ಚಿಕ್ಕಮಗಳೂರು:ದುಬಾರಿ ಬೆಲೆಯ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿ ಪೊಲೀಸ್ ಬಲೆಗೆ
Team Udayavani, Jan 29, 2023, 2:16 PM IST
ಚಿಕ್ಕಮಗಳೂರು : ದುಬಾರಿ ಬೆಲೆಯ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಜರ್ತಾಬ್ ಬಂಧಿತ ಆರೋಪಿಯಾಗಿದ್ದು, ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು 1 ಲಕ್ಷ ರೂಪಾಯಿಗೂ ಅಧಿಕ ಬೆಲೆ ಬಾಳುವ 12 ಗ್ರಾಂ ಎಂಡಿಎಂಎ ಸಹಿತ ಚಿಕ್ಕಮಗಳೂರು ನಗರದ ಪವಿತ್ರ ವನ ಬಳಿ ಬಂಧಿಸಲಾಗಿದೆ.
ಕಾರಿನಲ್ಲಿ ಇಟ್ಟುಕೊಂಡು ಸಾರ್ವಜನಿಕ ಪ್ರದೇಶದಲ್ಲಿ ಮಾರಾಟಕ್ಕೆ ಯತ್ನ ಮಾಡುತ್ತಿದ್ದ ವೇಳೆ ಕಾರ್ಯಾಚಣೆ ನಡೆಸಿದ ಚಿಕ್ಕಮಗಳೂರು ನಗರದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಮತ್ತೊಬ್ಬ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದು, ಚಿಕ್ಕಮಗಳೂರು ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.