ಒಂದೆಡೆ ಗೈರು; ಮತ್ತೂಂದೆಡೆ ಹಾಜರು


Team Udayavani, Nov 24, 2020, 7:22 PM IST

ಒಂದೆಡೆ ಗೈರು; ಮತ್ತೂಂದೆಡೆ ಹಾಜರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಂತಿಮ ವರ್ಷದ ಪದವಿ ತರಗತಿ ಪ್ರಾರಂಭವಾಗಿಈಗಾಗಲೇ ಒಂದು ವಾರ ಕಳೆದಿದೆ. ಆದರೆಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಗಣನೀಯವಾಗಿ ಕಡಿಮೆ ಇದ್ದು, ಕಾಲೇಜು ಕಡೆ ಮುಖ ಮಾಡಲು ಹಿಂಜರಿಯುತ್ತಿದ್ದಾರೆ.

ಕೋವಿಡ್ ನಡುವೆಯೂ ರಾಜ್ಯ ಸರ್ಕಾರ ಪದವಿ ಕಾಲೇಜು ಆರಂಭಕ್ಕೆಅನುಮತಿ ನೀಡಿದ್ದು, ಕಾಲೇಜಿಗೆ ಬರುವವಿದ್ಯಾರ್ಥಿಗಳು ಕೋವಿಡ್‌-19 ಪರೀಕ್ಷಾವರದಿ ಮತ್ತು ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯಗೊಳಿಸಿ ಕಾಲೇಜು ಆರಂಭಿಸಲಾಗಿದೆ. ಕಾಫಿನಾಡಿನಲ್ಲಿ 14 ಸರ್ಕಾರಿ ಪದವಿಕಾಲೇಜು, 3 ಅನುದಾನಿತ ಪದವಿ ಕಾಲೇಜುಗಳಿದ್ದು, ಸರ್ಕಾರಿ ಪದವಿ ಕಾಲೇಜಿನಲ್ಲಿ 5,897 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅನುದಾನಿತ ಪದವಿ ಕಾಲೇಜಿನಲ್ಲಿ 1,477 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಆರಂಭಗೊಂಡು ಒಂದು ವಾರ ಕಳೆದರೂ ವಿದ್ಯಾರ್ಥಿಗಳು ಮಾತ್ರ ಕಾಲೇಜು ಕಡೆ ಮುಖ ಮಾಡದಿರುವುದು ವಿಪರ್ಯಾಸವಾಗಿದೆ.

ಕಾಲೇಜು ಆರಂಭಗೊಂಡ ದಿನದಿಂದ ನ.21ರವರೆಗೆ ಜಿಲ್ಲೆಯಲ್ಲಿ ಸುಮಾರು 286 ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಹಾಜರಾಗಿದ್ದಾರೆಂದು ತಿಳಿದು ಬಂದಿದೆ.ಸರ್ಕಾರ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಿದ್ದರೂ ಕೊರೊನಾ ಭಯ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡುತ್ತಿದೆ. ಹೀಗಾಗಿಯೇ ವಿದ್ಯಾರ್ಥಿಗಳು ಕಾಲೇಜಿನತ್ತ ಮುಖ ಮಾಡುತ್ತಿಲ್ಲ ಎನ್ನಲಾಗಿದೆ.

ವಿದ್ಯಾರ್ಥಿಗಳು ತರಗತಿಗೆ ಬರುವಮೊದಲು ಪೋಷಕರ ಅನುಮತಿ ಪತ್ರ ತರಬೇಕು. ಕೋವಿಡ್‌-19 ಪರೀಕ್ಷಾ ವರದಿ ತರಬೇಕು. ನೆಗೆಟಿವ್‌ ವರದಿ ಬಂದ ವಿದ್ಯಾರ್ಥಿಗಳನ್ನು ಮಾತ್ರ ತರಗತಿಗೆ ಅವಕಾಶನೀಡಲಾಗುತ್ತಿದೆ. ಅನೇಕ ವಿದ್ಯಾರ್ಥಿಗಳುಕೋವಿಡ್‌-19 ಪರೀಕ್ಷೆಗೆ ಒಳಗಾಗಲುಹಿಂಜರಿಯುತ್ತಿರುವುದು ಕೂಡ ವಿದ್ಯಾರ್ಥಿಗಳಸಂಖ್ಯೆ ಹೆಚ್ಚಳವಾಗದಿರಲು ಕಾರಣ ಎಂದು ಹೇಳಲಾಗುತ್ತಿದೆ.

