ಇಂದಿನಿಂದ ಅನ್‌ಲಾಕ್‌ : ಎಚ್ಚರ ತಪ್ಪಿದ್ರೆ ಅಪಾಯ

Team Udayavani, Jun 28, 2021, 10:27 PM IST

28-17

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಸರ್ಕಾರ ಈಗಾಗಲೇ ಅನ್‌ಲಾಕ್‌ ಘೋಷಣೆ ಮಾಡಿದೆ. ಸೋಮವಾರದಿಂದ (ಜೂ.28) ಜಿಲ್ಲೆ ಸಂಪೂರ್ಣ ಅನ್‌ಲಾಕ್‌ ಆಗಲಿದೆ. ಲಾಕ್‌ಡೌನ್‌ ನಿಂದ ಕಾರ್ಯಚಟುವಟಿಕೆ ಇಲ್ಲದೇ ಬೇಸತ್ತು ಕುಳಿತಿದ್ದ ಜನರಲ್ಲಿ ಮುಖದಲ್ಲಿ ಮಂದಹಾಸ ಮೂಡಿಸಿದ್ದು, ಜನರು ಎಚ್ಚರ ತಪ್ಪಿದ್ದರೆ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

ಕೊರೊನಾ ಪಾಸಿಟಿವಿಟಿ ರೇಟ್‌ನಲ್ಲಿ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನವನ್ನು ಪಡೆದುಕೊಂಡು ಇಡೀ ರಾಜ್ಯದ ಗಮನ ಸೆಳೆದಿತ್ತು. ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಜಿಲ್ಲೆಗೆ ಭೇಟಿ ನೀಡಿ ಕೊರೊನಾ ಸೆಂಟರ್‌ಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಅಧಿಕಾರಿಗಳ ಸಭೆ ನಡೆಸಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಜಿಲ್ಲಾಡಳಿತ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದ ಸದ್ಯ ಜಿಲ್ಲೆಯಲ್ಲಿ ಸೋಂಕು ಇಳಿಮುಖಗೊಂಡು ರಾಜ್ಯ ಸರ್ಕಾರ ಜು.5ರ ವರೆಗೂ ಅನ್‌ಲಾಕ್‌ ಘೋಷಣೆ ಮಾಡಿದೆ. ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂಗಳಿಗೆ ಮಾತ್ರ ಜಿಲ್ಲೆಯನ್ನು ಸೀಮಿತಗೊಳಿಸಲಾಗಿದೆ. ಕಳೆದ ಮೂರು ತಿಂಗಳಿಂದ ಜಿಲ್ಲೆಯಲ್ಲಿ ಸ್ತಬ್ಧವಾಗಿದ್ದ ಎಲ್ಲಾ ಚಟುವಟಿಕೆಗಳು ಪುನರ್‌ ಆರಂಭಗೊಳ್ಳಲಿದೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಕೆಲವೊಂದು ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಚಟುವಟಿಕೆಗಳು ಆರಂಭಗೊಳ್ಳಲಿವೆ. ಜನರು ಮತ್ತೆ ಸಹಜ ಸ್ಥಿತಿಗೆ ಮರಳಲಿದ್ದಾರೆ. ಜನರ ಜೀವನ ಶೈಲಿ ಸಹಜ ಸ್ಥಿತಿಗೆ ಮರಳುವುದರಿಂದ ಗ್ರಾಮೀಣ ಪ್ರದೇಶ ಸೇರಿದಂತೆ ನಗರ ಪ್ರದೇಶಗಳಲ್ಲೂ ಜನಸಂಚಾರ, ವಾಹನ ಸಂಚಾರ, ವ್ಯಾಪಾರ- ವಹಿವಾಟು ಸೇರಿದಂತೆ ಇತರೆ ಚಟುವಟಿಕೆಗಳು ಹೆಚ್ಚಳಗೊಳ್ಳಲಿವೆ. ಇದರಿಂದ ಜಿಲ್ಲೆ ಸಹಜ ಸ್ಥಿತಿಯತ್ತ ಮರಳಿದರೂ ಜನರು ಎಚ್ಚರ ತಪ್ಪಿದರೆ ಮತ್ತೆ ಸಮಸ್ಯೆ ಕಟ್ಟಿಟ್ಟ ಬುತ್ತಿಯಾಗಿದೆ. ಜಿಲ್ಲೆಯಲ್ಲಿ ಸ್ವತ್ಛಂದವಾಗಿ ಜೀವನ ನಡೆಸುತ್ತಿದ್ದ ಜನರನ್ನು ಕಳೆದ 2 ವರ್ಷಗಳಿಂದ ಕಣ್ಣಿಗೆ ಕಾಣದ ಕೊರೊನಾ ಬದುಕನ್ನು ಹಿಂಡಿ ಹಿಪ್ಪೆ ಮಾಡಿದೆ. ಜಿಲ್ಲೆಯಲ್ಲಿ ಸಾಕಷ್ಟು ಸಾವು- ನೋವುಗಳು ಸಂಭವಿಸಿವೆ. ಕುಟುಂಬಗಳ ಆಧಾರಸ್ತಂಭಗಳನ್ನೇ ಕಳೆದುಕೊಂಡಿದ್ದಾರೆ.

ಜನರು ಆರ್ಥಿಕವಾಗಿ ಜರ್ಝರಿತರಾಗಿದ್ದಾರೆ. ಉದ್ಯೋಗ ಕಳೆದುಕೊಂಡಿದ್ದಾರೆ. ಅದೆಷ್ಟೋ ಜನರು ಹೊತ್ತಿನ ಊಟಕ್ಕೂ ಪರದಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆಯ ನಿರಂತರ ಪರಿಶ್ರಮದಿಂದ ಸದ್ಯ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಸೋಮವಾರದಿಂದ ಜಿಲ್ಲೆಯಲ್ಲಿ ಅನ್‌ಲಾಕ್‌ ನಿಯಮಗಳು ಜಾರಿಯಾಗಲಿವೆ.

ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ಕಡಿಮೆಯಾಗಿದೆ. ಸೋಂಕು ಸಂಪೂರ್ಣ ನಾಶವಾಗಿಲ್ಲ, ಆದ್ದರಿಂದ ಅನ್‌ಲಾಕ್‌ ಆಗಿದೆ ಎಂದು ಜನರು ಮೈಮರೆಯಬಾರದು. ಜನಜಂಗುಳಿ ಸೇರಬಾರದು. ಸರ್ಕಾರ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾ ಗಿ ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಜನರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.