ಬಲಿಗೆ ಗುಡ್ಡದ ಗುಹೆಯ ಅನಂತನ ಅವಾಂತರ!

ಮನೆ ಬದಲಿಗೆ ಗುಹೆಯಲ್ಲೇ ವಾಸವಿರುವುದಾಗಿ ಹಠ

Team Udayavani, Jun 10, 2020, 8:27 AM IST

ಬಲಿಗೆ ಗುಡ್ಡದ ಗುಹೆಯ ಅನಂತನ ಅವಾಂತರ!

ಚಿಕ್ಕಮಗಳೂರು: ಅನೇಕ ವರ್ಷಗಳಿಂದ ಮೂಡಿಗೆರೆ ತಾಲೂಕು ಬಲಿಗೆ ಗುಡ್ಡದ ಗುಹೆಯಲ್ಲಿ ವಾಸವಾಗಿದ್ದ ಅನಂತ ಮತ್ತೆ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾನೆ.

ಈ ಹಿಂದೆ ಉಪವಿಭಾಗಾಧಿಕಾರಿ ಡಾ| ನಾಗರಾಜ್‌ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಲ್ಲಿನ ಗುಹೆಯಲ್ಲಿ ವಾಸವಾಗಿದ್ದ ಅನಂತನ ಮನವೊಲಿಸಿ ಆತನ ಹೆಂಡತಿ ಅನ್ನಪೂರ್ಣಾ ಹಾಗೂ ಮಗಳನ್ನು ಕರೆತಂದು ಮೆಣಸಿನ ಹಾಡ್ಯ ಗಿರಿಜನ ವಸತಿ ಶಾಲೆಯಲ್ಲಿ ಆಶ್ರಯ ಕಲ್ಪಿಸಿದ್ದರು. ಕಾಡು ಮನಷ್ಯನಂತೆ ಬುದುಕುತ್ತಿದ್ದ ಅನಂತನನ್ನು ಸಮಾಜದ ಮುಖ್ಯ ವಾಹಿನಿಗೆ ಕರೆ ತಂದ ಜಿಲ್ಲಾಡಳಿತ ಕ್ರಮಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.

ಆದರೆ, ಮತ್ತೆ ಅನಂತ ತನ್ನ ವರಸೆ ಬದಲಾಗಿದ್ದು, ನಾನು ಈ ನಾಲ್ಕು ಗೋಡೆಗಳ ಮಧ್ಯೆ ಇರುವುದಿಲ್ಲ. ಬಲಿಗೆ ಗುಡ್ಡದ ಗುಹೆಯಲ್ಲೇ ವಾಸವಿರುತ್ತೇನೆ. ನನ್ನ ಹೆಂಡತಿ ಮಗಳನ್ನು ಕಳುಹಿಸಿಕೊಡಿ ಎಂದು ಕ್ಯಾತೆ ತೆಗೆದಿದ್ದು, ಈ ಪ್ರಕರಣ ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಮೆಣಸಿನ ಹಾಡ್ಯ ಗಿರಿಜನ ಶಾಲೆಯಲ್ಲಿ ಆಶ್ರಯ ಪಡೆದುಕೊಂಡ ನಂತರ ಚೆನ್ನಾಗಿಯೇ ಇದ್ದ ಅನಂತ ಕೆಲ ದಿನಗಳಿಂದ ತನ್ನ ವರಸೆ ಬದಲಿಸಿದ್ದಾನೆ. ಅನೇಕ ಬಾರಿ ಗಿರಿಜನ ಆಶ್ರಮ ಶಾಲೆಯಿಂದ ಹೊರ ಬಂದು ಗುಹೆಗೂ ಹೋಗಿ ಬಂದಿದ್ದು, ಇತ್ತೀಚೆಗೆ ಉಪವಿಭಾಗಾಧಿಕಾರಿ ಡಾ| ನಾಗರಾಜ್‌ ಹಾಗೂ ಅಧಿಕಾರಿಗಳು ತಂಡ ಆತನನ್ನು ಮತ್ತೆ ತಿಳಿವಳಿಕೆ ಹೇಳಿ ಆಶ್ರಮ ಶಾಲೆಯಲ್ಲೇ ಇರುವಂತೆ ಮನವೊಲಿಸಿದ್ದಾರೆ.

ಉಪವಿಭಾಗಾಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಒಮ್ಮೆ ಚೆನ್ನಾಗಿ ಮಾತನಾಡಿದರೆ, ಒಮ್ಮೊಮ್ಮೆ ಸಿಟ್ಟು ಹೊರ ಹಾಕಿದ್ದಾನೆ. ಅಮಾವಾಸ್ಯೆ ಮತ್ತು ಹುಣ್ಣಿಮೆ ದಿನ ಬಲಿಗೆ ಗುಹೆಗೆ ಹೋಗಿ ಪೂಜೆ ಸಲ್ಲಿಸಿ ಬರುತ್ತೇನೆ ಎಂದಿದ್ದ. ಮತ್ತೂಮ್ಮೆ ತಹಶೀಲ್ದಾರ್‌ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿ ಇರಲು ಸಾಧ್ಯವೇ ಇಲ್ಲ. ಗುಹೆಗೆ ಹೋಗುತ್ತೇನೆಂದು ಹೇಳಿದ್ದ. ಸೋಮವಾರ ಇದ್ದಕ್ಕಿದ್ದಂತೆ ಕೋಪಗೊಂಡ ಅನಂತ, ಗುಹೆಯಲ್ಲೇ ನಾನು ವಾಸ ಮಾಡುತ್ತೇನೆ… ಅದೇ ಇಷ್ಟ ನನಗೆ… ನಾಲ್ಕು ಗೋಡೆಗಳ ಮಧ್ಯೆ ವಾಸಿಸಲು ನನಗೆ ಸಾಧ್ಯವಿಲ್ಲ…. ಹೆಂಡತಿ ಮಕ್ಕಳನ್ನು ನನ್ನೊಂದಿಗೆ ಕಳುಹಿಸಿಕೊಡಿ ಎಂದು ಆಶ್ರಮ ಶಾಲೆಯಲ್ಲಿದ್ದ ಪೀಠೊಪಕರಣಗಳನ್ನು ಧ್ವಂಸಗೊಳಿಸಿದ್ದಾನೆ. ಶಾಲೆಯ ಮುಂಭಾಗದಲ್ಲಿದ್ದ ಗೇಟ್‌ ಮುರಿದು ಹಾಕಿದ್ದಾನೆ. ಹೆಂಡತಿ ಮೇಲೆ ಹಲ್ಲೆ ನಡೆಸಿದ್ದಾನೆ. ಶಾಲೆ ಸಿಬ್ಬಂದಿಯನ್ನು ನಿಂದಿಸಿದ್ದಾನೆ.

ಗುಹೆಯಲ್ಲಿ ವಾಸಿಸಲು ಅವಕಾಶ ಮಾಡಿಕೊಡಿ ಇಲ್ಲವೇ, ಬಲಿಗೆ ಗ್ರಾಮದಲ್ಲಿ ಮನೆಕಟ್ಟಿಕೊಡಿ ಇಲ್ಲಿ ಮನೆ ಕಟ್ಟಿಕೊಟ್ಟರೂ ನಾನಿರುವುದಿಲ್ಲ ಬಲಿಗೆ ಗುಡ್ಡದ ಗುಹೆಗೆ ಹೋಗುತ್ತೇನೆ ಎಂದು ಹಠ ಹಿಡಿದು ಕುಳಿತಿದ್ದಾನೆ. ವಿಷಯ ತಿಳಿದ ಉಪವಿಭಾಗಾಧಿಕಾರಿ ಡಾ| ನಾಗರಾಜ್‌ ಅವರು ಗ್ರಾಮ ಲೆಕ್ಕಿಗ ಹಾಗೂ ಕಂದಾಯ ಅಧಿಕಾರಿಯನ್ನು ಬಲಿಗೆ ಗ್ರಾಮಕ್ಕೆ ಕಳುಹಿಸಿ ಯಾರಾದರೂ ನಿವೇಶನ ನೀಡುವವರಿದ್ದರೆ ವಿಚಾರಿಸುವಂತೆ ತಿಳಿಸಿದ್ದಾರೆ. ನಿವೇಶನ ಸಿಗದಿರುವ ಹಿನ್ನೆಲೆಯಲ್ಲಿ ಬಲಿಗೆ ಗ್ರಾಮದಲ್ಲಿ ಮನೆ ಕಟ್ಟಿಕೊಡುವ ನಿರ್ಧಾರವನ್ನು ಜಿಲ್ಲಾಡಳಿತ ಕೈಬಿಟ್ಟಿದೆ.