ಆನ್‌ಲೈನ್‌-ಆಫ್‌ಲೈನ್‌ ತರಗತಿ: ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಹಾಗೂ ಆಫ್‌ ಲೈನ್‌ ತರಗತಿಗಳನ್ನು ನಡೆಸಲಾಗುತ್ತಿದೆ. ಇದು ಕೂಡ ಅಷ್ಟಾಗಿ ಪ್ರಯೋಜನಕ್ಕೆಬಾರದಂತಾಗಿದೆ. ಬಹುತೇಕ ವಿದ್ಯಾರ್ಥಿಗಳುಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿದ್ದು,ಯಾಂತ್ರಿಕ ಸಮಸ್ಯೆ, ಇಂಟರ್‌ನೆಟ್‌ ಸಮಸ್ಯೆ,ಬಹುತೇಕ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಕಂಪ್ಯೂಟರ್‌ ವ್ಯವಸ್ಥೆ ಇಲ್ಲದಿರುವುದರಿಂದಆನ್‌ಲೈನ್‌ ತರಗತಿಗಲೂ ಅಷ್ಟೇನೂಪರಿಣಾಮಕಾರಿಯಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಅಲ್ಲದೆ ವಿದ್ಯಾರ್ಥಿಗಳು ಆನ್‌ ಲೈನ್‌ ಶಿಕ್ಷಣದತ್ತ ಆಸಕ್ತಿ ತೋರದಿರುವುದುಸಹ ಕಾರಣವಾಗಿದೆ. ಪಾಠ ಪ್ರವಚನ ಮುಖಾಮುಖೀ ಚರ್ಚೆ ನಡೆಯದೆಏಕಮುಖವಾಗಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಉಪನ್ಯಾಸಕರು ವಿದ್ಯಾರ್ಥಿಗಳ ಕಡೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಆನ್‌ಲೈನ್‌ ತರಗತಿ ಅಷ್ಟೇನುಪರಿಣಾಮಕಾರಿಯಾಗುತ್ತಿಲ್ಲ, ಹೀಗಾಗಿತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಕೋವಿಡ್‌-19 ಪರೀಕ್ಷೆ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿ ಸೇರಿದಂತೆ ನ.22ರವರೆಗೆ 6,300ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೂ ಯಾರೊಬ್ಬರಿಗೂ ಕೋವಿಡ್  ಪಾಸಿಟಿವ್‌ ಬಂದಿಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ.

ಸೂಚನೆ ಪಾಲನೆ: ಕಾಲೇಜುಗಳಲ್ಲಿ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ. ಪ್ರತೀ ನಿತ್ಯ ಕಾಲೇಜುಗಳಲ್ಲಿ ಕೋವಿಡ್‌-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ವಿದ್ಯಾರ್ಥಿ ಗಳಲ್ಲಿ ಕೋವಿಡ್‌-19 ಜಾಗೃತಿ ಮೂಡಿಸಲಾಗುತ್ತಿದೆ. ಇಷ್ಟೆಲ್ಲ ಕ್ರಮಗಳನ್ನು ಕೈಗೊಂಡರೂ ಕೂಡ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ 6,300 ಕಾಲೇಜು ವಿದ್ಯಾರ್ಥಿಗಳು ಮತ್ತುಸಿಬ್ಬಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಡಾ| ಮಂಜುನಾಥ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಆರೋಗ್ಯ ಇಲಾಖೆ

ಪದವಿ ಅಂತಿಮ ವರ್ಷದ ತರಗತಿಗಳು ಆರಂಭಗೊಂಡರೂ ಕಾಲೇಜಿಗೆ ಹಾಜರಾಗುತ್ತಿರುವವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಪದವಿ, ಸ್ನಾತಕೋತ್ತರ ಪದವಿಸೇರಿದಂತೆ ಐಡಿಎಸ್‌ಜಿ ಕಾಲೇಜಿನಲ್ಲಿ ಸುಮಾರು 1,000 ವಿದ್ಯಾರ್ಥಿಗಳಿದ್ದು,ಸದ್ಯ ಶೇ.5ರಷ್ಟು (100ರಿಂದ 150) ವಿದ್ಯಾರ್ಥಿಗಳು ಮಾತ್ರ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಪ್ರೊ| ಕೆ.ಎನ್‌. ಲಕ್ಷ್ಮೀಕಾಂತ್‌, ಅರ್ಥಶಾಸ್ತ್ರ ಉಪನ್ಯಾಸಕರು ಸ್ನಾತಕೋತ್ತರ ಅಧ್ಯಯನ ವಿಭಾಗ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.