ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೂರನೇ ಬಲಿ
Team Udayavani, Jul 10, 2020, 9:59 AM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮುಂಜಾನೆ ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಕೋವಿಡ್-19 ಸೋಂಕಿಗೆ ಜಿಲ್ಲೆಯಲ್ಲಿ ಮೂರನೇ ಬಲಿಯಾಗಿದೆ.
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯ ನಿವಾಸಿ 62 ವರ್ಷದ ವ್ಯಕ್ತಿಗೆ ಕಳೆದ ಜುಲೈ 2 ರಂದು ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ 3.30 ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇವರು ಮಧುಮೇಹ, ಉಸಿರಾಟ ತೊಂದರೆ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಗುರುವಾರ ಸಂಜೆಯ ಆರೋಗ್ಯ ಇಲಾಖೆ ಮಾಹಿತಿಯಂತೆ ಜಿಲ್ಲೆಯಲ್ಲಿ ನಿನ್ನೆ ಐವರಿಗೆ ಸೋಂಕು ದೃಢವಾಗಿತ್ತು. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 130ಕ್ಕೆ ಏರಿಕೆಯಾಗಿತ್ತು.
ಜಿಲ್ಲೆಯಲ್ಲಿ ಇದುವರೆಗೆ 71 ಮಂದಿ ಸೋಂಕಿತರು ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 56 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,364 ಕೋವಿಡ್ ಸೋಂಕು ಪ್ರಕರಣ ದೃಢ, ಹತ್ತು ಮಂದಿ ಸಾವು
ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು ದೃಢ
ಉತ್ತರ ಕೊರಿಯಾದಲ್ಲಿ ಮಿತಿಮೀರಿದ ಕೋವಿಡ್; ಮೂರು ದಿನದಲ್ಲಿ 820,620 ಪ್ರಕರಣಗಳು ಪತ್ತೆ!