ಅನಂತನ ಸಮಸ್ಯೆ ಏನೆಂದು ಅರಿಯುವುದೇ ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿದೆ. ಮಾನಸಿಕ ಸಮಸ್ಯೆ ಎದುರಿಸುತ್ತಿರಬಹುದು ಎಂದು ಅಂದಾಜಿಸಿರುವ

ಜಿಲ್ಲಾಡಳಿತ, ಮಾನಸಿಕ ರೋಗ ತಜ್ಞರಲ್ಲಿ ಚಿಕಿತ್ಸೆ ಕೊಡಿಸಲು ಚಿಂತನೆ ನಡೆಸಲಾಗಿದೆ. ನಂತರವೂ ಸುಧಾರಣೆ ಕಂಡು ಬರದಿದ್ದರೆ ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸುವ ಬಗ್ಗೆ ಜಿಲ್ಲಾಡಳಿತ ಯೋಚಿಸಿದೆ. ಅನಾಗರಿಕನಂತೆ ಗುಹೆಯಲ್ಲಿ ವಾಸಿಸುತ್ತಿದ್ದ ಮನುಷ್ಯನನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದ ಪ್ರಶಂಸೆಗೆ ಒಳಗಾಗಿದ್ದ ಜಿಲ್ಲಾಡಳಿತಕ್ಕೆ ಅನಂತ ಪುನಃ ಪುನಃ ತನ್ನ ಮನಸ್ಸು ಬದಲಿಸುತ್ತಿರುವುದು ಉಭಯ ಸಂಕಟವಾಗಿದೆ. ಮಾನಸಿಕ ತಜ್ಞರಿಂದ ಚಿಕಿತ್ಸೆಯ ನಂತರ ಸಮಸ್ಯೆ ಬಗೆಹರಿಯಬಹುದೇ ಎಂದು ಕಾದು ನೋಡಬೇಕಿದೆ.

ಪತ್ನಿ-ಮಗಳ ಬೇಸರ :  ಗುಹೆಯಲ್ಲಿ ಸಂಕಟದ ಜೀವನ ನಡೆಸುತ್ತಿದ್ದ ಪತ್ನಿ ಅನ್ನಪೂರ್ಣಾ ಹಾಗೂ ಮಗಳು ನಾಗರೀಕ ಸಮಾಜಕ್ಕೆ ಒಗ್ಗಿಕೊಂಡಿದ್ದು, ಮತ್ತೆ ಅನಂತನೊಂದಿಗೆ ಗುಹೆಗೆ ಹೋಗಲು ಒಪ್ಪುತ್ತಿಲ್ಲ. ಅನಂತನಲ್ಲಿನ ಬದಲಾವಣೆಯಿಂದ ಅವರು ಬೇಸತ್ತು ಹೋಗಿದ್ದಾರೆ.

ಅನಂತನ ನಡತೆಯಲ್ಲಿ ಆಗಾಗ ಬದಲಾವಣೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮಾನಸಿಕ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಮಾನಸಿಕ ತಜ್ಞರಲ್ಲಿ ತಪಾಸಣೆಗ ಒಳಪಡಿಸಲು ಚಿಂತಿಸಲಾಗಿದೆ.-ಡಾ| ನಾಗರಾಜ್‌, ಉಪವಿಭಾಗಾಧಿಕಾರಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.