ವಿಶ್ವಮಾನವ ತತ್ವ ಅಳವಡಿಸಿಕೊಳ್ಳಿ

Team Udayavani, Jan 24, 2019, 10:01 AM IST

chikk-1.jpg

ಚಿಕ್ಕಮಗಳೂರು: ಸಮಾಜ ಮತ್ತು ದೇಶದ ಹಿತದೃಷ್ಟಿಯಿಂದ ಎಲ್ಲರೂ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವ ಮೈಗೂಡಿಸಿಕೊಳ್ಳಬೇಕು ಎಂದು ಹೊರನಾಡು ಶ್ರೀ ಅನ್ನಪೂಣೇಶ್ವರಿ ದೇವಾಲಯದ ಧರ್ಮಕರ್ತ ಡಾ|ಜಿ.ಭೀಮೇಶ್ವರ ಜೋಶಿ ಹೇಳಿದರು.

ಬೆಂಗಳೂರಿನ ಮಾತೃ ಭೂಮಿ ಸಂಸ್ಥೆ ತನ್ನ 13ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಕುವೆಂಪು ಕಲಾ ಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಕುವೆಂಪು ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಭಾರತೀಯರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ವೈಜ್ಞಾನಿಕವಾಗಿ ಬಹಳಷ್ಟು ಬೆಳೆದಿದ್ದೇವೆ. ಆದರೆ ಜಾತಿ, ಮತ ಮತ್ತು ಧರ್ಮಗಳ ವಿಚಾರದಲ್ಲಿ ಸಂಕುಚಿತರಾಗಿ ನಾವು ಹಾಳಾಗುವುದರ ಜೊತೆಗೆ ಸಮಾಜ ಮತ್ತು ದೇಶವನ್ನೂ ಹಾಳುಗೆಡವುತ್ತಿದ್ದೇವೆ ಎಂದು ವಿಷಾದಿಸಿದರು.

ಕುವೆಂಪು ಅವರ ವಿಶ್ವಮಾನವ ತತ್ವವನ್ನು ಎಲ್ಲರೂ ಪಾಲಿಸಬೇಕು. ಹೃದಯ ವೈಶಾಲ್ಯತೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಭಾವೈಕ್ಯತೆ ಬೆಳೆಯುತ್ತದೆ. ದೇಶದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ ಎಂದು ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕುವೆಂಪು ವಿಶ್ವಮಾನವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್‌, ಸನ್ಮಾನ ಮತ್ತು ಗೌರವಗಳು ಇನ್ನೂ ಹೆಚ್ಚಿನ ಸಾಧನೆಗೆ ಪ್ರೇರಣೆ ನೀಡುವುದರ ಜೊತೆಗೆ ಜವಾಬ್ದಾರಿಯನ್ನೂ ಹೆಚ್ಚಿಸುತ್ತವೆ ಎಂದರು.

ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವ ಎಚ್.ಎಸ್‌.ಭೋಜ್ಯಾನಾಯ್ಕ ಮಾತನಾಡಿ, ಇಂದಿನ ಪೀಳಿಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಕುವೆಂಪು ಅವರ ಆಶಯದಂತೆ ಸಮಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್‌, ಮಾತೃಭೂಮಿ ಸಂಸ್ಥೆ ಕಳೆದ 13 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಸಾಧಕರಿಗೆ ಸಮಾರಂಭದಲ್ಲಿ ಕುವೆಂಪು ವಿಶ್ವಮಾನವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತರೀಕೆರೆಯ ಬಿ.ಎಸ್‌.ಭಗವಾನ್‌ ಅವರು ಗಾಯಕ ಪಿ.ಬಿ.ಶ್ರೀನಿವಾಸ್‌ ಅವರ ಧಾಟಿಯಲ್ಲಿ ಹಾಡಿದ ನಾಡಗೀತೆ ಮತ್ತು ಯುಗಧರ್ಮದ ರಾಮಣ್ಣ ಅವರ ತತ್ವಪದಗಳ ಗಾಯನ ಗಮನ ಸೆಳೆಯಿತು.

ಸಿದ್ದಗಂಗಾ ಮಠದ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ಮಾತೃಭೂಮಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ|ಎಸ್‌.ಬಾಲಾಜಿ ಅಧ್ಯಕ್ಷತೆ ವಹಿಸಿದ್ದರು, ಪಟ್ಟಣ ಸಹಕಾರ ಬ್ಯಾಂಕ್‌ನ ನಿರ್ದೇಶಕಿ ಪದ್ಮಾ ತಿಮ್ಮೇಗೌಡ, ಜಾನಪದ ವಿದ್ವಾಂಸ ಡಾ|ಬಸವರಾಜ ನೆಲ್ಲಿಸರ ಉಪಸ್ಥಿತರಿದ್ದರು.

ಅಜ್ಜಂಪುರ ಎಸ್‌.ಶೃತಿ ಕಾರ್ಯಕ್ರಮ ನಿರೂಪಿಸಿದರು, ಗಿರೀಶ್‌ ಸ್ವಾಗತಿಸಿದರು, ಇಮ್ರಾನ್‌ ಅಹಮದ್‌ ಬೇಗ್‌ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.