ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ

Team Udayavani, Jun 19, 2021, 9:24 PM IST

19-16

ಚಿಕ್ಕಮಗಳೂರು: ಕೋವಿಡ್‌ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಾರಾಂತ್ಯದ ಕರ್ಫ್ಯೂ ವಿಧಿಸಿದ್ದು ಅದರಂತೆ ಜಿಲ್ಲೆಯಲ್ಲೂ ವಾರಾಂತ್ಯದ ಕರ್ಫ್ಯೂ ಜಾರಿಗೊಳಿ ಸಿರುವುದಾಗಿ ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂ.18ರ ರಾತ್ರಿ 7 ಗಂಟೆಯಿಂದ ಜೂ.21ರ ಬೆಳಗ್ಗೆ 6 ಗಂಟೆಯವರೆಗೂ ಜಿಲ್ಲಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದಿ ದ್ದಾರೆ. ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಅನಗತ್ಯ ಸಂಚಾರವನ್ನು ನಿರ್ಬಂಧಿ ಸಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂ ದಿಗಳಿಗೆ ಸಂಚಾರ ಅವಕಾಶ ಕಲ್ಪಿಸಲಾಗಿದೆ. ಅಗತ್ಯ ಸೇವೆಗಳನ್ನು ಪೂರೈಸುವ ಕೈಗಾರಿಕೆ, ಕಂಪೆನಿ, ಸಂಸ್ಥೆಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ದೂರವಾಣಿ ಮತ್ತು ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ತಮ್ಮ ಸಂಸ್ಥೆ ನೀಡಿರುವ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ. ಆಸ್ಪತ್ರೆಗಳು, ನರ್ಸಿಂಗ್‌ ಹೋಂ, ಚಿಕಿತ್ಸಾಲಯಗಳು, ಪ್ರಯೋಗಾಲಯಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಔಷಧ   ಮತ್ತು ಸಂಶೋಧನಾ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಮತ್ತು ಮೂಲ ಸೌಕರ್ಯಕ್ಕೆ ಸಂಬಂ ಧಿಸಿದ ಎಲ್ಲಾ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ, ದಾದಿಯರು, ಲ್ಯಾಬ್‌ ತಂತ್ರಜ್ಞರು ಆಸ್ಪತ್ರೆಗಳ ಪೂರಕ ಸೇವೆ ಸಿಬ್ಬಂದಿ ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ರೋಗಿಗಳು ಮತ್ತು ಅವರ ಸಂಬಂಧಿಕರು ತುರ್ತು ಅಗತ್ಯವಿದ್ದ ಸಂದರ್ಭದಲ್ಲಿ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ. ಕೋವಿಡ್‌ ಲಸಿಕೆ ಪಡೆದುಕೊಳ್ಳುವವರು ದಾಖಲೆಗ ಳನ್ನು ಪ್ರದರ್ಶಿಸಿ ಸಂಚರಿಸಬಹುದಾಗಿದೆ ಎಂದಿದ್ದಾರೆ.

ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಡೈರಿ, ಹಾಲಿನ ಕೇಂದ್ರಗಳು ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರೆಸ್ಟೋರೆಂಟ್‌ ಮತ್ತು ಹೊಟೇಲ್‌ಗ‌ಳಲ್ಲಿ ಪಾರ್ಸಲ್‌ಗೆ ಅವಕಾಶ ನೀಡಲಾಗಿದೆ. ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ರೈಲು ನಿಲ್ದಾಣಕ್ಕೆ ಖಾಸಗಿ ವಾಹನದಲ್ಲಿ ಪ್ರಯಾಣ ಮಾಡುವರು ಸೂಕ್ತ ದಾಖಲೆಗಳನ್ನು, ಟಿಕೆಟ್‌ಗಳನ್ನು ಪ್ರದರ್ಶಿಸಬೇಕು. ಉಳಿದಂತೆ ಮದುವೆ ಸಮಾರಂಭ, ಅಂತ್ಯಕ್ರಿಯೆ ಸೇರಿದಂತೆ ಇತರೆ ನಿರ್ಬಂಧಗಳು ಎಂದಿನಂತೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.