ಉಜ್ಜಯಿನಿ ಬನ್ನಿ ಮಹಾಂಕಾಳಿ ಅಮ್ಮ ನವರ ಕೆಂಡಾರ್ಚನೆ


Team Udayavani, Mar 15, 2020, 6:25 PM IST

15-March-35

ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಉಜ್ಜಯಿನಿ ಶ್ರೀ ಆದಿಶಕ್ತಿ ಬನ್ನಿ ಮಹಾಂಕಾಳಿ ಅಮ್ಮನವರ ಮತ್ತು ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಮುಂಜಾನೆ ವಿವಿಧ ಧಾರ್ಮಿಕ ಸಂಪ್ರದಾಯಗಳೊಂದಿಗೆ ಶ್ರೀಬನ್ನಿಮಹಾಂಕಾಳಿ ಅಮ್ಮನವರ ಕೆಂಡಾರ್ಚನೆ ನಡೆಯಿತು.

ಈ ಸಂದರ್ಭದಲ್ಲಿ ಛತ್ರಿ, ಚಾಮರ ಮತ್ತು ಮಂಗಳ ವಾದ್ಯಗಳೊಂದಿಗೆ ಕೆಂಡದ ರಾಶಿಗೆ ಭಕ್ತರು ಧಾರ್ಮಿಕ ಸಂಪ್ರದಾಯದಂತೆ ಆರತಿ ಬೆಳಗಿದರು. ನಂತರ ಶ್ರೀ ಆದಿಶಕ್ತಿ ಬನ್ನಿ ಮಹಾಂಕಾಳಿ ಅಮ್ಮನವರ ಉತ್ಸವ ಮೂರ್ತಿಯನ್ನು ಹೊತ್ತು ಕೆಂಡದ ರಾಶಿಯ ಸುತ್ತ ಪ್ರದಕ್ಷಿಣೆ ಹಾಕಿ, ಕೆಂಡ ಹಾಯ್ದ ಬಳಿಕ ನೂರಾರು ಭಕ್ತರು ಕೆಂಡ ಹಾಯ್ದು ಭಕ್ತಿ ಸಮರ್ಪಿಸಿದರು.

ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ದೇವಸ್ಥಾನದ ಸುತ್ತಲೂ ಉತ್ಸವ ಮೆರವಣಿಗೆ ಸಾಗುವಾಗ ಭಕ್ತಾದಿಗಳು ತಾವು ಬೆಳೆದ ಭತ್ತ, ಕಾಪಿ, ಕಾಳುಮೆಣಸು, ಅಡಕೆ ಇತ್ಯಾದಿ ಫಸಲುಗಳನ್ನು ಅಮ್ಮನವರಿಗೆ ಸಮರ್ಪಿಸಿ ಧನ್ಯರಾದರು. ಮಧ್ಯಾನ ಶ್ರೀ ಕ್ಷೇತ್ರ ಉಜ್ಜಯಿನಿಯಿಂದ ಶ್ರೀ ಆದಿಶಕ್ತಿ ಬನ್ನಿಮಹಾಂಕಾಳಿ ಅಮ್ಮನವರ ಉತ್ಸವ ಭದ್ರಾನದಿಗೆ ತೆರಳಿ ತೀರ್ಥಸ್ನಾನ, ಗೌರಿಪೂಜೆ ನಡೆಯಿತು.

ನಂತರ ಮಕ್ಕಳ ಫಲ ಬೇಡುವ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಕೆಂಡಾರ್ಚನೆಯ ನಂತರ ಶ್ರೀ ಆದಿಶಕ್ತಿ ಬನ್ನಿ ಮಹಾಂಕಾಳಿ ಅಮ್ಮನವರ ದೇವಸ್ಥಾನದ ಧರ್ಮಾಧಿಕಾರಿ ಯು.ಸಿ.ಗೋಪಾಲಗೌಡ ಮಾತನಾಡಿ, ಮನುಷ್ಯನ ಜೀವನ ಅತ್ಯಮೂಲ್ಯವಾದದ್ದು.ಇದು ಭಗವಂತ ಕೊಟ್ಟ ಕೊಡುಗೆ. ಅರಿತು ಬಾಳಿದರೆ ಬಾಳು ಬಂಗಾರ. ಮರೆತು ಬಾಳಿದರೆ ಜೀವನ ಬಂಧನಕಾರಿ. ಮನುಷ್ಯ ಜೀವನದಲ್ಲಿ ದೇವರು ಹಾಗೂ ಧರ್ಮಾಚರಣೆಗಳನ್ನು ಮರೆಯಬಾರದು. ಮನದ ಶಾಂತಿಗಾಗಿ ನೆಮ್ಮದಿಯ ಬದುಕಿಗಾಗಿ ಧರ್ಮಾಚರಣೆಗಳು ಬಹಳ ಮುಖ್ಯವಾಗಿದೆ. ದೃಢ ಸಂಕಲ್ಪ ಇಲ್ಲದೇ ಮಾಡುವ ಕೆಲಸಗಳು ಸಿದ್ಧಿಸುವುದಿಲ್ಲ. ಶಾಶ್ವತ ಸುಖಕ್ಕೆ ಮತ್ತು ಮನದ ಶಾಂತಿಗೆ ಧರ್ಮಾಚರಣೆ ಅಗತ್ಯವೆಂದರು.

