ಸಂವಿಧಾನದ ಆಶಯ ಈಡೇರಿಸಲು ಮುಂದಾಗಿ


Team Udayavani, Jan 27, 2018, 3:46 PM IST

27-53.jpg

ಚಿಕ್ಕಮಗಳೂರು: ಸರ್ವ ಧರ್ಮಗಳನ್ನು ಗೌರವಿಸಿ ಯಾವುದೇ ಕೋಮು ಗಲಭೆಗಳಿಗೆ ಅವಕಾಶ ನೀಡದೇ ಸರ್ವ ಧರ್ಮ ಸಮನ್ವಯ
ಭಾವ ಬೆಳೆಸಿಕೊಂಡು ಹೋಗುವ ಮೂಲಕ ಸಂವಿಧಾನದ ಆಶಯಗಳನ್ನು ಈಡೇರಿಸಲು ಮುಂದಾಗುವಂತೆ ಜಿಲ್ಲಾ ಉಸ್ತುವಾರಿ
ಸಚಿವ ಆರ್‌.ರೋಷನ್‌ ಬೇಗ್‌ ಜನತೆಗೆ ಕರೆ ನೀಡಿದರು.

ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ
ಧ್ವಜಾರೋಹಣ ನೆರವೇರಿಸಿ ಅವರು ಜನತೆಗೆ ಸಂದೇಶ ನೀಡಿದರು. ನಾವೆಲ್ಲರೂ ಜಾತಿ, ಭಾಷೆ, ಪಂಗಡ, ಸಂಕುಚಿತ ಭಾವನೆಯಿಂದ ಹೊರಬಂದು, ಸ್ನೇಹ ಹಾಗೂ ಸೌಹಾರ್ದತೆಯ ವಾತಾವರಣ ನಿರ್ಮಿಸಿ ದೇಶದ ಒಗ್ಗಟ್ಟು ಮತ್ತು ಐಕ್ಯತೆ ಕಾಪಾಡಲು ಒಟ್ಟಾಗಿ ಸೇರಿ ಶ್ರಮಿಸೋಣ ಎಂದು ಹೇಳಿದರು.

ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ತಮ್ಮ ಅನುಭವ ಅಧ್ಯಯನ, ಮುಂದಿನ ಯೋಚನೆಯಿಂದ ಸಮಾಜದ ಎಲ್ಲಾ ನೊಂದ 
ಜನ ಸಮುದಾಯದ ಅಭಿವೃದ್ಧಿಗೆ ಹಾಗೂ ಎಲ್ಲರೂ ಮುಖ್ಯವಾಹಿನಿಗೆ ಬಂದು ಒಂದಾಗಿ ಬದುಕುವ ಅವಕಾಶಗಳನ್ನು ನೀಡಲು
ಸಂವಿಧಾನವನ್ನು ರಚಿಸಿದ್ದಾರೆ. ಆ ಮೂಲಕ ಮಾನವತೆಯ ಉಳಿವು ಹಾಗೂ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ ಎಂದರು.
ನಾವು ಒಗ್ಗಟ್ಟಿನ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡರೂ ಇಂದಿಗೂ ಸಹ ನಮ್ಮ ದೇಶದ ರಾಜ್ಯ ರಾಜ್ಯಗಳ ನಡುವೆ ಅನೇಕ
ಕಲಹಗಳು ಹಾಗೇ ಉಳಿದುಕೊಂಡಿವೆ. ಅದು ಗಡಿ ವಿವಾದ ಇರಬಹುದು, ಜಲವಿವಾದ ಇರಬಹುದು ಅಥವಾ ಅಭಿವೃದ್ಧಿಯ
ಅಸಮಧಾನ ಇರಬಹುದು. ಈ ಎಲ್ಲವನ್ನು ಮೆಟ್ಟಿ ನಿಲ್ಲುವ ಶಕ್ತಿ ಭಾರತಕ್ಕಿದೆ. ನಾವು ಭಾರತೀಯರು ಎನ್ನುವ ಬಗ್ಗೆ ನನಗೆ ಹೆಚ್ಚು
ಸಂತೋಷ ಇದೆ ಎಂದು ತಿಳಿಸಿದರು. 

