C.T.Ravi ಸೋಲಿನ ಮಾಸ್ಟರ್ ಮೈಂಡ್ ಭೋಜೇಗೌಡರಿಗೆ ಹಾಲಿನ ಅಭಿಷೇಕ

ಸೋಲಿಗೆ ಅವರ ನಾಲಗೆಯೇ ಕಾರಣ...

Team Udayavani, May 14, 2023, 3:43 PM IST

1-aa

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ಸೋಲಿನ ಮಾಸ್ಟರ್ ಮೈಂಡ್ ಎಂದು ಹೇಳಲಾಗಿರುವ ಜೆಡಿಎಸ್ ನಾಯಕ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರಿಗೆ ಭಾನುವಾರ ಜೆಡಿಎಸ್ ಕಾರ್ಯಕರ್ತರು ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಇದ್ದರೂ ಕಾಂಗ್ರೆಸ್ ಜತೆ ಒಳಒಪ್ಪಂದ ಮಾಡಿಕೊಂಡು ಸಿ.ಟಿ.ರವಿ ವಿರುದ್ಧ ಅಖಾಡಕ್ಕಿಳಿದಿದ್ದ ಭೋಜೇಗೌಡ ಅವರಿಗೆ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಸನ್ಮಾನ ಮಾಡಿ ಸಂಭ್ರಮಿಸಿದರು.

ಜೆಡಿಎಸ್ ನಿಂದ ಗೆದ್ದರೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರಮಾಪ್ತ ಭೋಜೇಗೌಡ ಅವರು ಕಾಂಗ್ರೆಸ್ಸಿನ ತಮ್ಮಯ್ಯ ಪರ ಮತಯಾಚಿಸಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭೋಜೇಗೌಡ, ವ್ಯಂಗ್ಯವಾಗಿ ಮಾತನಾಡಿ ಸಿ.ಟಿ.ರವಿ ಬುದ್ಧಿವಂತರಿದ್ದಾರೆ. ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆಗಿದ್ದರು. ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ, ಅದಕ್ಕೊಂದು ಇತಿಮಿತಿ ಇರುತ್ತಿತ್ತು. ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಅವರು ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು. ಯಾರನ್ನೋ ಮೆಚ್ವಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ ಎಂದರು.

ದೇವೇಗೌಡರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ, ಯಾರನ್ನೂ ಬಿಟ್ಟಿಲ್ಲ. ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ”ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್” ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ ಎಂದರು.

ಸಿ.ಟಿ.ರವಿ ಸೋಲಿಗೆ ಅವರ ನಾಲಗೆಯೇ ಕಾರಣ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದರು.

ಸಿ.ಟಿ.ರವಿಗೆ ಸಾಂತ್ವನ ಹೇಳಿದ ಎಳೆ ಕಂದ
ಸೋಲಿನಿಂದ ನೊಂದಿರುವ ಸಿ.ಟಿ.ರವಿ ಅವರಿಗೆ ಸರ್…. ನಿಮ್ಮ ಜೊತೆ ನಾವಿರ್ತೇವೆ ಎಂದು ಬಾಲಕನೊಬ್ಬ ಧೈರ್ಯ ತುಂಬಿದ್ದಾನೆ. ನಾವು ಬಿಜೆಪಿ ಜೊತೆ ಇರ್ತೀವಿ, ನೀವು ಭಯ ಪಡಬೇಡಿ ಎಂದು ಸಿ.ಟಿ.ರವಿ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದ್ದಾನೆ.

ಸಿ.ಟಿ.ರವಿ ಅವರು 20 ವರ್ಷಗಳ ಬಳಿಕ ಮೊದಲ ಬಾರಿಗೆ ಮಾಜಿ ಆಪ್ತನಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಅವರಿಂದ ಸೋಲಿನ ಶಾಕ್ ಅನುಭವಿಸಿದ್ದಾರೆ.

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.