ಮಲೆಕುಡಿ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಲು ಮನವಿ

Team Udayavani, Oct 2, 2019, 3:43 PM IST

CB-TDY-1

ಮೂಡಿಗೆರೆ: ಅತಿವೃಷ್ಟಿಯಿಂದಾಗಿ ಮನೆ ಹಾಗೂ ಕೃಷಿ ಜಮೀನು ಕಳೆದುಕೊಂಡಿರುವ ಮಧುಗುಂಡಿ ಹಾಗೂ ಅಲೇಕಾನ್‌ ಹೊರಟ್ಟಿ ಆದಿವಾಸಿ ಬುಡಕಟ್ಟು ಜನಾಂಗದ ಮಲೆಕುಡಿ ಸಮುದಾಯದವರು ಪುನರ್ವಸತಿ ಹಾಗೂ ಪರಿಹಾರ ನೀಡುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ನೂರಾರು ಮಲೆಕುಡಿ ಸಮುದಾಯದ ಕುಟುಂಬಗಳು ಗುಡ್ಡಗಾಡು ಪ್ರದೇಶದಲ್ಲಿ ವಾಸವಾಗಿದ್ದು, ಕೃಷಿ ಮತ್ತು ಕೂಲಿಯಿಂದ ಜೀವನ ನಡೆಸುತ್ತಿದ್ದಾರೆ. ಕಳೆದ ತಿಂಗಳು ಸುರಿದ ಮಳೆ ಗ್ರಾಮಗಳನ್ನು ಹಾನಿಗೊಳಗಾಗಿಸಿದೆ. ಈ ವೇಳೆ ಮಧುಗುಂಡಿಯ ಆದಿವಾಸಿ ಜನಾಂಗದ 12 ಕುಟುಂಬಗಳು ಮನೆ ಹಾಗೂ ಕೃಷಿ ಜಮೀನು ಕಳೆದುಕೊಂಡಿವೆ. ಅಲ್ಲದೇ, ಅಲೇಕಾನ್‌ ಹೊರಟ್ಟಿಯ ರಸ್ತೆಗಳು ನಿರ್ಣಾಮಗೊಂಡಿವೆ. ಇಲ್ಲಿನ ವಾಸಿಗಳಿಗೆ ದಿಕ್ಕು ತೋಚದಂತಾಗಿದೆ ಎಂದು ಅಳಲು ತೋಡಿಕೊಂಡರು.

ಈಗಾಗಲೇ ಫಾರಂ ನಂ. 50, 53 ಮತ್ತು 57 ರಲ್ಲಿ ಭೂ ದಾಖಲಾತಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದು, ಕೆಲವರನ್ನು ಹೊರತುಪಡಿಸಿ ಉಳಿದವರಿಗೆ ಹಕ್ಕುಪತ್ರ ದೊರೆತಿಲ್ಲ ಮತ್ತು ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರಗಳನ್ನು ಪಡೆಯಲಾಗಿದೆ. ಈ ಕಾರಣದಿಂದ ಪುನರ್ವಸತಿ ಸಂದರ್ಭದಲ್ಲಿ ಹಕ್ಕುಪತ್ರ ಇದ್ದವರಿಗೆ ಮಾತ್ರ ಆದ್ಯತೆ ನೀಡುತ್ತಿರುವುದರಿಂದ ದಾಖಲೆ ಇಲ್ಲದವರು ತೊಂದರೆಗೀಡಾಗಿದ್ದಾರೆ. ಎಲ್ಲ ನೆರೆ ಸಂತ್ರಸ್ತರಿಗೂ ಸಮಾನ ಪರಿಹಾರ ನೀಡಬೇಕೆಂದರು. ಬೇರೆ ಜಿಲ್ಲೆಗಳಲ್ಲಿ ಆದಿವಾಸಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ.

ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಲ್ಲಿನ ಮೂಲ ನಿವಾಸಿಗಳೇ ಆಗಿರುವ ತಮ್ಮ ಸಮುದಾಯದ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದಾರೆ. ಯಾವುದೇ ರೀತಿಯ ಸರ್ಕಾರಿ ಸವಲತ್ತು ನೀಡುತ್ತಿಲ್ಲ. ವಲಸಿಗರಿಗೆ ಮಾತ್ರ ಸಮಾಜ ಕಲ್ಯಾಣ ಇಲಾಖೆಯಿಂದ ಪೌಷ್ಟಿಕಾಂಶ ಆಹಾರ ನೀಡುತ್ತಿದ್ದಾರೆ. ಹಾಗಾಗಿ, ಕೂಡಲೇ ಸರ್ಕಾರ ಇತ್ತ ಗಮನ ಹರಿಸಿ ಮಲೆಕುಡಿ ಜನಾಂಗಗಳಿಗೂ ಸರ್ಕಾರಿ ಸವಲತ್ತು ವಿಸ್ತರಿಸಬೇಕೆಂದರು. ಮಲೆಕುಡಿ ಸಂಘದ ಜಿಲ್ಲಾದ್ಯಕ್ಷ ಎಚ್‌. ಎಸ್‌.ಗೋಪಾಲ್‌, ಕಾರ್ಯದರ್ಶಿ ರಂಜಿತ್‌, ಎಂ.ಸಿ.ಉದೇಶ್‌, ಕೆ.ಎಸ್‌.ಜಗಧೀಶ್‌, ಸುರೇಶ್‌, ಪ್ರವೀಣ್‌, ವಿಶೃತ್‌ ಹಾಜರಿದ್ದರು.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.