ರಾಜ್ಯ ಸರ್ಕಾರ ನಾಲ್ಕು ವರ್ಷ ಎಂಟು ತಿಂಗಳುಗಳನ್ನು ಪೂರೈಸಿ ಪೂರ್ಣಾವಧಿಯತ್ತ ತೆರಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ
ನೇತೃತ್ವದ ಸರ್ಕಾರ ನುಡಿದಂತೆ ನಡೆಯುವ ಮೂಲಕ ತನ್ನ ವಿಶ್ವಾಸವನ್ನು ಉಳಿಸಿಕೊಂಡು ನಡೆಯುತ್ತಿದೆ. ರಾಜ್ಯದ ಐದು ಕೋಟಿಗೂ ಹೆಚ್ಚು ಜನರಿಗೆ ನಮ್ಮ ಸರ್ಕಾರ ಒಂದಲ್ಲ ಒಂದು ರೀತಿಯಲ್ಲಿ ನೆರವಾಗುತ್ತಿದೆ. ಎಲ್ಲಾ ವರ್ಗದ, ಎಲ್ಲಾ ಸಮುದಾಯದ, ಎಲ್ಲಾ ವಲಯದಲ್ಲೂ ಫಲಾನುಭವಿಗಳು ಇದ್ದಾರೆ ಎಂದರು. ನಮ್ಮದು ಜನಪರ ಮತ್ತು ಜನಮುಖೀ ಸರ್ಕಾರ. ಅಭಿವೃದ್ಧಿಯೇ ನಮ್ಮ ಮಂತ್ರ. ಜನಪರ ನಿಲುವುಗಳಿಗೆ ಹೆಚ್ಚಿನ ಮನ್ನಣೆ ನೀಡುವ ಸರ್ಕಾರ ನಮ್ಮದು. ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಮನಸ್ವಿನಿ, ಮೈತ್ರಿ, ಋಣಮುಕ್ತ, ವಿದ್ಯಾಸಿರಿ, ಕ್ಷೀರಧಾರೆ, ನಿರ್ಮಲಭಾಗ್ಯ, ವಸತಿಭಾಗ್ಯ, ಪಶುಭಾಗ್ಯ ಮಾತೃಪೂರ್ಣ, ಇಂದಿರಾ ಕ್ಯಾಂಟೀನ್‌
ಇನ್ನೂ ಮುಂತಾದ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಎಲ್ಲಾ ಜನರ ನೆಮ್ಮದಿ ಬದುಕಿಗೆ 
ಸಹಕಾರಿ ಆಗಿವೆ ಎಂದು ಹೇಳಿದರು.

ನಮ್ಮ ಸರ್ಕಾರ ಸಾಮಾಜಿಕ ನ್ಯಾಯ, ಕೋಮು ಸೌಹಾರ್ದತೆ, ಗ್ರಾಮೀಣಾಭಿವೃದ್ಧಿ ಹಾಗೂ ರೈತರು, ಮತ್ತು ಮಹಿಳಾ ಪರ
ಸಮಗ್ರ ಬೆಳವಣಿಗೆಗೆ ಶ್ರಮಿಸುತ್ತಿದೆ. ನಾವು ಜನತೆಗೆ ನೀಡಿದ 165 ಭರವಸೆಗಳಲ್ಲಿ 160 ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದುಕೊಂಡಿದ್ದೇವೆ ಎಂದರು. 

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ನಾವು ದೇಶಕ್ಕೆ ಮಾದರಿಯಾಗಿದ್ದೇವೆ. 9300 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗಿದೆ. ನಮ್ಮ ಸರ್ಕಾರದಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್‌ಗಳನ್ನು ತಾಲೂಕು ಮತ್ತು ಜಿಲ್ಲಾ ಕೇಂದ್ರಗಳ ನಗರ ಸ್ಥಳೀಯ ಸಂಸ್ಥೆಗಳಲ್ಲು ನಿರ್ಮಿಸಲು ಉದ್ದೇಶಿಸಿದೆ. ಅದರಂತೆ 
ಚಿಕ್ಕಮಗಳೂರಿನಲ್ಲಿ 2, ಕಡೂರು, ತರೀಕೆರೆ, ಕೊಪ್ಪ, ಮೂಡಿಗೆರೆ, ಎನ್‌.ಆರ್‌. ಪುರ, ಶೃಂಗೇರಿಗಳಲ್ಲಿ ತಲಾ ಒಂದರಂತೆ ಒಟ್ಟು-8
ಇಂದಿರಾ ಕ್ಯಾಂಟೀನ್‌ಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.