ಕೃಷ್ಣಾಪುರ ಕಾರು ಮರಕ್ಕೆ ಢಿಕ್ಕಿ ಹೊಡೆದು ಇಬ್ಬರ ಸಾವು, ಓರ್ವ ಗಂಭೀರ
Team Udayavani, Dec 19, 2019, 8:25 PM IST
ಮೂಡಿಗೆರೆ : ಮೂಡಿಗೆರೆಯ ಕೃಷ್ಣಾಪುರ ಬಳಿ ಕಾರು ಅಪಘಾತಕ್ಕೆ ಈಡಾಗಿ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಗುರುವಾರ ಸಂಜೆ ವೇಳೆಗೆ ಕೃಷ್ಣಾಪುರದ ರಾಕ್ ಗಾರ್ಡನ್ ಬಳಿ ಮಾರುತಿ 800 ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿಗಳು ಆದರ್ಶ್ (16) ಹಾಗೂ ಧ್ಯಾನ್(16) ಎಂದು ಗುರುತಿಸಲಾಗಿದೆ. ಗಾಯಗೊಂಡ ಇನ್ನೋರ್ವ ಹರ್ಷಿತ್ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರೂ ಮುತ್ತಿಗೆಪುರ ಹರೀಶ್ ಪಿ.ಯು ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದರು.
ಅಪಘಾತ ಸಂಭವಿಸಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಘಟನಾ ಸ್ಥಳಕ್ಕೆ ಮೂಡಿಗೆರೆ ಠಾಣಾಧಿಕಾರಿ ರವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.