9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

ಅಮೆರಿಕದಿಂದ ಬಂದ ವ್ಯಕ್ತಿಯ ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಬಚ್ಚಿಟ್ಟಿದ್ದರು

Team Udayavani, Apr 17, 2024, 8:18 PM IST

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಮೆರಿಕದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ಬಿಡದಿ ವ್ಯಕ್ತಿಯ 9 ವರ್ಷದ ಮಗಳನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಬಚ್ಚಿಟ್ಟು, ಅನಂತರ ಆ ವ್ಯಕ್ತಿಯನ್ನು ಬೆದರಿಸಿ ಎಲ್ಲ ಆಸ್ತಿ ಬರೆಯಿಸಿಕೊಂಡಿದ್ದಾರೆ. ಇದಕ್ಕೆ ನನ್ನ ಬಳಿ ದಾಖಲೆಗಳಿವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೊಸ ಬಾಂಬ್‌ ಸಿಡಿಸಿದ್ದಾರೆ.

ಮೂಡಿಗೆರೆ ಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಮತಯಾಚನೆ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಮೆರಿಕದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ವ್ಯಕ್ತಿಯ ಆಸ್ತಿ ಬರೆಸಿಕೊಂಡಿದ್ದರು. ಇದರ ದಾಖಲೆ ನನ್ನ ಬಳಿ ಇದೆ. ಬಿಡದಿ ಬಳಿ ಐಟಿ ಕಂಪನಿ ಸ್ಥಾಪನೆ ಮಾಡಿದ್ದರು. ಇದಕ್ಕೆ ಡಿಕೆಶಿ ಸುಳ್ಳು ಕ್ರಯಪತ್ರ ಸೃಷ್ಟಿಸಿದ್ದರು. ಈ ಪ್ರಕರಣ ಹೈಕೋರ್ಟ್‌ಗೆ ಹೋಗಿ ಡಿಕೆಶಿಗೆ ಮುಖಭಂಗವಾಯಿತು. ಬಳಿಕ ಆಸ್ತಿ ಮಾಲಕನ 9 ವರ್ಷದ ಮಗಳನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಬೇರೊಂದು ಮನೆಯಲ್ಲಿ ಕೂಡಿಟ್ಟಿದ್ದರು. ಮಗಳು ಬೇಕೆಂದರೆ ಸಹಿ ಮಾಡು ಎಂದು ಬೆದರಿಸಿದ್ದರು. ಇದಕ್ಕೆ ನನ್ನ ಬಳಿ ದಾಖಲೆಯಿದೆ ಎಂದರು.

ವ್ಯಕ್ತಿ ಆಸ್ತಿ ಮಾರಾಟ ಮಾಡಿದ್ದೆಂದು ಹೇಳಲು ಅವರಿಗೆ ಚೆಕ್‌ ಕೊಡುತ್ತಾರೆ. 16 ಲಕ್ಷ ರೂ. ಹಾಗೂ 4 ಲಕ್ಷ ರೂ. ಮೌಲ್ಯದ್ದು 2 ಚೆಕ್‌ಗಳು ಲ್ಯಾಪ್ಸ್‌ ಆಗುತ್ತವೆ. ಇದನ್ನು ಹೊರಗೆ ಹೇಳಿದರೆ ಕಬ್ಬನ್‌ಪಾರ್ಕ್‌ನಲ್ಲಿ ಏನಾಗುತ್ತೆ ಅಂತಾ ತಿಳ್ಕೊ ಎಂದೂ ಬೆದರಿಸುತ್ತಾರೆ. ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು. ಇದನ್ನು ಎಲೆಕ್ಷನ್‌ನಲ್ಲಿ ಬಳಸಿಕೊಳ್ಳಿ ಎಂದು ಲಾಯರ್‌ ಒಬ್ಬರು ದಾಖಲೆ ತಂದುಕೊಟ್ಟರು. ನಾನು ಅನ್ಯಾಯಕ್ಕೊಳಗಾದ ವ್ಯಕ್ತಿಯ ಬಳಿ ಹೋದಾಗ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಜೀವನಕ್ಕಾಗಿ ಬೇರೆಯವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಮಾತನಾಡಿಸಿದಾಗ ಕರ್ನಾಟಕದ ಯಾರಿಗೂ ಮತ ಹಾಕಲ್ಲ. ನಾನು ಓಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಈ ಕರ್ನಾಟಕ ಸಾಕು ಎಂದರು. ಇದು ನಡೆದು ಬಹಳ ವರ್ಷ ಆಗಿದೆ. ಇದಕ್ಕೆ ಸಂಬಂಧಿ ಸಿದ ದಾಖಲೆಗಳು ನನ್ನ ಬಳಿ ಇವೆ ಎಂದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.