ಕೇಂದ್ರದಿಂದ ರಾಜ್ಯಕ್ಕೆ 2 ಲಕ್ಷ ಕೋಟಿ ಅನುದಾನ: ರವಿ


Team Udayavani, Jun 2, 2020, 1:30 PM IST

ಕೇಂದ್ರದಿಂದ ರಾಜ್ಯಕ್ಕೆ 2 ಲಕ್ಷ ಕೋಟಿ ಅನುದಾನ: ರವಿ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಇದುವರೆಗೂ 2  ಲಕ್ಷ 19 ಸಾವಿರ ಕೋಟಿ ರೂ. ಅನುದಾನ ರಾಜ್ಯಕ್ಕೆ ನೀಡಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದರು. ಸೋಮವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್‌ ಸರ್ಕಾರಕ್ಕೆ ಹೋಲಿಸಿದರೆ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಶೇ.180 ರಷ್ಟು ಅನುದಾನ ಬಂದಿದೆ ಎಂದರು.

ರಾಜ್ಯಕ್ಕೆ ಐಎಟಿ ನೀಡಿದ್ದು ಮೋದಿ ಸರ್ಕಾರ. ಏಳು ಲಕ್ಷ ಮನೆ 18 ಸಾವಿರ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ತುಮಕೂರಿಗೆ ಹೆಲಿಕ್ಯಾಪ್ಟರ್‌  ಉತ್ಪಾದನಾ ಘಟಕ ಮಂಜೂರಾಗಿದೆ. ಬೀದರ್‌, ಕಲಬುರ್ಗಿ ರೈಲ್ವೆ ಯೋಜನೆ ಪೂರ್ಣಗೊಳಿಸಲಾಗಿದೆ. 240 ಜನರಿಕ್‌ ಔಷ ಧ ಮಳಿಗೆಗಳ ಕಾರ್ಯ ನಿರ್ವಹಿಸುತ್ತಿವೆ ಎಂದರು. ರಾಜ್ಯದ ರೈತರು 11 ಸಾವಿರ ಕೋಟಿ ಪರಿಹಾರವನ್ನು ಫಸಲ್‌ ಭೀಮಾ ಯೋಜನೆಯಡಿ ಸದುಪಯೋಗಪಡೆದುಕೊಂಡಿದ್ದಾರೆ. ಬೆಂಬಲ ಬೆಲೆ ಘೋಷಣೆ ಮಾಡಿದೆ. ಸ್ಮಾಟ್‌ ಸಿಟಿ ಯೋಜನೆಯಡಿಯಲ್ಲಿ ರಾಜ್ಯಕ್ಕೆ 1960 ಕೋಟಿ ಹಣ ಬಿಡುಗಡೆ ಮಾಡಿದೆ. 171 ಕೋಟಿ 69 ಲಕ್ಷ ರೂ. ಬರ ಪರಿಹಾರ ನೆರೆ ಪರಿಹಾರ ಬಿಡುಗಡೆ ಮಾಡಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 27,487 ಕೋಟಿ ರೂ. ಹಣ ಮಂಜೂರಾಗಿದೆ. ರೈಲ್ವೆ ಯೋಜನೆಗೆ 2197 ಕೋಟಿ ರೂ. ನೀಡಿದೆ. ನಮ್ಮ ಮೆಟ್ರೋ ಯೋಜನೆಗೆ 8,719 ಕೋಟಿ ಅನುದಾನ ಕೇಂದ್ರ ಸರ್ಕಾರ ನೀಡಿದೆ. ಉಜ್ವಲ ಯೋಜನೆಯಡಿ 4,300 ಕೋಟಿ ರೂ. ಅನುದಾನ ನೀಡಿದೆ. ಕೃಷಿ ಸಿಂಚಾಯಿ ಯೋಜನೆ 405 ಕೋಟಿ, ಸಾರಿಗೆ ವ್ಯವಸ್ಥೆ ಸುಧಾರಣೆಗೆ 239 ಕೋಟಿ, ಪ್ರಧಾನ ಮಂತ್ರಿ ಅವಾಸ್‌ ಯೋಜನೆಯಡಿ 219 ಕೋಟಿ ರೂ., ಮಣ್ಣಿನ ಆರೋಗ್ಯ ಕಾರ್ಡ್‌ ವಿತರಣೆಗೆ 31 ಕೋಟಿ ಹಣ ಕೇಂದ್ರ ಸರ್ಕಾರ ನೀಡಿದೆ. ಕಾಳು ಮೆಣಸು ಆಮದು ಬಗ್ಗೆ ರೈತರಿಂದ ದೂರು ಬಂದ ಹಿನ್ನೆಲೆಯಲ್ಲಿ ಆಮದು ಬ್ಯಾನ್‌ ಮಾಡಿ ಬೆಂಬಲ ಬೆಲೆ ಘೋಷಣೆ ಮಾಡಿ ಬೆಲೆ ಸ್ಥಿರತೆ ಮಾಡುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದರು.

