈಗ ಅದಕ್ಕೆ ಜಾಗವನ್ನು ಗುರುತಿಸಲಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ದಲಿತ ದೌರ್ಜನ್ಯ ಪ್ರಕರಣಗಳಿಗೆ 2018-19ನೇ ಸಾಲಿನಲ್ಲಿ 41ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಕೆಲವೊಂದು ಪ್ರಕರಣಗಳಿಗೆ ಪರಿಹಾರ ನೀಡುವುದು ಬಾಕಿ ಇದ್ದು, ಅದನ್ನು ಚುನಾವಣಾ ನೀತಿ ಸಂಹಿತೆ ತೆರವುಗೊಂಡ ನಂತರ ವಿತರಿಸಲಾಗುವುದು ಎಂದರು.

ಅಂತರ್ಜಾತಿ ವಿವಾಹ
2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 277 ಅಂತರ್ಜಾತಿ ವಿವಾಹಗಳಾಗಿದ್ದು, ಅವರಿಗೆ 3.30 ಕೋಟಿ ರೂ.ಗಳನ್ನು ಇಲಾಖಾ ವತಿಯಿಂದ ನೀಡಲಾಗಿದೆ. ಪರಿಶಿಷ್ಟ ಜಾತಿಯ ಹುಡುಗ ಬೇರೆ ಜಾತಿಯ ಹುಡುಗಿಯನ್ನು ವಿವಾಹವಾದರೆ 2.50 ಲಕ್ಷ ರೂ. ಪರಿಶಿಷ್ಟ ಜಾತಿಯ ಹುಡುಗಿಯನ್ನು ಬೇರೆ ಜಾತಿಯ ಹುಡುಗ ವಿವಾಹವಾದರೆ 3 ಲಕ್ಷ ರೂ. ನೀಡಲು ಅವಕಾಶವಿದೆ. ಅದರಂತೆ 277 ಪ್ರಕರಣಗಳಿಗೆ 3.30 ಕೋಟಿ ರೂ. ನೀಡಲಾಗಿದೆ. ಅದೇ ರೀತಿ ಪರಿಶಿಷ್ಟ ಜಾತಿಯಲ್ಲಿರುವ ಒಳ ಜಾತಿಗಳವರು ವಿವಾಹವಾದ ಪ್ರಕರಣಗಳು 11 ಇದ್ದು ಅವರಿಗೆ 22 ಲಕ್ಷ ರೂ. ನೀಡಲಾಗಿದೆ.
ಬಿ. ಮಲ್ಲಿಕಾರ್ಜುನ್‌,
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.