Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Team Udayavani, Mar 26, 2024, 12:20 AM IST

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹಿತ ಅವರ ಕುಟುಂಬ ಸದಸ್ಯರು ಹೊರನಾಡು ಮತ್ತು ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು. ಬಿಎಸ್‌ವೈ ಜತೆಗೆ ಪುತ್ರಿಯರು ಹಾಗೂ ಪುತ್ರ ಬಿ.ವೈ.ವಿಜಯೇಂದ್ರ ದಂಪತಿ ಇದ್ದರು.

ಶನಿವಾರ ಸಂಜೆ ಹೊರನಾಡು ದೇವಸ್ಥಾನಕ್ಕೆ ಭೇಟಿ ನೀಡಿ ರಾತ್ರಿ ಅನ್ನಪೂರ್ಣೇಶ್ವರಿ ರಥೋತ್ಸವ ಸೇವೆ, ನವಚಂಡಿ ಪಾರಾಯಣ, 10 ಸಾವಿರ ಜಪಗಳನ್ನು ನಡೆಸಲಾಯಿತು. ರಥದಲ್ಲಿ ಅನ್ನಪೂರ್ಣೇಶ್ವರಿ ಉತ್ಸವ ಮೂರ್ತಿಯನ್ನು ಕೂರಿಸಿ ದೇವಸ್ಥಾನದ ಸುತ್ತ ಯಡಿಯೂರಪ್ಪ ಮತ್ತು ವಿಜಯೇಂದ್ರ ರಥವನ್ನು ಎಳೆದರು. ಬಳಿಕ ಮಂಗಳಾರತಿಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.

ಬೆಳಗ್ಗೆ 7ರಿಂದ ಬಿ.ಎಸ್‌.ಯಡಿಯೂರಪ್ಪ ಕುಟುಂಬದಿಂದ ಚಂಡಿಕಾ ಯಾಗ ನಡೆಸಲಾಯಿತು. 9 ಋತ್ವಿಜರ ನೇತೃತ್ವದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಯಾಗ ನಡೆಯಿತು. ಇದೇ ಸಂದರ್ಭದಲ್ಲಿ ಮಾತೆ ಅನ್ನಪೂರ್ಣೇಶ್ವರಿಗೆ ಅಕ್ಕಿ ಸೇವೆಯನ್ನು ಸಮರ್ಪಿಸಿದರು. ದೇವಸ್ಥಾನದ ಧರ್ಮದರ್ಶಿ ಜಿ. ಭೀಮೇಶ್ವರ ಜೋಷಿ ಬಿ.ಎಸ್‌.ಯಡಿಯೂರಪ್ಪ, ವಿಜಯೇಂದ್ರ ದಂಪತಿಗೆ ಅನ್ನಪೂರ್ಣೇಶ್ವರಿ ಪ್ರಸಾದ ನೀಡಿ ಶುಭ ಹಾರೈಸಿದರು.

ಮಧ್ಯಾಹ್ನದ ಅನ್ನಪ್ರಸಾದ ಸ್ವೀಕರಿಸಿದ ಬಳಿಕ ಕಳಸ ಕಳಸೇಶ್ವರ ದೇವಸ್ಥಾನಕ್ಕೆ ಯಡಿಯೂರಪ್ಪ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯಿಂದ ಯಡಿಯೂರಪ್ಪ ಹಾಗೂ ವಿಜಯೇಂದ್ರ ದಂಪತಿಗೆ ದೇವರ ಪ್ರಸಾದ ನೀಡಲಾಯಿತು.

ಹೊರನಾಡಿಗೆ ಭೇಟಿ ನೀಡದೆ ಕೆಲವು ವರ್ಷಗಳಾಗಿತ್ತು. ಹಾಗಾಗಿ ಪೂಜೆ ಮಾಡಿಸಿಕೊಂಡು ಹೋಗುವ ಸಲುವಾಗಿ ಬಂದಿದ್ದೇವೆ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ. ರೈತರಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇವೆ.
-ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಿಎಂ

ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ಮೋದಿಗೆ ಇನ್ನಷ್ಟು ಶಕ್ತಿಯನ್ನು ತಾಯಿ ಅನ್ನಪೂರ್ಣೇಶ್ವರಿ ನೀಡಲಿ. ರಾಜ್ಯದಲ್ಲೂ ಹೆಚ್ಚಿನ ಸ್ಥಾನದೊಂದಿಗೆ ಗೆಲ್ಲುವ ಮೂಲಕ ಮೋದಿ ಕೈಯನ್ನು ಬಲಪಡಿಸಬೇಕು. ಈ ನಿಟ್ಟಿನಲ್ಲಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.