ಜಿಲ್ಲೆಗೆ 2,838 ಕೋಟಿ 59 ಲಕ್ಷ ಅನುದಾನವನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಯಡಿ ನೆರವು ನೀಡಿದೆ.  ದೀನ್‌ ದಯಾಳ್‌ ಉಪಾಧ್ಯಾಯ ಗ್ರಾಮೀಣ ವಿದ್ಯುತ್‌ ಜ್ಯೋತಿ ಯೋಜನೆಯಡಿ 195 ಕೋಟಿ ಬಿಡುಗಡೆಯಾಗಿದೆ. ಸೌಭಾಗ್ಯ ಯೋಜನೆಯಡಿಯಲ್ಲಿ 2 ಕೋಟಿ 65 ಲಕ್ಷ ನೀಡಿದೆ. ನಗರ ಪ್ರದೇಶದ ಸಮಗ್ರ
ವಿದ್ಯುತ್‌ ಅಭಿವೃದ್ಧಿ ಯೋಜನೆಗೆ 22 ಕೋಟಿ 35 ಲಕ್ಷ, ಆಯುಷ್ಮಾನ್‌ ಭಾರತ್‌ ಯೋಜನೆಯಡಿ 32 ಕೋಟಿ 98 ಲಕ್ಷ ರೂ. 19.259 ಜಿಲ್ಲೆಯ ಜನತೆ ಸದುಪಯೋಗಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕೊಪ್ಪ ಮೆಡಿಕಲ್‌ ಆಸ್ಪತ್ರೆಗೆ 12 ಕೋಟಿ, ರಾಷ್ಟ್ರೀಯ ಹೆದ್ದಾರಿಗೆ 731 ಕೋಟಿ ರೂ., ಅಮೃತ್‌ ಯೋಜನೆಗೆ 102 ಕೋಟಿ 57 ಲಕ್ಷ, ಪಂಚಾಯತ್‌ ರಾಜ್‌ ಸಂಸ್ಥೆಗಳಿಗೆ 120 ಕೋಟಿ 72 ಲಕ್ಷ ರೂ., ನಗರ ಸ್ಥಳೀಯ ಸಂಸ್ಥೆಗಳಿಗೆ 58 ಕೋಟಿ 25 ಲಕ್ಷ ರೂ. ಅನುದಾನ ಕೇಂದ್ರ ಸರ್ಕಾರ ನೀಡಿದೆ. ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ 28 ಕೋಟಿ ರೂ., ಕಿಸಾನ್‌ ಸನ್ಮಾನ್‌ ಯೋಜನೆಗೆ 86 ಕೋಟಿ 18 ಲಕ್ಷ ರೂ., ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 41 ಕೋಟಿ 9 ಲಕ್ಷ ಹಣ ನೀಡಿದೆ. ಆತ್ಮ ಯೋಜನೆ, ಪ್ರಧಾನ ಮಂತ್ರಿ ಫಸಲ್‌ ಭೀಮಾ, ಹವಾಮಾನ ಆಧಾರಿತ ಬೆಳೆ ವಿಮೆ, ರೈಲ್ವೆ ಸೇರಿದಂತೆ 2,838 ಕೋಟಿ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರ ನೆರವು ನೀಡಿದೆ ಎಂದರು.

ವಿಪಕ್ಷದವರು ಕೇಂದ್ರ ಸರ್ಕಾರದಿಂದ ಬಿಡಿಗಾಸು ಬಂದಿಲ್ಲ ಎಂದು ಆರೋಪ ಮಾಡುತ್ತಿದ್ದರು. ಕಳೆದ ಐದು ವರ್ಷದಲ್ಲಿ ಐತಿಹಾಸಿಕ ಸಾಧನೆ, ಕ್ರಾಂತಿಕಾರಕ
ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಜಾಗತಿಕ  ಸಂಕಷ್ಟದ ನಡುವೆಯೂ ಐತಿಹಾಸಿಕ ಸಾಧನೆ ಕೇಂದ್ರ ಸರ್ಕಾರ ಮಾಡಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಡೂರು ಕ್ಷೇತ್ರದ ಶಾಸಕ ಬೆಳ್ಳಿಪ್ರಕಾಶ್‌, ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ
ಜಿಲ್ಲಾಧ್ಯಕ್ಷ ಕಲ್ಮುರಡಪ್ಪ, ವರಸಿದ್ದಿ ವೇಣುಗೋಪಾಲ್‌ ಇದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.