ಕಾರ್ಯಕ್ರಮದಲ್ಲಿ ಶ್ರೀ ಗುರುಪರದೇಶಪ್ಪನವರ ಮಠದ ವೇದಮೂರ್ತಿ ಮಧುಕುಮಾರ್‌, ಬಾಸಾಪುರದ ಬಿ.ಎಂ.ಭೋಜೇಗೌಡರು, ಕೂಸುಗಲ್ಲು ಚಂದ್ರಶೇಖರಗೌಡ, ಅಂಡವಾನೆ ಗ್ರಾಮದ ಪಟ್ನ ಪಿ.ಎ.ಪುಟ್ಟಸ್ವಾಮೇಗೌಡರು, ತೋರುವಾನೆ ಸುರೇಶ್‌ ಸೇರಿದಂತೆ ಖಾಂಡ್ಯ, ಬಾಸಾಪುರ, ಕಡುವಂತಿ, ಬಿದರೆ, ಗಂಗೇಗಿರಿ, ಚಂದ್ರವಳ್ಳಿ, ಕರಡಿಖಾನ್‌, ಚಿಕ್ಕಮಗಳೂರು, ಸಕ್ಕರೆಪಟ್ಟಣ, ಬಾಳೆಹೊನ್ನೂರು ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಜಿಲ್ಲಾದ್ಯಂತ ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹೊರಡಿಸಿದ ಆದೇಶದ ಬಗ್ಗೆ ಮಾಹಿತಿ ಇಲ್ಲವೆಂದು ಗ್ರಾಮಸ್ಥರು ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಗ್ರಾಮಸ್ಥರು, ಕಳೆದ 20 ದಿನಗಳಿಂದ ಖಾಂಡ್ಯ ಹೋಬಳಿಯಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಹಾಗೂ ಇಂಟರ್‌ನೆಟ್‌ ಸ್ಥಗಿತಗೊಂಡಿದೆ. ಕುಗ್ರಾಮಗಳಲ್ಲಿ ಮೊಬೈಲ್‌ ಚಾರ್ಜ್‌ ಮಾಡಲು ಆಗುತ್ತಿಲ್ಲ. ಸಹಕಾರ ಸಾರಿಗೆ ಬಸ್‌ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಕ್ಕೆ ದಿನಪತ್ರಿಕೆ ಸರಬರಾಜು ಆಗುತ್ತಿಲ್ಲ. ಕೊರೊನಾ ವೈರಸ್‌ ಬಗ್ಗೆ ಕುಗ್ರಾಮಗಳಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

2022ರಲ್ಲಿ ಲ್ಯಾಪ್ ಟಾಪ್ ಕಳವು ಮಾಡಿದ ಪ್ರಕರಣ: ಮಂಗಳೂರು ಮೂಲದ ಆರೋಪಿ ಬಂಧನ

Laptop ಕಳವು ಮಾಡಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿಮ್ ಖರೀದಿಸಿ ಸಿಕ್ಕಿಬಿದ್ದ

Elephant: ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಕಂಗಾಲಾದ ಪ್ರಯಾಣಿಕರು

Elephant: ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಕಂಗಾಲಾದ ಪ್ರಯಾಣಿಕರು

1-sasasad

Tarikere; ಸೆಲ್ಫಿ ತೆಗೆಯುವ ವೇಳೆ ಜಲಪಾತದಿಂದ ಬಿದ್ದು ಪ್ರವಾಸಿಗ ಸಾವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.