ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

Team Udayavani, Apr 28, 2021, 9:27 PM IST

28-16

ಚಿಕ್ಕಮಗಳೂರು: ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಸಂಸದರು ಹಾಗೂ ಶಾಸಕರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಕೋವಿಡ್‌ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯ ಜನಪ್ರತಿನಿ  ಧಿಗಳು ಹಾಗೂ ಅ ಧಿಕಾರಿಗಳೊಂದಿಗೆ ಸ್ಕೆಪ್‌ಆ್ಯಪ್‌ ನಲ್ಲಿ ಸಭೆ ನಡೆಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಬೆಂಗಳೂರು ಹಾಗೂ ಹೊರ ಜಿಲ್ಲೆಗಳಿಂದ ನಮ್ಮ ಜಿಲ್ಲೆಗೆ ಬರುತ್ತಿರುವವರಿಂದ ಕೋವಿಡ್‌ ಪ್ರಕರಣಗಳು ಜಾಸ್ತಿಯಾಗುತ್ತಿದೆ ಎಂದು ದೂರುಗಳು ಬರುತ್ತಿವೆ. ಹೊರ ಜಿಲ್ಲೆ ಹಾಗೂ ಬೆಂಗಳೂರಿನಿಂದ ಬರುವವರಿಗೆ ಕೋವಿಡ್‌ ಟೆಸ್ಟ್‌ ಕಡ್ಡಾಯ ಮಾಡಿ ಅವರನ್ನು ಮನೆಯಲ್ಲೇ ಕ್ವಾರಂಟೈನ್‌ ಮಾಡುವಂತೆ ತಿಳಿಸಿದ ಅವರು, ಆರ್‌.ಟಿ.ಪಿ.ಸಿ.ಆರ್‌ ಟೆಸ್ಟ್‌ನ ವರದಿ ಬರುವುದು ತಡವಾಗುತ್ತಿದ್ದು, ಬೇಗ ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗ ಪಡಿಸಿರುವ ದರಕ್ಕಿಂತ ಹೆಚ್ಚು ಹಣವನ್ನು ರೋಗಿಗಳಿಂದ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಇದಕ್ಕೆ ಕಡಿವಾಣ ಹಾಕಿ ಸರ್ಕಾರ ನಿಗ ಪಡಿಸಿರುವ ದರದಲ್ಲಿಯೇ ಚಿಕಿತ್ಸೆ ನೀಡುವಂತೆ ಸೂಚಿಸಬೇಕು ಎಂದು ಜಿಲ್ಲಾ ಧಿಕಾರಿಗೆ ತಿಳಿಸಿದರು. ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ. ಪ್ರಾಣೇಶ್‌ ಮಾತನಾಡಿ, ಜನರಲ್ಲಿ ಕೋವಿಡ್‌ ಕುರಿತು ಹೆಚ್ಚಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಲ್ಲದೇ, ಅವರಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸವಾಗಬೇಕು. ಜನರು ಕೂಡ ಜಾಗೃತರಾಗಿ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌.ಜೀವರಾಜ್‌ ಮಾತನಾಡಿ, ಬೆಂಗಳೂರಿನಿಂದ ಜನರು ಅವರವರ ಊರುಗಳಿಗೆ ತೆರಳುತ್ತಿದ್ದಾರೆ. ಅದೇ ರೀತಿ ಜಿಲ್ಲೆಗೂ ಕೂಡ ಜನರು ಬರುತ್ತಿರುವುದರಿಂದ ಅವರ ಮೇಲೆ ನಿಗಾ ವಹಿಸಿ ಆರ್‌.ಟಿ.ಪಿ.ಸಿ.ಆರ್‌. ಟೆಸ್ಟ್‌ ಮಾಡಿಸಬೇಕು. ಅವರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಬೇಕೆಂದು ಹೇಳಿದರು.

ಶಾಸಕ ಸಿ.ಟಿ. ರವಿ ಮಾತನಾಡಿ, ಜಿಲ್ಲೆಯ ಜನತೆಯಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸಲು ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದಾಗ ಆಶಾ ಕಾರ್ಯಕರ್ತೆಯರು, ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿಗಳು, ಆರೋಗ್ಯಾ ಧಿಕಾರಿ ಸಿಬ್ಬಂದಿಗಳ ಸಹಕಾರದೊಂದಿಗೆ ಮನೆ- ಮನೆಗೆ ತೆರಳಿ ಮಾಹಿತಿ ಪಡೆದು ಚಿಕಿತ್ಸೆ ನೀಡಬೇಕು. ಇದರಿಂದ ಆಸ್ಪತ್ರೆಗಳ ಮೇಲೆ ಬೀಳುವಂತಹ ಒತ್ತಡ ಕಡಿಮೆ ಮಾಡಬಹುದು ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಜಾತ್ರೆ, ರಥೋತ್ಸವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು. ಸರ್ಕಾರ ಈಗಾಗಲೇ ಐ.ಟಿ.ಬಿ.ಟಿ ಕಂಪನಿಗಳಿಗೆ ಮನೆಯಲ್ಲೇ ಕೆಲಸ ಮಾಡುವಂತೆ ಸೂಚಿಸಿದೆ. ಐ.ಟಿ.ಬಿ.ಟಿ ಕಂಪನಿಯ ಉದ್ಯೋಗಿಗಳು ಈಗಾಗಲೇ ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿರುವ ಹೋಂಸ್ಟೇಗಳ ರೂಂಗಳಿಗೆ ನೋಂದಣಿ ಮಾಡಿಕೊಂಡಿದ್ದು, ಇಲ್ಲಿಗೆ ಹೆಚ್ಚಾಗಿ ಬರುತ್ತಿದ್ದಾರೆ. ಅವರ ಮೇಲೆ ನಿಗಾ ಇರಿಸಬೇಕು. ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಅನುವಾಗುವಂತೆ ಜಿಲ್ಲಾಡಳಿತ ನೋಡಿಕೊಳ್ಳಬೇಕು ಎಂದರು. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ವೈದ್ಯಾ ಧಿಕಾರಿಗಳ ಕೊರತೆ ಇದ್ದು, ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳುವಂತೆ ಹಾಗೂ ಕೊಪ್ಪದಲ್ಲಿ ಆಂಬ್ಯುಲೆನ್ಸ್‌ ಕೊರತೆ ಇದ್ದು, ಕೊಪ್ಪಕ್ಕೆ ಆಂಬ್ಯುಲೆನ್ಸ್‌ ಕೊಡುವಂತೆ, ಕೊಪ್ಪ ನರಸಿಂಹರಾಜಪುರದ ಜನರಿಗೆ ಚಿಕ್ಕಮಗಳೂರಿಗಿಂತ ಶಿವಮೊಗ್ಗ ಹತ್ತಿರದಲ್ಲಿದ್ದು, ಶಿವಮೊಗ್ಗಕ್ಕೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲಾ ಧಿಕಾರಿಗಳು ಶಿವಮೊಗ್ಗದ ಜಿಲ್ಲಾಡಳಿತಕ್ಕೆ ಪತ್ರ ಬರೆಯಬೇಕೆಂದು ಹೇಳಿದರು.

ಜಿಲ್ಲಾ ಧಿಕಾರಿ ಕೆ.ಎನ್‌.ರಮೇಶ್‌ ಕೋವಿಡ್‌ ಸೋಂಕಿಗೆ ಸಂಬಂ ಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅ ಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.